ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Nepal floods: ನೇಪಾಳ ಜಲಸ್ಫೋಟ; ಕಲಬುರಗಿಯ ಇಬ್ಬರು ಕನ್ನಡಿಗರ ರಕ್ಷಣೆ

Nepal Flood Live: ಭೀಕರ ಪ್ರವಾಹದಲ್ಲಿ ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಗುರುವಾರ ಮಾಹಿತಿ ನೀಡಿದ್ದಾರೆ. ಕಾಠ್ಮಂಡುವಿನಲ್ಲಿ ಮಾತನಾಡಿದ ಖನಾಲ್, ನೇಪಾಳದಲ್ಲಿ ಸಂಭವಿಸಿದ ದಿಢೀರ್‌ ಪ್ರವಾಹದಿಂದಾಗಿ ಕ್ಷಣಾರ್ಧದಲ್ಲಿ ಸಾಲು ಸಾಲು ನಗರಗಳೇ ಕೊಚ್ಚಿಹೋಗಿವೆ ಎಂದರು.

ನೇಪಾಳ ಜಲಸ್ಫೋಟ; ಕಲಬುರಗಿಯ ಇಬ್ಬರು ಕನ್ನಡಿಗರ ರಕ್ಷಣೆ

ನೇಪಾಳದಲ್ಲಿ ರಕ್ಷಣೆ ಮಾಡಲ್ಪಟ್ಟ ಕಲಬುರಗಿ ಮೂಲದ ಕನ್ನಡಿಗರು. -

Abhilash BC
Abhilash BC Aug 27, 2026 11:28 AM

ಕಾಠ್ಮಂಡು, ಆ.27: ನೇಪಾಳದ ರುಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಜಳ ಪ್ರವಾಹದಲ್ಲಿ ನಾಪತ್ತೆಯಾದವರ ಪತ್ತೆಗೆ ನಡೆಯುತ್ತಿರುವ ರಕ್ಷಣಾ ಕಾರ್ಯಗಳ ಮಧ್ಯೆ, ಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಕರ್ನಾಟಕದ ಕಲಬುರಗಿ ಜಿಲ್ಲೆಯ ಇಬ್ಬರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಒಟ್ಟಾರೆಯಾಗಿ ಈವರೆಗೆ 21 ಭಾರತೀಯರುನ್ನು ರಕ್ಷಣೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮಲ್ಲಿನಾಥ್ ಕೊಲಕುಂದಿ ಹಾಗೂ ಸಂಗಮೇಶ್ ಕನಕಪುರ ಅವರು ನೇಪಾಳ ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ಇವರೊಂದಿಗೆ ಹೈದರಾಬಾದ್‌ನ 23 ಮಂದಿ ಸೇರಿ ಒಟ್ಟು 25 ಜನರು ನೇಪಾಳಕ್ಕೆ ಪ್ರವಾಸ ತೆರಳಿದ್ದರು. ಪ್ರವಾಹದಲ್ಲಿ ಇಬ್ಬರು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ಕರ್ನಾಟಕದ ವಿಪತ್ತು ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಇಬ್ಬರನ್ನೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಮಲ್ಲಿನಾಥ್ ಕೊಲಕುಂದಿ ಹಾಗೂ ಸಂಗಮೇಶ್ ಕನಕಪುರ ಅವರು ಸುರಕ್ಷಿತವಾಗಿದ್ದು, ಅವರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ನೇಪಾಳದಿಂದ ಇಬ್ಬರನ್ನೂ ದೆಹಲಿಗೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ವ್ಯವಸ್ಥೆ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ವ್ಯಕ್ತಿಗಳನ್ನು ನೇಪಾಳದಿಂದ ದೆಹಲಿಗೆ ಕರೆತರಲು ಈಗ ವ್ಯವಸ್ಥೆ ಮಾಡಲಾಗುತ್ತಿದೆ. ಅವರಿಗೆ ರಾಷ್ಟ್ರ ರಾಜಧಾನಿಯಲ್ಲಿರುವ ಕರ್ನಾಟಕ ಭವನದಲ್ಲಿ ವಸತಿ ಒದಗಿಸಲಾಗುವುದು ಎಂದು ತಿಳಿದುಬಂದಿದೆ.

nepal Floods (1)

ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ತಕ್ಷಣದ ಕ್ರಮಕ್ಕೆ ಮುಂದಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ನಾಗರಿಕರ ಸಂಪೂರ್ಣ ಮಾಹಿತಿಯನ್ನು ಕ್ರೋಡೀಕರಿಸಲು ಸರ್ಕಾರವು ಅಧಿಕೃತ ಗೂಗಲ್ ಫಾರ್ಮ್ ಲಿಂಕ್ ಬಿಡುಗಡೆ ಮಾಡಿದೆ.

ಕೈಲಾಶ ಮಾನಸಸರೋವರ ಯಾತ್ರೆಗೆ ತೆರಳಿದವರು ಅಥವಾ ಪ್ರವಾಸಕ್ಕಾಗಿ ನೇಪಾಳ ಹಾಗೂ ಟಿಬೆಟ್ ಗಡಿ ಭಾಗಗಳಿಗೆ ತೆರಳಿ ಪ್ರವಾಹದ ಸಿಲುಕಿಕೊಂಡಿರುವ ಪ್ರವಾಸಿಗರು, ಅವರ ಸಂಬಂಧಿಕರು ಹಾಗೂ ಪ್ರವಾಸ ಆಯೋಜಿಸಿದವರು ಈ ಫಾರ್ಮ್ ಮೂಲಕ ತಕ್ಷಣವೇ ವಿವರಗಳನ್ನು ಹಂಚಿಕೊಳ್ಳುವಂತೆ ಕೋರಲಾಗಿದೆ. ಸಂತ್ರಸ್ತರ ಹೆಸರು, ಸಂಪರ್ಕ ಸಂಖ್ಯೆ, ಪ್ರಸ್ತುತ ಇರುವ ಸ್ಥಳ, ಪಾಸ್‌ಪೋರ್ಟ್ ವಿವರಗಳು ಮತ್ತು ತುರ್ತು ಸಂಪರ್ಕ ಸಂಖ್ಯೆಗಳನ್ನು ಈ ಫಾರ್ಮ್‌ನಲ್ಲಿ ಭರ್ತಿ ಮಾಡಬಹುದಾಗಿದೆ.



ಸಂಗ್ರಹಿಸಲಾಗುವ ಮಾಹಿತಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಬೀಜಿಂಗ್‌ನಲ್ಲಿರುವ (ಚೀನಾ) ಭಾರತೀಯ ರಾಯಭಾರ ಕಚೇರಿಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ಇದರ ಮೂಲಕ ಸಂಕಷ್ಟದಲ್ಲಿರುವ ಕನ್ನಡಿಗರನ್ನು ಪತ್ತೆ ಹಚ್ಚಿ, ಸೂಕ್ತ ರಕ್ಷಣೆ, ವೈದ್ಯಕೀಯ ನೆರವು ಹಾಗೂ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಕೋಶ ಯೋಜಿಸಿದೆ.

ತುರ್ತು ಸಹಾಯವಾಣಿ ಸಹಾಯವಾಣಿ ಸಂಖ್ಯೆಗಳು: 1070 / 080-22253707

ಇ-ಮೇಲ್ ವಿಳಾಸ: [email protected]

ಕನಿಷ್ಠ 300 ಭಾರತೀಯರು ನಾಪತ್ತೆ

ಭೀಕರ ಪ್ರವಾಹದಲ್ಲಿ ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಗುರುವಾರ ಮಾಹಿತಿ ನೀಡಿದ್ದಾರೆ. ಕಾಠ್ಮಂಡುವಿನಲ್ಲಿ ಮಾತನಾಡಿದ ಖನಾಲ್, ನೇಪಾಳದಲ್ಲಿ ಸಂಭವಿಸಿದ ದಿಢೀರ್‌ ಪ್ರವಾಹದಿಂದಾಗಿ ಕ್ಷಣಾರ್ಧದಲ್ಲಿ ಸಾಲು ಸಾಲು ನಗರಗಳೇ ಕೊಚ್ಚಿಹೋಗಿವೆ. ರಸುವಾ ಪ್ರದೇಶದಲ್ಲಿ ಸಂಭವಿಸಿದ ದುರಂತದಲ್ಲಿ ಈವರೆಗೆ 160ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, ಸಾವಿರಾರು ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದರು.