ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hindi in SSLC: ಎಸ್ಸೆಸ್ಸೆಲ್ಸಿಯಲ್ಲಿ ಹಿಂದಿ ಭಾಷೆ ಪರೀಕ್ಷೆ ಅಂಕಕ್ಕೆ ಖೊಕ್‌: ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರ ಪತ್ರ

ಸರ್ಕಾರದ ಈ ನಿರ್ಧಾರ ವಿದ್ಯಾರ್ಥಿಗಳ ಕಲಿಯುವ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು. ಪೋಷಕರಿಗೂ ಆತಂಕ ಇದ್ದು, ರಾಜ್ಯಪಾಲರು ಈ ವಿಷಯವನ್ನು ಗಮನಿಸಿದ್ದಾರೆ. ಹೀಗಾಗಿ ಶೈಕ್ಷಣಿಕ, ಆಡಳಿತಾತ್ಮಕ ಅಂಶ ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಶೈಕ್ಷಣಿಕ ಉದ್ದೇಶಗಳಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿಎಸ್​ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌

ಬೆಂಗಳೂರು, ಏ.​​ 03: ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆಗೆ (Hindi in SSLC) ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (CS Shalini Rajaneesh) ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand Gehlot) ಅವರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ.

SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಗ್ರೇಡ್‌ ನೀಡಿದರೆ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆ ಮಾಡಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಸರ್ಕಾರದ ಈ ನಿರ್ಧಾರ ವಿದ್ಯಾರ್ಥಿಗಳು ಕಲಿಯುವ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು. ಶಿಕ್ಷಣದ ಮೇಲೆ ಬೀರುವ ಪರಿಣಾಮ ಬಗ್ಗೆ ಪೋಷಕರಿಗೂ ಆತಂಕ ಇದ್ದು, ರಾಜ್ಯಪಾಲರು ಈ ವಿಷಯವನ್ನು ಗಮನಿಸಿದ್ದಾರೆ. ಹೀಗಾಗಿ ಶೈಕ್ಷಣಿಕ, ಆಡಳಿತಾತ್ಮಕ ಅಂಶ ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಸಂಬಂಧಿತ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಶೈಕ್ಷಣಿಕ ಉದ್ದೇಶಗಳಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿಎಸ್​ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.

SSLC exam: ಹಿಂದಿ ಭಾಷೆ ಕಲಿಕೆಗೆ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯ ಆಗಬಾರದು ಎಂದ ಸಿಎಂ

ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಆ ಬೆನ್ನಲ್ಲೇ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ 525 ಅಂಕಗಳು ನಿಗದಿ ಮಾಡಿ, ತೃತೀಯ ಭಾಷೆಯ ಅಂಕಕ್ಕೆ ಸರ್ಕಾರ ಕೊಕ್​ ನೀಡಿತ್ತು. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗುವುದಿಲ್ಲ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿರುವುದು ಭಾರಿ ಚರ್ಚೆಗೂ ಗ್ರಾಸವಾಗಿತ್ತು. ಕರ್ನಾಟಕ ಹೈಕೋರ್ಟ್​​ನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿರುವ ನಡುವೆ ರಾಜ್ಯಪಾಲರ ಕಡೆಯಿಂದ ಬಂದಿರುವ ಈ ಪತ್ರ ಪ್ರಾಮುಖ್ಯತೆ ಪಡೆದಿದೆ.

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಈ ವರ್ಷದಿಂದ ಹಿಂದಿ ಭಾಷೆ ಅಂಕಗಳಿಗೆ ಕೊಕ್‌!

ಹರೀಶ್‌ ಕೇರ

View all posts by this author