ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Grading System: ಹಿಂದಿಗೆ ಗ್ರೇಡ್‌ ಬೇಡ, ಅಂಕ ಕೊಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್‌ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ಹೈಕೋರ್ಟ್ ನ್ಯಾಯಪೀಠ ಎಚ್ಚರಿಸಿದೆ.

ಹಿಂದಿಗೆ ಗ್ರೇಡ್‌ ಬೇಡ, ಅಂಕ ಕೊಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಕರ್ನಾಟಕ ಹೈಕೋರ್ಟ್ -

ಹರೀಶ್‌ ಕೇರ
ಹರೀಶ್‌ ಕೇರ Apr 16, 2026 11:33 AM

ಬೆಂಗಳೂರು, ಏ.16: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ತೃತೀಯ ಭಾಷೆಗಳಿಗೆ, ಮುಖ್ಯವಾಗಿ ಹಿಂದಿಗೆ, ಗ್ರೇಡ್ (Grading System) ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ (Karnataka high court) ಹಿನ್ನಡೆಯಾಗಿದೆ. ಹಿಂದಿ (Hindi) ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಮಹತ್ವದ ನಿರ್ದೇಶನ ನೀಡಿದೆ.

ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್‌ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಸಿದೆ.

Hindi Third Language: ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ನಿರ್ಧಾರ ಹೀಗೆ: ಕರಡು ಅಧಿಸೂಚನೆ

ವಿವಾದದ ಹಿನ್ನೆಲೆ

ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ತೃತೀಯ ಭಾಷೆ (ಹೆಚ್ಚಾಗಿ ಹಿಂದಿ, ಇತರ ಭಾಷೆಗಳು) ವಿಷಯಕ್ಕೆ ಸಂಬಂಧಿಸಿದಂತೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರಲು ಶಿಕ್ಷಣ ಇಲಾಖೆ ಆಸಕ್ತಿ ತೋರಿತ್ತು. ಇತ್ತೀಚೆಗೆ ಆ ಬಗ್ಗೆ ಅಧಿಕೃತ ಆದೇಶ ಘೋಷಣೆ ಮಾಡಿತ್ತು. ಪ್ರಥಮ ಮತ್ತು ದ್ವಿತೀಯ ಭಾಷೆಗಳಿಗೆ ನೀಡುವ ಪ್ರಾಮುಖ್ಯತೆಯನ್ನು ತೃತೀಯ ಭಾಷೆಗೆ ನೀಡದೆ, ಅದನ್ನು ಕೇವಲ ಅರ್ಹತಾ ವಿಷಯವನ್ನಾಗಿ ಪರಿವರ್ತಿಸಲು ಸರ್ಕಾರ ಮುಂದಾಗಿತ್ತು. ಇದು ಹಿಂದಿ ಭಾಷಾ ಶಿಕ್ಷಕರ ಸಂಘ ಮತ್ತು ಪೋಷಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

Third language: ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್:‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದವರಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್‌

ಈ ವಿವಾದವು ಕೇವಲ ಅಂಕಗಳಿಗೆ ಸೀಮಿತವಾಗದೆ, ಭಾಷಾ ನೀತಿಯ ಸಂಘರ್ಷವಾಗಿಯೂ ಬದಲಾಗಿತ್ತು. ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳು ಆ ವಿಷಯದ ಕಡೆಗೆ ಆಸಕ್ತಿ ಕಳೆದುಕೊಳ್ಳುತ್ತಾರೆ ಮತ್ತು ಇದು ಭವಿಷ್ಯದಲ್ಲಿ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರಿಗೆ ಹಿನ್ನಡೆಯಾಗಬಹುದು ಎಂಬ ವಾದ ಕೇಳಿಬಂದಿತ್ತು. ಈಗ ಹೈಕೋರ್ಟ್ ನೀಡಿದ ಆದೇಶವು ಸರ್ಕಾರದ ಈ ವಿವಾದಾತ್ಮಕ ನಿರ್ಧಾರಕ್ಕೆ ಬ್ರೇಕ್ ಹಾಕಿದೆ.