ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

PM Narendra Modi: ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ, ಭೈರವೈಕ್ಯ ಮಂದಿರ ಉದ್ಘಾಟನೆಗೆ ಸಜ್ಜು

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಈ ಭೈರವೈಕ್ಯ ಮಂದಿರವು ಹಲವು ವಿಶೇಷತೆಗಳಿಂದ ಕೂಡಿದೆ. ಕಾರ್ಯಕ್ರಮಕ್ಕಾಗಿ ಬಿಜಿಎಸ್‌‍ ಕ್ರೀಡಾಂಗಣದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

ಪಿಎಂ ಮೋದಿ, ಭೈರವೈಕ್ಯ ಮಂದಿರ

ಬೆಂಗಳೂರು, ಏ.14: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ (Adichunchanagiri) ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಶ್ರೀ ಕ್ಷೇತ್ರದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ (Balagangadharanataha swamiji) ಅವರ ಸರಣಾರ್ಥ ನಿರ್ಮಾಣಗೊಂಡಿರುವ ಭವ್ಯ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೋದಿಯವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿಯಾಗಿದ್ದಾರೆ.

ಪ್ರಧಾನಿ ಕಾರ್ಯಕ್ರಮ ಹೀಗಿದೆ

ಇಂದು ಬೆಳಿಗ್ಗೆ 10.05ಕ್ಕೆ ದೆಹಲಿಯಿಂದ ವಿಮಾನದಲ್ಲಿ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 10.10ಕ್ಕೆ ವಿಮಾನ ನಿಲ್ದಾಣದಿಂದ ಹೊರಟು ಹೆಲಿಕಾಪ್ಟರ್‌ ಮೂಲಕ 10.50ಕ್ಕೆ ಚುಂಚನಗಿರಿ ಹೆಲಿಪ್ಯಾಡ್‌ಗೆ ಬಂದಿಳಿಯುತ್ತಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಆಗಮಿಸುತ್ತಾರೆ. ಬೆಳಿಗ್ಗೆ 11 ಗಂಟೆಗೆ ಶ್ರೀ ಗುರು ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಮಂದಿರವನ್ನು ಉದ್ಘಾಟಿಸುತ್ತಾರೆ.

ಉದ್ಘಾಟನೆಯ ನಂತರ ಅವರು ಶ್ರೀಗಳ ಪಾದುಕೆಗಳಿಗೆ ನಮಸ್ಕರಿಸಿ, ಧ್ಯಾನ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬಳಿಕ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರೀಡಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮತ್ತೆ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ಕೇರಳದ ತಿರುವಂತನಪುರಂಗೆ ತೆರಳುವರು.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಈ ಭೈರವೈಕ್ಯ ಮಂದಿರವು ಹಲವು ವಿಶೇಷತೆಗಳಿಂದ ಕೂಡಿದೆ. ಕಾರ್ಯಕ್ರಮಕ್ಕಾಗಿ ಬಿಜಿಎಸ್‌‍ ಕ್ರೀಡಾಂಗಣದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ 2000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಸಂಸತ್ತಿನಲ್ಲಿ ನರೇಂದ್ರ ಮೋದಿ-ಮಲ್ಲಿಕಾರ್ಜುನ ಖರ್ಗೆ ನಡುವೆ ಲಘು ಹಾಸ್ಯ, ಹಸ್ತಲಾಘವ; ಅಂಬೇಡ್ಕರ್ ಜಯಂತಿ ವೇಳೆ ಅಪರೂಪದ ಕ್ಷಣ

ಮಂದಿರದ ವಿಶೇಷತೆಗಳೇನು?

ಸುಮಾರು 100 ಕೋಟಿ ರೂಪಾಯಿಗಳಿಗೂ ಅಧಿಕ ವೆಚ್ಚದಲ್ಲಿ ಈ ಭವ್ಯ ಮಂದಿರವನ್ನು ನಿರ್ಮಿಸಲಾಗಿದೆ. ಒಡಿಶಾದ ಕೊನಾರ್ಕ್ ಸೂರ್ಯ ದೇಗುಲದ ಮಾದರಿಯಲ್ಲಿ ಈ ಮಂದಿರವನ್ನು ರೂಪಿಸಲಾಗಿದ್ದು, ಇದು ಹೊಯ್ಸಳ, ಚೋಳ, ಚಾಲುಕ್ಯ ಮತ್ತು ಗಂಗ ವಾಸ್ತುಶಿಲ್ಪದ ಸುಂದರ ಮಿಶ್ರಣವಾಗಿದೆ. ಮಂಗಳ ಮಂಟಪದ ಮೇಲೆ 26,250 ಚದರ ಅಡಿ ವಿಸ್ತೀರ್ಣದಲ್ಲಿ ಈ ಮಂದಿರ ತಲೆಎತ್ತಿದೆ. ಇದು ಉತ್ತರ-ದಕ್ಷಿಣವಾಗಿ 175 ಅಡಿ ಹಾಗೂ ಪೂರ್ವ-ಪಶ್ಚಿಮವಾಗಿ 150 ಅಡಿ ಉದ್ದವಿದೆ.

ಸಂಪೂರ್ಣವಾಗಿ ಕೆಂಪು ಮತ್ತು ವಿವಿಧ ಗ್ರಾನೈಟ್ ಶಿಲೆಗಳಿಂದ ನಿರ್ಮಿಸಲಾದ ಈ ಮಂದಿರದಲ್ಲಿ 26 ಕಂಬಗಳಿವೆ. ಮಂದಿರದ ಒಳಭಾಗದಲ್ಲಿ ಚಿನ್ನ ಮತ್ತು ಬೆಳ್ಳಿಯ ಕವಚದ ಹೊದಿಕೆಗಳನ್ನು ಬಳಸಲಾಗಿದೆ. 2013ರಲ್ಲಿ ಲಿಂಗೈಕ್ಯರಾದ ಡಾ. ಬಾಲಗಂಗಾಧರನಾಥ ಶ್ರೀಗಳ ಸ್ಮರಣಾರ್ಥ ಈ ಮಂದಿರ ನಿರ್ಮಿಸಲಾಗಿದ್ದು, 2016ರಲ್ಲಿ ಇದರ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 250ಕ್ಕೂ ಹೆಚ್ಚು ನುರಿತ ಶಿಲ್ಪಿಗಳು ಕಳೆದ 10 ವರ್ಷಗಳಿಂದ ಈ ಮಂದಿರದ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಆದಿಚುಂಚನಗಿರಿಯಲ್ಲಿ ಪಿಎಂ ಮೋದಿಗಾಗಿ ಕಾಯುತ್ತಿದೆ ವಿಶೇಷ ಮೈಸೂರು ಪೇಟ

ಪ್ರಧಾನಿಗೆ ವಿಶೇಷ ಉಡುಗೊರೆ

ಈ ಭೇಟಿಯ ವೇಳೆ ಪ್ರಧಾನಿ ಮೋದಿಯವರಿಗೆ ತೊಡಿಸಲು ವಿಶೇಷ ಮೈಸೂರು ಪೇಟ ಸಿದ್ಧಪಡಿಸಲಾಗಿದೆ. ಮೈಸೂರಿನ ಕಲಾವಿದ ನಂದನ್‌ ಸಿಂಗ್‌ ಅವರು ಐದು ದಿನಗಳ ನಿರಂತರ ಶ್ರಮದಿಂದ ಇದನ್ನು ತಯಾರಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಧರಿಸುತ್ತಿದ್ದ ಮಾದರಿಯಲ್ಲಿರುವ ಈ ಪೇಟವು ಬನಾರಸ್‌‍ ಬಟ್ಟೆ ಮತ್ತು ಗಂಡಭೇರುಂಡ ವಿನ್ಯಾಸದಿಂದ ಕೂಡಿದೆ. ನಿರ್ಮಲಾನಂದನಾಥ ಶ್ರೀಗಳ ಅಣತಿಯಂತೆ ನಮ್ಮೂರು ನಮ್ಮೋರು ಸೇವಾ ಸಂಸ್ಥೆಯ ವತಿಯಿಂದ ಈ ಗೌರವ ಅರ್ಪಿಸಲಾಗುತ್ತಿದೆ.

ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಈ ಕಾರ್ಯಕ್ರಮಕ್ಕಾಗಿ ಮಂಡ್ಯ ಜಿಲ್ಲಾಡಳಿತ, ಪೊಲೀಸ್‌‍ ಇಲಾಖೆ ಮತ್ತು ದೇವಸ್ಥಾನದ ಅಧಿಕಾರಿಗಳು ಸಿದ್ಧತೆಗಳನ್ನು ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಬರುವುದರಿಂದ ಚುಂಚನಗಿರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ರಸ್ತೆಗಳು, ಹೆಲಿಪ್ಯಾಡ್‌ ಮತ್ತು ಮಂದಿರ ಪ್ರದೇಶದಲ್ಲಿ ವಿಶೇಷ ಏರ್ಪಾಟುಗಳನ್ನು ಮಾಡಲಾಗಿದೆ.

ಹಲವು ವಸ್ತುಗಳಿಗೆ ನಿರ್ಬಂಧ

ಪ್ರಧಾನ ಮಂತ್ರಿಗಳ ಭದ್ರತಾ ಪಡೆಯಾದ ಈಗ ಇಡೀ ಕ್ಷೇತ್ರವನ್ನು ತನ್ನ ಸುಪರ್ದಿಗೆ ಪಡೆದಿದೆ. ಭದ್ರತಾ ದೃಷ್ಟಿಯಿಂದ ಬರೋಬ್ಬರಿ 15ಕ್ಕೂ ಹೆಚ್ಚು ವಸ್ತುಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಬಿಡಿ, ಸಿಗರೇಟ್‌, ಬೆಂಕಿಪೊಟ್ಟಣ, ಲೈಟರ್‌ ಹಾಗೂ ತಂಬಾಕು ಉತ್ಪನ್ನಗಳು ಸಂಪೂರ್ಣ ನಿಷೇಧ.

ಮಹಿಳಾ ಮೀಸಲಾತಿ 21ನೇ ಶತಮಾನದ ಭಾರತದ ಅತೀ ದೊಡ್ಡ ನಿರ್ಧಾರವಾಗಲಿದೆ: ಪ್ರಧಾನಿ ಮೋದಿ

ಎಲೆಕ್ಟ್ರಾನಿಕ್‌ ವಸ್ತುಗಳು: ರಿಮೋಟ್‌ ಕೀ, ಟಾರ್ಚ್‌, ಲೇಸರ್‌ ಲೈಟ್‌, ರೇಡಿಯೋ, ಎಲೆಕ್ಟ್ರಾನಿಕ್‌ ಗ್ಯಾಜೆಗಳು ಮತ್ತು ರಿಮೋಟ್‌ ಕಂಟ್ರೋಲರ್‌ ಗಳಿಗೆ ಅವಕಾಶವಿಲ್ಲ.ಬ್ಯಾಗ್‌ಗಳು: ಬ್ರೀಫ್‌ ಕೇಸ್‌‍, ಹ್ಯಾಂಡ್‌ ಬ್ಯಾಗ್‌ ಹಾಗೂ ಬ್ಯಾಕ್‌ ಪ್ಯಾಕ್‌ಗಳನ್ನು ತರುವಂತಿಲ್ಲ. ವಾಟರ್‌ ಬಾಟಲ್‌, ತಿಂಡಿ ತಿನಿಸುಗಳು ಹಾಗೂ ಚಾಕುಗಳಂತಹ ಹರಿತವಾದ ವಸ್ತುಗಳನ್ನು ನಿರ್ಬಂಧಿಸಲಾಗಿದೆ.

ಮೋದಿ ಆಗಮನದ ಹಿನ್ನೆಲೆಯಲ್ಲಿ ಕಾಲಭೈರವನ ದರ್ಶನಕ್ಕೆ ಹೋಗುವವರಿಗೆ ವಿಶೇಷ ಸೂಚನೆ ನೀಡಲಾಗಿದೆ. ಪ್ರಧಾನಿಗಳ ಕಾರ್ಯಕ್ರಮ ಮುಗಿಯುವವರೆಗೂ ಅಂದರೆ ಮಧ್ಯಾಹ್ನ 12.30ರವರೆಗೆ ದರ್ಶನಕ್ಕೆ ನಿರ್ಬಂಧವಿರಲಿದೆ. ಪ್ರಧಾನಿಗಳು ಶ್ರೀಗಿರಿ ತಪೋವನದ ಹೆಲಿಪ್ಯಾಡ್‌ನಿಂದ ರಸ್ತೆ ಮೂಲಕ ಮಂದಿರಕ್ಕೆ ಬರಲಿದ್ದು, ಕಾರ್ಯಕ್ರಮ ಮುಗಿದ ಬಳಿಕವಷ್ಟೇ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ.

3ನೇ ಬಾರಿ ಮಂಡ್ಯಕ್ಕೆ ಮೋದಿ

ಮೊದಲ ಬಾರಿಗೆ ಚುನಾವಣಾ ಪ್ರಚಾರಕ್ಕಾಗಿ ಬಂದಿದ್ದ ಅವರು, 2ನೇ ಭೇಟಿಯು ಅಭಿವೃದ್ಧಿ ಯೋಜನೆಯ ಉದ್ಘಾಟನೆಯಾಗಿತ್ತು. ಈಗ 3ನೇಯದ್ದು ಧಾರ್ಮಿಕ ಭೇಟಿಯಾಗಿದೆ. 2004ರ ವಿಧಾನಸಭೆ ಚುನಾವಣೆ ವೇಳೆ ಪ್ರಚಾರಕ್ಕಾಗಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು ಬಂದಿದ್ದರು.

ಹರೀಶ್‌ ಕೇರ

View all posts by this author