ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

POCSO Case: ಬಿಎಸ್‌ವೈ ವಿರುದ್ಧದ ಪೋಕ್ಸೋ ಕೇಸ್‌ ವಿಚಾರಣೆ ಮುಂದೂಡಿಕೆ; ಹಿರಿಯ ರಾಜಕಾರಣಿ ಮಾದರಿಯಾಗಿರಬೇಕು ಎಂದ ನ್ಯಾಯಪೀಠ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭವಾದಾಗ ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ ಷರತ್ತು ಸಡಿಲಿಕೆಗೆ ಮನವಿ ಮಾಡಿದರು.

ಬಿಎಸ್‌ವೈ ವಿರುದ್ಧದ ಪೋಕ್ಸೋ ಕೇಸ್‌ ವಿಚಾರಣೆ ಮುಂದೂಡಿಕೆ

ಬಿಎಸ್‌ ಯಡಿಯೂರಪ್ಪ

ಹರೀಶ್‌ ಕೇರ ಹರೀಶ್‌ ಕೇರ Apr 7, 2025 3:28 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (bs yediyurappa) ಅವರ ವಿರುದ್ಧದ ಪೋಕ್ಸೋ ಪ್ರಕರಣದ (POCSO Case) ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್‌ನಲ್ಲಿ (Karnataka High court) ಬಿಎಸ್‌ವೈಗೆ ಜಾಮೀನು ಷರತ್ತು ಸಡಿಲಿಕೆ ಕೋರಿ ಅವರ ಪರ ವಕೀಲರು ಮನವಿ ಮಾಡಿದರು. ಹಿರಿಯ ರಾಜಕಾರಣಿಯಾಗಿ ಖಂಡನೀಯ ಕೃತ್ಯ ನಡೆಸಬಾರದು. ಇತರರಿಗೆ ಮಾದರಿಯಾಗಿರಬೇಕು ಎಂದು ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯಪಟ್ಟರು. ಬಳಿಕ ವಿಚಾರಣೆಯನ್ನು ಮುಂದೂಡಿದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭವಾದಾಗ ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ ಷರತ್ತು ಸಡಿಲಿಕೆಗೆ ಮನವಿ ಮಾಡಿದರು. ಹಿರಿಯ ರಾಜಕಾರಣಿ ಆಗಿರುವುದರಿಂದ ದೆಹಲಿಗೆ ತೆರಳಬೇಕಿದೆ. ಅಲ್ಲದೆ ರಾಜಕೀಯ ಪಕ್ಷದ ಸಂಸದೀಯ ಸಮಿತಿ ಸದಸ್ಯರಾಗಿದ್ದಾರೆ. ಹೀಗಾಗಿ ಷರತ್ತು ಸಡಿಲಿಸಬೇಕು ಎಂದು ವಕೀಲರು ಮನವಿ ಮಾಡಿದರು.

ಹಿರಿಯ ರಾಜಕಾರಣಿಯಾಗಿ ಖಂಡನೀಯ ಕೃತ್ಯ ನಡೆಸಬಾರದು. ಇತರರಿಗೆ ಮಾದರಿಯಾಗುವಂತಹ ನಡವಳಿಕೆ ಇರಬೇಕು ಎಂದು ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು. ಈ ಆರೋಪ ಸುಳ್ಳೆಂಬ ಕಾರಣಕ್ಕೆ ವಿಚಾರಣೆಗೆ ತಡೆ ನೀಡಲಾಗಿದೆ ಎಂದು ಹೈಕೋರ್ಟಿಗೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಪ್ರತಿಕ್ರಿಯೆ ನೀಡಿದರು. ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಹೈಕೋರ್ಟ್ ಪೀಠ ಮುಂದೂಡಿತು.

ಇದನ್ನೂ ಓದಿ: BS Yediyurappa: ಪೋಕ್ಸೋ ಕೇಸ್‌ನಲ್ಲಿ ಬಿಎಸ್‌ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು, ಬಂಧನ ಭೀತಿಯಿಂದ ಪಾರು