Grama Panchayat Election: ಇವಿಎಂಗೆ ಖೊಕ್, ಗ್ರಾಮ ಪಂಚಾಯತ್ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ 5 ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯತ್, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲೂ ಎಲೆಕ್ಟ್ರಾನಿಕ್ ಮತಯಂತ್ರ (EVM) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ತಿದ್ದುಪಡಿ ಮಸೂದೆ-2026’ಕ್ಕೆ ಸಂಪುಟ ಅನುಮೋದನೆ ನೀಡಿದೆ.
ಬ್ಯಾಲೆಟ್ ಪೇಪರ್ -
ಬೆಂಗಳೂರು, ಫೆ.06: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯನ್ನು (Grama Panchayat Election) ಬ್ಯಾಲೆಟ್ ಪೇಪರ್‌ನಲ್ಲಿ (Ballot Paper) ನಡೆಸಲು ರಾಜ್ಯ ಸಚಿವ ಸಂಪುಟ ಸಭೆ (Cabinet) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಂಚಾಯತ್ ಚುನಾವಣೆಯಲ್ಲೂ ಬ್ಯಾಲೆಟ್ ಪೇಪರ್ ಬಳಕೆ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಯಿತು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ 5 ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯತ್, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲೂ ಎಲೆಕ್ಟ್ರಾನಿಕ್ ಮತಯಂತ್ರ (EVM) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ತಿದ್ದುಪಡಿ ಮಸೂದೆ-2026’ಕ್ಕೆ ಸಂಪುಟ ಅನುಮೋದನೆ ನೀಡಿದೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಂಚಾಯತ್ ಚುನಾವಣೆಯಲ್ಲೂ ಬ್ಯಾಲೆಟ್ ಪೇಪರ್ ಬಳಕೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಬಳಿಕ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಯಿತು.
ಆಡಳಿತಾಧಿಕಾರಿಗಳ ನೇಮಕ
ಬಹುತೇಕ ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ.ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ.
ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮ ಗಾಂಧಿ ಹೆಸರಿಡ್ತೇವೆ: ಸಿಎಂ ಘೋಷಣೆ
ರಾಜ್ಯಕ್ಕೆ ಅನುದಾನ: ರೈಲ್ವೆ ಸಚಿವರಿಗೆ ಗೌಡರ ಅಭಿನಂದನೆ
ನವದೆಹಲಿ: ರಾಷ್ಟ್ರದ ಅಗತ್ಯಗಳಿಗೆ ಮೀರಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ ಹೆಚ್ಚು ಅನುದಾನ, ಯೋಜನೆಗಳನ್ನು ನೀಡಿರುವ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D.Deve Gowda) ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿಗಳು, 2026ರ ಬಜೆಟ್‌ನಲ್ಲಿ ಸುಸ್ಥಿರ ಸಾರಿಗೆ ಮತ್ತು ಆರ್ಥಿಕ ಬೆಳವಣಿಗೆಗಾಗಿ ಬೆಳವಣಿಗೆಯ ಕನೆಕ್ಟರ್‌ಗಳಾಗಿ ಸುಮಾರು 4,000 ಕಿ.ಮೀ. ಉದ್ದದ ಏಳು ಹೊಸ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಘೋಷಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಪೈಕಿ ಚೆನ್ನೈ-ಬೆಂಗಳೂರು-ಹೈದರಾಬಾದ್ (ಹೈದರಾಬಾದ್-ಚೆನ್ನೈ ಮತ್ತು ಚೆನ್ನೈ-ಬೆಂಗಳೂರು ವಿಭಾಗಗಳೊಂದಿಗೆ) ದಕ್ಷಿಣ ಭಾಗದಲ್ಲಿ ಹೈ-ಸ್ಪೀಡ್ ತ್ರಿಕೋನವನ್ನು ಸೃಷ್ಟಿಸಲಾಗುತ್ತಿದೆ. ಇದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳು ಮತ್ತು ಅವರ ಚಲನಶೀಲತೆಯ ಅಗತ್ಯಗಳನ್ನು ನೇರವಾಗಿ ಪೂರೈಸುತ್ತದೆ. ಕೇರಳ ಮತ್ತು ಪುದುಚೇರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಮಾಜಿ ಪ್ರಧಾನಿಗಳು ಹೇಳಿದ್ದಾರೆ.