Mallikarjun Kharge: ಕೊನೆಗೂ ಅಧಿಕಾರ ಹಂಚಿಕೆ ಬಗ್ಗೆ ಮಹತ್ವದ ಅಪ್‌ಡೇಟ್ ನೀಡಿದ ಮಲ್ಲಿಕಾರ್ಜುನ ಖರ್ಗೆ
ದೆಹಲಿಗೆ ತೆರಳುವ ಮುನ್ನ ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge), ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೇರಿ ಮೂರ್ನಾಲ್ಕು ನಾಯಕರನ್ನು ದೆಹಲಿಗೆ ಕರೆಸುತ್ತೇವೆ. ಕಾಂಗ್ರೆಸ್ ಹೈಕಮಾಂಡ್ ಎಂಬುದು ಏಕಾಂಗಿ ಅಲ್ಲ. ಅದೊಂದು ತಂಡ. ಹೈಕಮಾಂಡ್ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ -
ಬೆಂಗಳೂರು, ನ.27: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಮೂರರಿಂದ ನಾಲ್ಕು ಮಂದಿ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಹೇಳಿದ್ದಾರೆ. ಆ ಮೂಲಕ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ (Karnataka politics) ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರಿಂದ ಮೊದಲ ಬಾರಿಗೆ ಅಧಿಕೃತ ಹೇಳಿಕೆಯೊಂದು ಹೊರಬಿದ್ದಂತಾಗಿದೆ.
ದೆಹಲಿಗೆ ತೆರಳುವ ಮುನ್ನ ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೇರಿ ಮೂರ್ನಾಲ್ಕು ನಾಯಕರನ್ನು ದೆಹಲಿಗೆ ಕರೆಸುತ್ತೇವೆ. ಎಲ್ಲರೂ ಒಟ್ಟಿಗೆ ಕೂತು ಚರ್ಚೆ ನಡೆಸುತ್ತೇವೆ ಎಂದರು. ಕಾಂಗ್ರೆಸ್ ಹೈಕಮಾಂಡ್ ಎಂಬುದು ಏಕಾಂಗಿ ಅಲ್ಲ. ಅದೊಂದು ತಂಡ. ಹೈಕಮಾಂಡ್ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಆ ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಇರುತ್ತಾರೆ. ಮುಂದೆ ಏನು ಮಾಡಬೇಕೆಂದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಮೀಟಿಂಗ್, ಖರ್ಗೆ ದಿಲ್ಲಿಗೆ ದೌಡು
ಸಮಸ್ಯೆಗೆ ಔಷಧಿ: ಖರ್ಗೆ
ಬುಧವಾರವಷ್ಟೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ʼಪ್ಲೀಸ್ ವೇಟ್ʼ ಎಂಬ ಸಂದೇಶ ಕಳುಹಿಸಿದ್ದರು. ಅದಾದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಮತ್ತೆ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿಗೆ ಬಂದ ನಂತರ ರಾಹುಲ್ ಗಾಂಧಿ ಜೊತೆ ಅವರು ಸುಮಾರು 25 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತನಾಡಿದ್ದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ದೆಹಲಿಯಿಂದಲೇ ಕರ್ನಾಟಕದ ಸಮಸ್ಯೆಗಳಿಗೆ ಔಷಧಿ ನೀಡುತ್ತೇವೆ. ಹೈಕಮಾಂಡ್‌ನಲ್ಲಿ ನಾನಿದ್ದೇನೆ, ರಾಹುಲ್ ಗಾಂಧಿ ಇದ್ದಾರೆ, ಅಧಿನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನಾವೆಲ್ಲ ಕುಳಿತು ಯೋಚಿಸಿ, ಏನು ಮಾಡಬೇಕು, ಯಾವ ಪರಿಹಾರ ನೀಡಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದ್ದರು.