ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Vande Bharat Train: ಬೆಂಗಳೂರಿನಿಂದ ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲು

ಸುಮಾರು 1,136 ಕಿಮೀ ದೂರವನ್ನು ಈ ರೈಲು 23ರಿಂದ 24 ಗಂಟೆಗಳ ಅವಧಿಯಲ್ಲಿ ಸಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯದಿಂದ ಪ್ರಯಾಣ ಸಮಯವು ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.

ವಂದೇ ಭಾರತ್‌ ರೈಲು

ಬೆಂಗಳೂರು, ಏ.11: ದೇಶದ ಪ್ರಮುಖ ನಗರಗಳಾದ ಬೆಂಗಳೂರು (Bengaluru) ಮತ್ತು ಮುಂಬೈ (Mumbai) ನಡುವಿನ ರೈಲು ಸಂಪರ್ಕಕ್ಕೆ ಮಹತ್ವದ ಉತ್ತೇಜನ ದೊರೆತಿದ್ದು, ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು (Vande Bharath Sleeper train) ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಚಲಿಸಲಿದೆ.

ಈ ಹಿಂದೆ ಈ ವಿಷಯವನ್ನು ಮುನ್ನೆಲೆಗೆ ತಂದಿದ್ದ ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಅವರ ನಿರಂತರ ಪ್ರಯತ್ನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 2 ರಂದು ನೈಋತ್ಯ ರೈಲ್ವೆ (SWR) ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಮೋಹನ್ ವಂದೇ ಭಾರತ್ ಸ್ಲೀಪರ್ ರೈಲನ್ನು ಪರಿಚಯಿಸಲು ಒತ್ತಾಯಿಸಿದ್ದರು. ಅಲ್ಲದೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್​ ಅನ್ನು ಮೂಲ ಅಥವಾ ಮುಕ್ತಾಯ ನಿಲ್ದಾಣವೆಂದು ಸೂಚಿಸಿದ್ದರು.

ಪ್ರಸ್ತುತ ಈ ಮಾರ್ಗದಲ್ಲಿ ಡಜನ್‌ಗಟ್ಟಲೆ ರೈಲುಗಳು ಸಂಚರಿಸುತ್ತಿದ್ದರೂ, ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ನೇರ ಸಂಪರ್ಕ ಕಲ್ಪಿಸುತ್ತಿದೆ. ಸುಮಾರು 1,136 ಕಿಮೀ ದೂರವನ್ನು ಈ ರೈಲು 23ರಿಂದ 24 ಗಂಟೆಗಳ ಅವಧಿಯಲ್ಲಿ ಸಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯದಿಂದ ಪ್ರಯಾಣ ಸಮಯವು ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.

Vande Bharat Express: ರಾಜ್ಯದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ; ಮಾ.15ರಿಂದ ಜಾರಿ

ಹರೀಶ್‌ ಕೇರ

View all posts by this author