ಬೆಂಗಳೂರು: ಸೆ. 29ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಕರಾವಳಿಯಲ್ಲಿ ಸೆ.29ರವರೆಗೆ ನಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20 ° C ಆಗಿರಬಹುದು.
ಸೆ. 30ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅ.01ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅ.2ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Bhima River Floods: ಭೀಮಾ ನದಿ ಪ್ರವಾಹಕ್ಕೆ ಗಿರಿನಾಡು ಯಾದಗಿರಿ ತತ್ತರ; ಹಲವು ಬಡಾವಣೆಗಳ ಮನೆಗಳಿಗೆ ನುಗ್ಗಿದ ನೀರು!
ಅ.03 ಮತ್ತು 4ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.