ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೇಂದ್ರದಿಂದ ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಸೂಪರ್‌ ಫಾಸ್ಟ್‌ ವಿಶೇಷ ರೈಲು

Pralhad Joshi: ಕೇಂದ್ರ ಸರ್ಕಾರವು ದೀಪಾವಳಿ ವೇಳೆ ರಾಜ್ಯಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಮತ್ತು ವಾಣಿಜ್ಯ ನಗರಿ ಹುಬ್ಬಳ್ಳಿ ಮಧ್ಯೆ ನಿತ್ಯ ʼಸೂಪರ್ ಫಾಸ್ಟ್ ವಿಶೇಷ ರೈಲುʼ ಸಂಚಾರದ ಕೊಡುಗೆ ನೀಡಿದೆ. ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ.

ನವದೆಹಲಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ (Pralhad Joshi) ಪ್ರಯತ್ನದ ಫಲವಾಗಿ ಕೇಂದ್ರ ಸರ್ಕಾರ (Central Government) ದೀಪಾವಳಿ (Deepavali) ವೇಳೆ ರಾಜ್ಯಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಹುಬ್ಬಳ್ಳಿ ಮಧ್ಯೆ ನಿತ್ಯ ʼಸೂಪರ್ ಫಾಸ್ಟ್ ವಿಶೇಷ ರೈಲುʼ ಸಂಚಾರದ ಕೊಡುಗೆ ನೀಡಿದೆ. ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅದರಂತೆ ರೈಲು ಸಂಖ್ಯೆ: 20687 ಮತ್ತು 20688 SBC ಈ ಮಾರ್ಗದಲ್ಲಿ ನಿಯತಕಾಲಿಕವಾಗಿ ಸಂಚಾರ ಆರಂಭಿಸಲಿವೆ.

ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಕೊಂಡಿಯಂತಿರುವ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಹೆಚ್ಚಿನ ಜನಸಂಪರ್ಕ ಇರುವುದರಿಂದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಕೆಲವು ದಿನಗಳ ಹಿಂದಷ್ಟೇ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. ಸಚಿವ ಜೋಶಿ ಅವರ ಒತ್ತಾಸೆಗೆ ಸ್ಪಂದಿಸಿದ ರೈಲ್ವೆ ಸಚಿವರೀರ್ವರೂ ಇದೀಗ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಮತ್ತೊಂದು ಸೂಪರ್‌ ಫಾಸ್ಟ್‌ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.

ಈ ಸೂಪರ್‌ ಫಾಸ್ಟ್‌ ರೈಲು ಹುಬ್ಬಳ್ಳಿ, ಕರ್ಜಗಿ, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಬಿರೂರು, ಅರಸಿಕೆರೆ, ಸಂಪಿಗೆ ರೋಡ್‌, ತುಮಕೂರು, ಯಶವಂತಪುರ ಮತ್ತು ಕೆಎಸ್‌ಆರ್‌ ಬೆಂಗಳೂರು ಮಧ್ಯೆ ಸಂಚರಿಸಲಿದ್ದು, ರಾಜಧಾನಿ ಮತ್ತು ಉತ್ತರ ಕರ್ನಾಟಕ ಮಾತ್ರವಲ್ಲದೆ, ಮಧ್ಯ ಕರ್ನಾಟಕಕ್ಕೂ ಸಂಪರ್ಕ ಸೇತುವಾಗಿದ್ದು, ಇದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಿಗೂ ಹೆಚ್ಚಿನ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ಸುದ್ದಿಯನ್ನೂ ಓದಿ | Solar Energy Revolution: ಸೌರ ವಿದ್ಯುತ್‌ ಬೆಲೆ ಪ್ರತಿ ಯೂನಿಟ್‌ಗೆ ಕೇವಲ 2.15 ರೂ.ಗೆ ಇಳಿಕೆ: ಪ್ರಲ್ಹಾದ್‌ ಜೋಶಿ

ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಈ ಹೊಸ ರೈಲು ಸಮಸ್ತ ಉತ್ತರ ಕರ್ನಾಟಕದ ಅಭಿವೃದ್ಧಿ ಜತೆಗೆ ವಿವಿಧ ಪ್ರದೇಶಗಳ ವಾಣಿಜ್ಯೋದ್ಯಮಕ್ಕೂ ಅನುಕೂಲವಾಗಲಿದೆ. ಹೀಗಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಹೊಸ ರೈಲು ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ವಿ. ಸೋಮಣ್ಣ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.