ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Petrol Price hike: ಗಲ್ಫ್‌ ಯುದ್ಧದ ನಡುವೆ ರಾಜ್ಯ ಬಜೆಟ್‌ನಲ್ಲೂ ಪೆಟ್ರೋಲ್‌ ಬೆಲೆ ಏರಿಕೆ ಚಿಂತನೆ!

ಹಣಕಾಸು ಇಲಾಖೆ ಅಧಿಕಾರಿಗಳ ಜತೆಗೆ ಕಳೆದ ಕೆಲ ದಿನಗಳಿಂದ ಪ್ರತ್ಯೇಕ ಚರ್ಚೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಈ ಪ್ರಸ್ತಾಪವೊಂದು ಈಗಾಗಲೇ ಸಲ್ಲಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 1 ರೂ. ಹೆಚ್ಚುವರಿ ಮಾರಾಟ ತೆರಿಗೆ ವಿಧಿಸುವುದರಿಂದ ತಕ್ಕಮಟ್ಟಿಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ವೇಗ ನೀಡಬಹುದೆಂದು ಚರ್ಚಿಸಲಾಗುತ್ತಿದೆ.

ಗಲ್ಫ್‌ ಸಮರ ನಡುವೆ ರಾಜ್ಯ ಬಜೆಟ್‌ನಲ್ಲೂ ಪೆಟ್ರೋಲ್‌ ಬೆಲೆ ಏರಿಕೆ ಚಿಂತನೆ!

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Mar 3, 2026 10:33 AM

ಬೆಂಗಳೂರು, ಮಾರ್ಚ್‌ 03 : ಒಂದು ಕಡೆ ಇರಾನ್-‌ ಇಸ್ರೇಲ್‌ ಯುದ್ಧದ (Iran- israel War) ಪರಿಣಾಮ ತೈಲ ಬೆಲೆ ಏರಿಕೆ ಭೀತಿ (crude oil price rise) ಎದುರಾಗಿದೆ. ಈ ನಡುವೆಯೇ, ಈ ಬಾರಿಯ ಬಜೆಟ್‌ನಲ್ಲಿ (State budget) ಪೆಟ್ರೋಲ್ ಡೀಸೆಲ್ ಮೇಲೆ (Petrol Price hike) ಒಂದು ರೂಪಾಯಿ ವಿಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಮುಂದೆ ಪ್ರಸ್ತಾವನೆ ಇಡಲಾಗಿದೆ.

ಒಂದು ಕಡೆ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಸಂಪನ್ಮೂಲ ಕ್ರೋಡೀಕರಣ ಇಲಾಖೆಗಳಿಗೆ ನೀಡಿದ್ದ ರಾಜಸ್ವ ಸಂಗ್ರಹಣೆಯ ಗುರಿ ಈಗಾಗಲೇ ಅತಿಯಾಗಿದೆ. ಹೀಗಾಗಿ ಹೊಸ ಆದಾಯದ ಮೂಲಗಳನ್ನು ಅರಸುವುದು ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿ ಪರಿಣಮಿಸಿದೆ. ಹೀಗಾಗಿ ಪೆಟ್ರೋಲ್ ಹಾಗೂ ಡೀಸೆಲ್‌ಗಳ ಮೇಲೆ ಹೆಚ್ಚುವರಿಯಾಗಿ ಮಾರಾಟ ತೆರಿಗೆ ಹೇರುವುದು ಅನಿವಾರ್ಯವಾಗುವ ಸಾಧ್ಯತೆ ಕಂಡುಬಂದಿದೆ.

ಹಣಕಾಸು ಇಲಾಖೆ ಅಧಿಕಾರಿಗಳ ಜತೆಗೆ ಕಳೆದ ಕೆಲ ದಿನಗಳಿಂದ ಪ್ರತ್ಯೇಕ ಚರ್ಚೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಈ ಪ್ರಸ್ತಾಪವೊಂದು ಈಗಾಗಲೇ ಸಲ್ಲಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 1 ರೂ. ಹೆಚ್ಚುವರಿ ಮಾರಾಟ ತೆರಿಗೆ ವಿಧಿಸುವುದರಿಂದ ತಕ್ಕಮಟ್ಟಿಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ವೇಗ ನೀಡಬಹುದೆಂದು ಚರ್ಚಿಸಲಾಗುತ್ತಿದೆ. ಆದರೆ, ಅದು ಇನ್ನೂ ಅಂತಿಮ ನಿರ್ಧಾರದ ಹಂತಕ್ಕೆ ಬಂದಿಲ್ಲ. ಇದರಿಂದ ಸಾರ್ವಜನಿಕ ವಿರೋಧ ತೀವ್ರವಾಗಬಹುದೆಂಬ ಸಲಹೆಯೂ ವ್ಯಕ್ತವಾಗಿದೆ.

ಇರಾನ್-‌ ಇಸ್ರೇಲ್‌ ಸಮರ: ಪೆಟ್ರೋಲ್‌ ಬೆಲೆ 200 ರುಪಾಯಿ ಆಗುತ್ತಾ?

2024ರಲ್ಲಿ ಸಿದ್ದರಾಮಯ್ಯ ಅವರು ಹಾಲಿ ಇರುವ ಪೆಟ್ರೋಲ್ ಮಾರಾಟ ತೆರಿಗೆಯನ್ನು ಶೇ.29.84ಕ್ಕೆ ಏರಿಕೆ ಮಾಡಿದ್ದರು. ಇದರಿಂದ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 3 ರೂ.ನಷ್ಟು ತುಟ್ಟಿಯಾಗಿತ್ತು. ನೆರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕಡಿಮೆ ಪ್ರಮಾಣದಲ್ಲಿ ಸೆಸ್ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಆ ಸಂದರ್ಭದಲ್ಲಿ ತಮ್ಮ ನಿರ್ಣಯವನ್ನು ಸಮರ್ಥನೆ ಮಾಡಿಕೊಂಡಿದ್ದರು. ಬಜೆಟ್ ಅಧಿವೇಶನಕ್ಕೆ ಇನ್ನು 4 ದಿನ ಮಾತ್ರ ಬಾಕಿ ಇದೆ.

ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳಲು ಪೆಟ್ರೋಲ್ ಮತ್ತು ಡೀಸೆಲ್ ದರದ ಮೇಲೆ ಹೆಚ್ಚುವರಿ ಸೆಸ್ (Cess) ವಿಧಿಸುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ನಡೆಯುತ್ತಿವೆ.

ಬೆಂಗಳೂರಿನಲ್ಲಿ ಪ್ರಸ್ತುತ ಇಂಧನ ದರಗಳು ಹೀಗಿವೆ: ಪೆಟ್ರೋಲ್ ಸರಿಸುಮಾರು ₹103.37/ಲೀಟರ್ ಹಾಗೂ ಡೀಸೆಲ್ ಸರಿಸುಮಾರು ₹90.99/ಲೀಟರ್. ಒಂದು ವೇಳೆ ಬಜೆಟ್‌ನಲ್ಲಿ ದರ ಏರಿಕೆ ಘೋಷಣೆಯಾದರೆ, ಅದು ಕೇವಲ ವಾಹನ ಸವಾರರಿಗಷ್ಟೇ ಅಲ್ಲದೆ, ಸರಕು ಸಾಗಣೆ ವೆಚ್ಚ ಹೆಚ್ಚಳವಾಗುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿದೆ.‌

Petrol Price Hike: ವಾಹನ ಸವಾರರಿಗೆ ಬಿಗ್‌ ಶಾಕ್‌; ಪೆಟ್ರೋಲ್‌, ಡೀಸೆಲ್‌ ಮೇಲೆ ಕೇಂದ್ರದ ಅಬಕಾರಿ ಸುಂಕ ಹೆಚ್ಚಳ