ಉಡುಪಿ, ನ.28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ನ.28) ಉಡುಪಿಗೆ ಆಗಮಿಸಲಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಲ್ಲಿ ಅವರ ರೋಡ್ ಶೋ (Road show) ಇರುವುದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, 40 ನಿಮಿಷ ಮುಂಚಿತವಾಗಿ ಉಡುಪಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ (PM Modi in Udupi) ಬೆಳಗ್ಗೆ ಒಂದೂವರೆ ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ವೀಕ್ಷಿಸಲು ಆಗಮಿಸುವವರು 9.30ರೊಳಗೆ ಆಗಮಿಸಬೇಕೆಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಕಾರ್ಕಳ ಮನವಿ ಮಾಡಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ 11.30ರವರೆಗೆ ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಬನ್ನಂಜೆಯಿಂದ ಕಲ್ಸಂಕ ತನಕ ಕಾರಿನಲ್ಲಿ ಜನರತ್ತ ಕೈ ಬೀಸುತ್ತಾ ಮೋದಿ ರೋಡ್ ಶೋ ನಡೆಸಲಿದ್ದಾರೆ. ಆ ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಉಡುಪಿಯಿಂದ ಪ್ರಧಾನಿ ಮೋದಿ ತೆರಳಲಿದ್ದಾರೆ.
ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ
ಬೆಳಗ್ಗೆ 11:05ಕ್ಕೆ ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ
ಬೆಳಗ್ಗೆ 11:15ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ
ಬೆಳಗ್ಗೆ 11:30ಕ್ಕೆ ಉಡುಪಿಯ ಹೆಲಿಪ್ಯಾಡ್ಗೆ ಪ್ರಧಾನಿ ಆಗಮನ
ಬೆಳಗ್ಗೆ 11:40ರಿಂದ ಮಧ್ಯಾಹ್ನ 12 ಗಂಟೆಯವರೆಗೆ ರೋಡ್ ಶೋ (ಬನ್ನಂಜೆ ವೃತ್ತದಿಂದ ಕಲ್ಸಂಕ ಜಂಕ್ಷನ್ ವರೆಗೆ)
ಮಧ್ಯಾಹ್ನ 12:00 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ , ಸ್ವರ್ಣ ಲೇಪಿತ ತೀರ್ಥ ಮಂಟಪ ಮೋದಿಯಿಂದ ಉದ್ಘಾಟನೆ
ಮಧ್ಯಾಹ್ನ 1ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿಯಿಂದ ಭಾಷಣ
ನಾಳೆ ಉಡುಪಿಗೆ ಮೋದಿ ಭೇಟಿ; ಕನ್ನಡದಲ್ಲೇ ಪೋಸ್ಟ್ ಹಂಚಿಕೊಂಡ ಪ್ರಧಾನಿ
ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣಗೊಂಡ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದ್ದು, ಇದು ಇವತ್ತು ಉದ್ಘಾಟನೆಯಾಗಲಿದೆ. ನಂತರ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.