ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಆರೆಸ್ಸೆಸ್‌ಗೆ ಮಾತ್ರವಲ್ಲ, ಎಲ್ಲ ಖಾಸಗಿ ಸಂಸ್ಥೆಗಳಿಗೂ ನಿರ್ಬಂಧ: ಸಿಎಂ ಸಿದ್ದರಾಮಯ್ಯ

RSS: ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಮೈಸೂರು : ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸುವ ಕುರಿತು ನಿರ್ಬಂಧ ವಿಧಿಸಿರುವುದು ಕೇವಲ ಆರ್‌ಎಸ್‌ಎಸ್‌ಗೆ (RSS) ಮಾತ್ರವಲ್ಲ. ಎಲ್ಲಾ ಖಾಸಗಿ ಸಂಘ ಸಂಸ್ಥೆಗಳಿಗೂ ಅನ್ವಯ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ. 2013ರಲ್ಲೇ ಬಿಜೆಪಿ ಸರ್ಕಾರವೇ ಈ ಬಗ್ಗೆ ಆದೇಶ ಹೊರಡಿಸಿದೆ. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಆದೇಶ ಹೊರಡಿಸಲಾಗಿದೆ. ಅವರೇ ಮಾಡಿ ಈಗ ಅವರೇ ವಿರೋಧ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಂಪುಟ ನಿರ್ಧಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜತೆಗೆ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲೂ ಅವರು ಪೋಸ್ಟ್‌ ಮಾಡಿದ್ದಾರೆ. ʼಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆʼ ಎಂದು ಬರೆದಿದ್ದಾರೆ.

ಇದನ್ನೂ ಓದಿ: Priyank Kharge: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ



ನಿನ್ನೆ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಈ ಕುರಿತು ಇದ್ದ ಹಳೆಯ ಆದೇಶವನ್ನು ಕಟ್ಟುನಿಟ್ಟುಗೊಳಿಸಿ ಕ್ರಮ ತೆಗೆದುಕೊಳ್ಳಲು ನಿರ್ಣಯಿಸಲಾಗಿದೆ. ಸಚಿವ ಸಂಪುಟ ಸಭೆಯ ನಿರ್ಣಯದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಅದರೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆರೆಸ್ಸೆಸ್‌ ಪಥಸಂಚಲನ ನಡೆಸಿತ್ತು. ಆರೆಸ್ಸೆಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ಮಾದರಿಯ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಹರೀಶ್‌ ಕೇರ

View all posts by this author