ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Drinking Water: ಕೆಆರ್‌ಎಸ್‌ನಲ್ಲಿ 27 ಟಿಎಂಸಿ ಅಡಿ ನೀರು, ಈ ಬೇಸಿಗೆಯಲ್ಲಿ ಬೆಂಗಳೂರಿಗೆ ಜಲಕ್ಷಾಮ ಇಲ್ಲ

ಬೆಂಗಳೂರಿಗೆ (Bengaluru) ಮುಖ್ಯ ನೀರಿನ ಮೂಲವಾದ ಕೆಆರ್‌ಎಸ್ ಅಣೆಕಟ್ಟಿನಲ್ಲಿ 6 ಟಿಎಂಸಿ ಅಡಿ ನೀರಿನ ಅವಶ್ಯಕತೆಗೂ ಹೆಚ್ಚಾಗಿ 27 ಟಿಎಂಸಿ ಅಡಿ ನೀರು ಲಭ್ಯವಿದೆ. ಹೀಗಾಗಿ ಈ ಬಾರಿಯ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ.

ಕೆಆರ್‌ಎಸ್‌ನಲ್ಲಿ 27 ಟಿಎಂಸಿ ನೀರು, ಈ ಸಲ ಬೆಂಗಳೂರಿಗೆ ಜಲಕ್ಷಾಮ ಇಲ್ಲ

ಕೆಆರ್‌ಎಸ್‌ ಅಣೆಕಟ್ಟು

ಹರೀಶ್‌ ಕೇರ ಹರೀಶ್‌ ಕೇರ Apr 3, 2025 7:08 AM

ಬೆಂಗಳೂರು: ಕೆಆರ್‌ಎಸ್ ಅಣೆಕಟ್ಟಿನಲ್ಲಿ (KRS dam) 27 ಟಿಎಂಸಿ ಅಡಿ ನೀರು ಲಭ್ಯವಿದ್ದು, ಈ ಬಾರಿಯ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು (BWSSB) ತಿಳಿಸಿದ್ದಾರೆ. ಈ ಬಾರಿಯ ಬೇಸಿಗೆಯಲ್ಲಿ ಕುಡಿಯುವ ನೀರಿನ (Drinking Water) ಬಗ್ಗೆ ಬೆಂಗಳೂರಿಗರು ಚಿಂತಿಸಬೇಕಾಗಿಲ್ಲ. ಏಕೆಂದರೆ ಬೆಂಗಳೂರಿಗೆ (Bengaluru) ಮುಖ್ಯ ನೀರಿನ ಮೂಲವಾದ ಕೆಆರ್‌ಎಸ್ ಅಣೆಕಟ್ಟಿನಲ್ಲಿ 6 ಟಿಎಂಸಿ ಅಡಿ ನೀರಿನ ಅವಶ್ಯಕತೆಗೂ ಹೆಚ್ಚಾಗಿ 27 ಟಿಎಂಸಿ ಅಡಿ ನೀರು ಲಭ್ಯವಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 2024ರಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ದಿನಕ್ಕೆ 775 ಮಿಲಿಯನ್ ಲೀಟರ್ (ಎಂಎಲ್‌ಡಿ) ನೀರನ್ನು ಪೂರೈಸಿದೆ. ನಗರದ ಹೊರ ಪ್ರದೇಶಗಳಲ್ಲಿ ಮಾತ್ರ ನೀರು ಸರಬರಾಜಿನಲ್ಲಿ ಕೆಲವು ಸಮಸ್ಯೆಗಳಿದ್ದು, ಪೈಪ್‌ಲೈನ್ ಸಂಪರ್ಕ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ. ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಬಿಡಬ್ಲ್ಯೂಎಸ್‌ಎಸ್‌ಬಿಗೆ ಒಟ್ಟು 35 ಟಿಎಂಸಿಎಫ್‌ಟಿ ನೀಡಲಾಗುತ್ತಿದ್ದು, ಕಬಿನಿಯಲ್ಲಿ 29 ಟಿಎಂಸಿಎಫ್‌ಟಿ ಸಂಗ್ರಹವಿದೆ. ಕಳೆದ ವರ್ಷ ಏಪ್ರಿಲ್ 1 ರಂದು, ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ 13.42 ಟಿಎಂಸಿಎಫ್‌ಟಿ ಮತ್ತು ಕಬಿನಿಯಲ್ಲಿ 9.39 ಟಿಎಂಸಿಎಫ್‌ಟಿ ಇತ್ತು. ಈ ಬಾರಿ ಮಳೆ ಉತ್ತಮವಾಗಿದ್ದ ಹಿನ್ನೆಲೆಯಲ್ಲಿ ನೀರು ಸಂಗ್ರಹ ಕೂಡ ಹೆಚ್ಚಿದೆ.

ಪ್ರಸ್ತುತ ಲಭ್ಯವಿರುವ ನೀರಿನ ಸಂಗ್ರಹವು ಎರಡು ಋತುಗಳವರೆಗೂ ಪೂರೈಕೆ ಮಾಡಬಹುದು. ಆದರೆ, ಅಂತರ್ಜಲ ಕುಸಿತವಾಗುತ್ತಿರುವುದು ಕಳವಳಕಾರಿ ವಿಚಾರವಾಗಿದೆ. ಮಹದೇವಪುರ ಮತ್ತು ವೈಟ್‌ಫೀಲ್ಡ್ ಪ್ರದೇಶಗಳಲ್ಲಿನ ಪರಿಸ್ಥಿತಿ ಕಳವಳ ತಂದಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಬೋರ್‌ವೆಲ್‌ಗಳ ಕೊರೆಯಲು ಅನುಮತಿಯನ್ನು ಸೀಮಿತಗೊಳಿಸಲಾಗಿದೆ.

ಬೆಂಗಳೂರು ಉತ್ತರ, ಮಹದೇವಪುರ ಮತ್ತು ವೈಟ್‌ಫೀಲ್ಡ್‌ನ 80 ವಾರ್ಡ್‌ಗಳಲ್ಲಿ ಅಂತರ್ಜಲ ಮಟ್ಟ ಅತ್ಯಂತ ಕಡಿಮೆಯಾಗಿದೆ. ಹೀಗಾಗಿ, ಬಿಡಬ್ಲ್ಯೂಎಸ್‌ಎಸ್‌ಬಿ 'ಸಂಚಾರಿ ಕಾವೇರಿ ನೀರು ಸರಬರಾಜು' ಯೋಜನೆಯನ್ನು ಪ್ರಾರಂಭಿಸಿದ್ದು, ಕೈಗೆಟುಕುವ ದರದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುತ್ತಿದೆ. ನಿರ್ಬಂಧಿತ ಪ್ರದೇಶಗಳಲ್ಲಿರುವ ಜನರು ಕುಡಿಯುವ ನೀರಿಗಾಗಿ ಕಾವೇರಿ ಸಂಪರ್ಕವನ್ನು ಪಡೆಯಬೇಕು ಅಥವಾ ಟ್ಯಾಂಕರ್ ನೀರು ಪೂರೈಕೆಗಾಗಿ ಬಿಡಬ್ಲ್ಯೂಎಸ್‌ಎಸ್‌ಬಿಯನ್ನು ಸಂಪರ್ಕಿಸಬೇಕು. ಅಕ್ರಮ ಬೋರ್‌ವೆಲ್‌ಗಳನ್ನು ಕೊರೆಯುವುದು ಕಂಡು ಬಂದಿದ್ದೇ ಆದರೆ ಎಫ್‌ಐಆರ್ ದಾಖಲಿಸಲಾಗುತ್ತದೆ.

ಇದನ್ನೂ ಓದಿ: DK Shivakumar: ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್