ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು (Pocso case) ವಿಚಾರಣೆಗೆ ಪರಿಗಣಿಸಿ ಎರಡನೇ ಬಾರಿ ಅಧೀನ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಸಲ್ಲಿಸಿರುವ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka high court) ಶುಕ್ರವಾರ ಮೌಖಿಕವಾಗಿ ಹೇಳಿದೆ.
ಈ ಕುರಿತು ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠ ಹೀಗೆ ನುಡಿಯಿತು. ಯಡಿಯೂರಪ್ಪ ಅವರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಸಂತ್ರಸ್ತೆ ಮತ್ತು ಕೃತ್ಯ ನಡೆದ ಸ್ಥಳದಲ್ಲಿ ಹಾಜರಿದ್ದವರ ಹೇಳಿಕೆ ಮತ್ತು ಪ್ರತಿ ಹೇಳಿಕೆಯನ್ನು ಅಧೀನ ನ್ಯಾಯಾಲಯ ಪರಿಗಣಿಸಬೇಕಿತ್ತು ಎಂಬ ಅಂಶದ ಸುತ್ತ ಮಾತ್ರ ವಾದ ಮಂಡಿಸಿದ್ದಾರೆ. ಇತರೆ ವಿಚಾರಗಳ ಕುರಿತು ಅವರು ವಾದಿಸಿಲ್ಲ. ಹೀಗಿರುವಾಗ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಕುರಿತು ಉತ್ತರಿಸಲು ಸಿ.ವಿ.ನಾಗೇಶ್ ಅವರನ್ನು ಕರೆತನ್ನಿ ಎಂದು ವಿಚಾರಣೆ ವೇಳೆ ಯಡಿಯೂರಪ್ಪ ಪರ ಹಾಜರಿದ್ದ ವಕೀಲೆ ಸ್ವಾಮಿನಿ ಗಣೇಶ್ ಅವರಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ಅ.23ಕ್ಕೆ ಮುಂದೂಡಿತು.
ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿಲ್ಲ
ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬುದನ್ನು ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿಲ್ಲ. ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಆಧರಿಸಿ ವಿಚಾರಣಾ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡಿರುವುದು ಕಾನೂನುಬಾಹಿರ ಎಂದು ಗುರುವಾರ ನಡೆದ ವಿಚಾರಣೆಯಲ್ಲಿ ವಕೀಲ ನಾಗೇಶ್ ಅವರು ಹೈಕೋರ್ಟ್ ವಾದ ಮಂಡಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್ ,ತಮ್ಮ ತಪ್ಪನ್ನು ವಿಡಿಯೋದಲ್ಲಿ ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಆದರೆ, ಆ ಮಗು ನನ್ನ ಮೊಮ್ಮಗಳಿದ್ದಂತೆ ಎಂಬ ಉದ್ದೇಶದಿಂದ ಚೆಕ್ ಮಾಡಿದೆ ಎಂದು ಅವರು ಹೇಳಿದ್ದಾರೆ. ಹಳೆಯ ಪೋಕ್ಸೊ ಕೇಸ್ ಸಂಬಂಧ ನ್ಯಾಯ ಕೊಡಿಸುವಂತೆ ಬಂದಿದ್ದರು. ಆಗ ಮಹಿಳೆ ತನ್ನ ಮಗಳ ಬಗ್ಗೆ ಬೇಕಿದ್ದರೆ ಚೆಕ್ ಮಾಡಿಕೊಳ್ಳಿ ಎನ್ನುತ್ತಿದ್ದರು. ಅದನ್ನೇ ಚೆಕ್ ಮಾಡಿದೆ ಎಂದು ಬಿಎಸ್ ವೈ ಹೇಳಿದ್ದಾರೆ’ ಎಂದು ತಿಳಿಸಿದರು. ಅರ್ಜಿದಾರರು ಲೈಂಗಿಕ ದೌರ್ಜನ್ಯವನ್ನು ಒಪ್ಪಿಕೊಂಡಿಲ್ಲ. ಪ್ರಾಸಿಕ್ಯೂಷನ್ ವಾದದಲ್ಲಿ ಹುರುಳಿಲ್ಲ ಎಂದರು.
ಇದನ್ನೂ ಓದಿ: POCSO case: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿ ಮಾಡಿದ್ದ ಆರೋಪಿ ಸಫ್ವಾನ್ ಪೋಕ್ಸೋ ಕಾಯ್ದೆಯಡಿ ಆರೆಸ್ಟ್
ಇಡಿ ದಾಳಿ, ಶಾಸಕ ವೀರೇಂದ್ರ ಪಪ್ಪಿ ಲಾಕರ್‌ನಿಂದ 44 ಕೆಜಿ ಚಿನ್ನ ವಶ
ಬೆಂಗಳೂರು: ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ (Betting Case) ಬಂಧಿತರಾಗಿರುವ ಚಿತ್ರದುರ್ಗ (Chitradurga) ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Pappi) ಭಾರಿ ಅಕ್ರಮ ಗಳಿಕೆಯ ಬಂಡವಾಳ ಬಯಲಾಗುತ್ತಲೇ ಇದೆ. ಮತ್ತೆ ದಾಳಿ ಎಸಗಿರುವ ಇಡಿ (ED raid) ಅಧಿಕಾರಿಗಳೇ ಇವರ ಸಂಗ್ರಹದ ಚಿನ್ನದ ಪ್ರಮಾಣ ಕಂಡು ಶಾಕ್ ಆಗಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಆ ಮೂಲಕ ಈವರೆಗೆ 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಅಕ್ರಮ ಆನ್ಲೈನ್ ಗೇಮ್ ಕೇಸ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿನ್ನೆ ಹಲವೆಡೆ ಶೋಧ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬ್ಯಾಂಕ್ನ 2 ಲಾಕರ್ನಲ್ಲಿದ್ದ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಇದಕ್ಕೂ ಮುನ್ನ ಇತ್ತೀಚೆಗೆ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಮತ್ತು ಕ್ಯಾಸಿನೋಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಂಶಯದಡಿ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ ನಡೆದಿತ್ತು. ಸುಮಾರು 30 ಕಡೆ ನಡೆದ ದಾಳಿಯಲ್ಲಿ 12 ಕೋಟಿ ರೂ ನಗದು, 6 ಕೋಟಿ ರೂ ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.