PM Narendra Modi: ನ.28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ರೋಡ್ ಶೋ ರದ್ದು
Udupi Sri Krishna Math: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕಾಗಿ ರೋಡ್ ಶೋ ನಡೆಸಲು ಯೋಜಿಸಲಾಗಿತ್ತು. ಆದರೆ, ಪರಿಷ್ಕೃತ ಪಟ್ಟಿಯಲ್ಲಿ ರೋಡ್ ಶೋ ರದ್ದುಗೊಳಿಸಲಾಗಿದೆ. ಹೆಲಿಪ್ಯಾಡ್‌ನಿಂದ ನೇರವಾಗಿ ಮಧ್ಯಾಹ್ನ 12 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ಮೋದಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ತದನಂತರ ಐತಿಹಾಸಿಕ 'ಲಕ್ಷ ಕಂಠ ಗೀತ ಗಾಯನ' ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪಿಎಂ ನರೇಂದ್ರ ಮೋದಿ ಉಡುಪಿಯಲ್ಲಿ- ಸಂಗ್ರಹ ಚಿತ್ರ -
ಉಡುಪಿ, ನ.24: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ (Udupi Sri Krishna Math) ಆಗಮಿಸುತ್ತಿದ್ದಾರೆ. ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು ನಂತರ ಐತಿಹಾಸಿಕ 'ಲಕ್ಷ ಕಂಠ ಗೀತ ಗಾಯನ' ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಹೆಲಿಪ್ಯಾಡ್, ಕಾಂಕ್ರೀಟ್ ರಸ್ತೆ, ಭದ್ರತಾ ವ್ಯವಸ್ಥೆ ಸಹಿತ ಮೂಲ ಸೌಲಭ್ಯಗಳ ತಯಾರಿ ವೇಗವಾಗಿ ಸಾಗುತ್ತಿದೆ.
ನವೆಂಬರ್ 28ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬೆಳಗ್ಗೆ 11:05 ಕ್ಕೆ ಬರಲಿದ್ದಾರೆ. ಅಲ್ಲಿಂದ ಬೆಳಿಗ್ಗೆ 11:10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ.
ಈ ಹಿಂದೆ ಪ್ರಧಾನಿಯವರ ಸ್ವಾಗತಕ್ಕಾಗಿ ರೋಡ್ ಶೋ ನಡೆಸಲು ಯೋಜಿಸಲಾಗಿತ್ತು. ಆದರೆ, ಪರಿಷ್ಕೃತ ಪಟ್ಟಿಯಲ್ಲಿ ರೋಡ್ ಶೋ ರದ್ದುಗೊಳಿಸಲಾಗಿದೆ. ಹೆಲಿಪ್ಯಾಡ್‌ನಿಂದ ನೇರವಾಗಿ ಮಧ್ಯಾಹ್ನ 12 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ಮೋದಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ತದನಂತರ ಐತಿಹಾಸಿಕ 'ಲಕ್ಷ ಕಂಠ ಗೀತ ಗಾಯನ' ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕಾರ್ಯಕ್ರಮ ಪಟ್ಟಿ ಹೀಗಿದೆ:
ಬೆಳಗ್ಗೆ 8.15: ದೆಹಲಿ ವಿಮಾನ ನಿಲ್ದಾಣದಿಂದ ವಾಯುಪಡೆ ವಿಮಾನದಲ್ಲಿ ಪಯಣ.
ಬೆಳಗ್ಗೆ 11.05: ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ.
ಬೆಳಗ್ಗೆ 11.10: ಹೆಲಿಕಾಪ್ಟರ್ ಮೂಲಕ ಪಯಣ.
ಬೆಳಗ್ಗೆ 11.35: ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮನ.
ಬೆಳಗ್ಗೆ 11.45: ಆದಿ ಉಡುಪಿ ಹೆಲಿಪ್ಯಾಡ್‌ನಿಂದ ರಸ್ತೆ ಪಯಣ.
ಮಧ್ಯಾಹ್ನ 12: ಶ್ರೀಕೃಷ್ಣ ಮಠ ಭೇಟಿ, ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿ.
ಮಧ್ಯಾಹ್ನ 12ರಿಂದ 1.30: ಉಡುಪಿ ಶ್ರೀಕೃಷ್ಣ ಮಠ, ಪರ್ಯಾಯ ಪುತ್ತಿಗೆ ಶ್ರೀ ಭೇಟಿ.
ಮಧ್ಯಾಹ್ನ 1.35: ಶ್ರೀಕೃಷ್ಣಮಠದಿಂದ ನಿರ್ಗಮನ.
ಮಧ್ಯಾಹ್ನ 1.45: ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣ.
2.15: ವಾಯುಪಡೆ ವಿಮಾನ ಮೂಲಕ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣಕ್ಕೆ ಪಯಣ.
3.05: ದಾಬೋಲಿಮ್ ವಿಮಾನ ನಿಲ್ದಾಣದಿಂದ ಗೋಕರ್ಣ ಪರ್ತಗಳಿ ಜೀವೋತ್ತಮ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ.
ಇದನ್ನೂ ಓದಿ: Janamejaya Umarji Column: ಕೆಂಪು ಕಾರಿಡಾರಿನ ಅಂತ್ಯ ಎಂದಿದ್ದೇಕೆ ಪ್ರಧಾನಿ ಮೋದಿ ?
ರಾಷ್ಟ್ರೀಯ ಹೆದ್ದಾರಿಯ 169(ಎ) ಆದಿ ಉಡುಪಿ ಕರಾವಳಿ ಬೈಪಾಸ್ ಮಧ್ಯೆ 400 ಮೀ. ಕಾಂಕ್ರೀಟ್ ಕಾಮಗಾರಿ ಭರದಿಂದ ಸಾಗುತ್ತಿದೆ. ಒಂದು ವಾರದ ಕ್ಯೂರಿಂಗ್ ನಡುವೆ ಬಲಬದಿ ರಸ್ತೆ ಪ್ರಧಾನಿ ವಾಹನ ಸಂಚಾಕ್ಕೆ ಸೀಮಿತವಾಗಿ ತೆರವಾಗಲಿದೆ. ಆದಿ ಉಡುಪಿಯ ಎಪಿಎಂಸಿ ಎದುರಿಗೆ ಈಗಾಗಲೇ ಇರುವ ಮೂರು ಹೆಲಿಪ್ಯಾಡ್‌ಗಳ ದುರಸ್ತಿ, ಸಂಪರ್ಕ ರಸ್ತೆ, ಮಾರ್ಕಿಂಗ್ ಪ್ರಗತಿಯಲ್ಲಿದೆ. ಪಕ್ಕದಲ್ಲೇ ನಾಲ್ಕನೇ ಹೆಲಿಪ್ಯಾಡ್ ನಿರ್ಮಾಣ ಲೋಕೋಪಯೋಗಿ ಇಲಾಖೆಯಿಂದ 67 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿದೆ.
ಉಡುಪಿ ನಂತರ ಗೋವಾಕ್ಕೆ ಭೇಟಿ
ಉಡುಪಿಯ ಕಾರ್ಯಕ್ರಮ ಮುಗಿಸಿದ ಬಳಿಕ, ಮಧ್ಯಾಹ್ನ 1:35ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ನಿಂದ ಹೊರಟು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 2 ಗಂಟೆಗೆ ಗೋವಾಗೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ದೆಹಲಿ ಕಾರು ಸ್ಫೋಟ; ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ಮೋದಿ-ಗೃಹ ಸಚಿವ ಅಮಿತ್ ಶಾ