ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಪ್ರಲ್ಹಾದ್‌ ಜೋಶಿ

Pralhad Joshi: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್‌ 30ರಿಂದ ಮತ್ತೊಂದು ಇಂಡಿಗೋ (IndiGo6E) ವಿಮಾನ ಸಂಚಾರ ಆರಂಭವಾಗಲಿದೆ. ಈ ಎರಡು ಮಹಾನಗರಗಳ ನಡುವೆ ಈಗ ನಿತ್ಯ ಮೂರು ವಿಮಾನಗಳ ಸಂಚಾರ ಆರಂಭವಾದಂತೆ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಪ್ರಲ್ಹಾದ್‌ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ.

Profile Siddalinga Swamy Mar 24, 2025 8:19 PM

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಮತ್ತು ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿ (Hubballi) ಮಧ್ಯೆ ಮತ್ತೊಂದು ವಿಮಾನಯಾನ ಅತಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್‌ 30ರಿಂದ ಮತ್ತೊಂದು ಇಂಡಿಗೋ (IndiGo6E) ವಿಮಾನ ಸಂಚಾರ ಆರಂಭವಾಗಲಿದೆ. ಈ ಎರಡು ಮಹಾನಗರಗಳ ನಡುವೆ ಈಗ ನಿತ್ಯ ಮೂರು ವಿಮಾನಗಳ ಸಂಚಾರ ಆರಂಭವಾದಂತೆ ಆಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಈವರೆಗೆ ಎರಡು ವಿಮಾನಗಳ ಸೇವೆಯಿದೆ. ಆದರೆ, ಮತ್ತೊಂದು ವಿಮಾನಯಾನದ ಅವಶ್ಯಕತೆಯಿದ್ದು, ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಸಚಿವ ಜೋಶಿ ಅವರು ಇಂದು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಂಡಿಗೋ ತ್ವರಿತವಾಗಿ ವಿಮಾನ ಸೇವೆಗೆ ನಿರ್ಣಯ ಕೈಗೊಂಡಿದೆ.

ವಿಮಾನ ಹಾರಾಟ ಸಮಯ ಇಂತಿದೆ

  • Bengaluru - Hubballi 6E7056 9:55 AM - 11:20 AM
  • Hubballi - Bengaluru 6E 7263 11:55 AM - 1:20 PM

ಈ ವಿಮಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ.

ಈ ಸುದ್ದಿಯನ್ನೂ ಓದಿ | Job Guide: ರಾಷ್ಟ್ರೀಯ ಕೆಮಿಕಲ್‌ & ಫರ್ಟಿಲೈಸರ್ಸ್‌ ಲಿಮಿಟೆಡ್‌ನಲ್ಲಿದೆ 74 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ ಕಲ್ಪಿಸಿದ್ದಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇಂಡಿಗೋ ಆಡಳಿತ ವರ್ಗಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ, ಹುಬ್ಬಳ್ಳಿ ಮತ್ತು ಅಹ್ಮದಾಬಾದ್‌ ನಡುವೆಯೂ ವಿಮಾನಯಾನ ಆರಂಭಿಸುವಂತೆ ಇಂಡಿಗೋ ಅಧಿಕಾರಿಗಳ ಗಮನ ಸೆಳೆದಿದ್ದಾರೆ.