ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Moti Veeranna passes away: ಮಾಜಿ ಶಾಸಕ ಯಜಮಾನ್‌ ಮೋತಿ ವೀರಣ್ಣ ಇನ್ನಿಲ್ಲ

ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಅವರ ಮಾತೆ ಗೌರಿ ನಿವಾಸದಲ್ಲಿ ಯಜಮಾನ್‌ ಮೋತಿ ವೀರಣ್ಣ ಅವರ ಪಾರ್ಥಿವ ಶರೀರದ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಯಜಮಾನ್‌ ಮೋತಿ ವೀರಣ್ಣ

ದಾವಣಗೆರೆ, ಫೆ.07: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ (90) ಅವರು ಇಂದು ದಾವಣಗೆರೆಯ (Davanagere) ಸ್ವಗೃಹದಲ್ಲಿ ಬೆಳಿಗ್ಗೆ (Moti Veeranna passes away) ನಿಧನರಾಗಿದ್ದಾರೆ. ಮೋತಿ ವೀರಣ್ಣ ಅವರು 1989ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2004ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಸ್ಥಳೀಯವಾಗಿ ಸಾವಿರಾರು ಜನರಿಗೆ ಅಚ್ಚುಮೆಚ್ಚಿನವರಾಗಿದ್ದ ಅವರು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಅವರ ಮಾತೆ ಗೌರಿ ನಿವಾಸದಲ್ಲಿ ಮೃತದೇಹದ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ: ಬೈಂದೂರಿನ ಮಾಜಿ ಶಾಸಕ, ಹಿರಿಯ ರಾಜಕಾರಣಿ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು (Bannuru Appanna Hegde no more) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ (udupi news) ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದುನಿಧನರಾಗಿದ್ದಾರೆ.

1935ರ ಡಿ.24ರದು ಬಸೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಕಾರ್ಮಿಕ ಮುಖಂಡ ಎಚ್‌.ವಿ. ಅನಂತ ಸುಬ್ಬರಾವ್‌ ನಿಧನ; ಬೆಂಗಳೂರು ಚಲೋ ಮುಷ್ಕರ ಮುಂದೂಡಿಕೆ

ಹರೀಶ್‌ ಕೇರ

View all posts by this author