ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಡಯಾಲಿಸಿಸ್ ವ್ಯವಸ್ಥೆ ಕುರಿತಂತೆ ಅಧ್ಯಯನಕ್ಕೆ ಆಗಮಿಸಿದ್ದ ಫಿಲಿಪೈನ್ಸ್ ನಿಯೋಗವು ಗುರುವಾರ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಜಾಗತಿಕ ಆರೋಗ್ಯ ಸಹಕಾರ ಹಾಗೂ ಅರಿವು ಹಂಚಿಕೊಳ್ಳುವಿಕೆಯನ್ನು ಉತ್ತೇಜಿಸುವ ಕುರಿತಂತೆ ಸಚಿವರೊಂದಿಗೆ ಮಾತುಕತೆ ನಡೆಸಿದ ನಿಯೋಗ, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಕೇಂದ್ರದಲ್ಲಿ ಒದಗಿಸುತ್ತಿರುವ ಆರೋಗ್ಯ ಸೇವೆ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದರು.
ಕಡಿಮೆ ಅವಧಿಯಲ್ಲಿ ರಾಜ್ಯದಾದ್ಯಂತ 100 ಡಯಾಲಿಸಿಸ್ ಕೇಂದ್ರಗಳಲ್ಲಿ 800ಕ್ಕೂ ಹೆಚ್ಚು ಏಕಬಳಕೆಯ ಡಯಾಲೈಸರ್ ಯಂತ್ರಗಳ ಅಳವಡಿಕೆ ಕುರಿತಂತೆ ಫಿಲಿಪೈನ್ಸ್ ನಿಯೋಗ, ಸಚಿವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ | Cabinet Decisions: ಕಾರ್ಮಿಕರಿಗೆ ಗುಡ್‌ನ್ಯೂಸ್; ವಿಮಾ ಸೊಸೈಟಿ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ
ಫಿಲಿಪೈನ್ಸ್ ಗಣರಾಜ್ಯದ ಆರೋಗ್ಯ ಕಾರ್ಯದರ್ಶಿ ಡಾ. ಟಿಯೋಡೊರೋ ಜೆ. ಹರ್ಬೋಸಾ, ಫಿಲಿಪೈನ್ಸ್ ಗಣರಾಜ್ಯದ ಅಂತಾರಾಷ್ಟ್ರೀಯ ಆರೋಗ್ಯ ಸಹಕಾರ ಬ್ಯೂರೋ ನಿರ್ದೇಶಕ ಜೋಯಲ್ ಬುಯೆನಾವೆಂಚುರಾ ಅವರನ್ನೊಳಗೊಂಡ ನಿಯೋಗವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.