Pralhad Joshi: ಕರ್ನಾಟಕವನ್ನು ದೋಚುತ್ತಾ ಅಧಃಪತನದತ್ತ ನೂಕುತ್ತಿದೆ ಕಾಂಗ್ರೆಸ್ ಸರ್ಕಾರ: ಜೋಶಿ ಕಿಡಿ
Pralhad Joshi: ರಾಜ್ಯ ಸರ್ಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣ ಹಳ್ಳಕ್ಕೆ ತಳ್ಳಿದೆ. ಅಲ್ಲದೇ, ಕೈಗೊಂಡಿರುವ ಕಾಮಗಾರಿಗಳ ಬಗೆಗಿನ ಮೊತ್ತವನ್ನೂ ಗುತ್ತಿಗೆದಾರರಿಗೆ ನೀಡದೆ ಅವರ ಜೀವನವನ್ನು ದುಸ್ಥರಕ್ಕೆ ತಳ್ಳಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ. -

ನವ ದೆಹಲಿ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದೋಚುತ್ತ ಅಧಃಪತನದತ್ತ ನೂಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ. ಅಭಿವೃದ್ಧಿ ಕಾಮಗಾರಿಗಳು ನಡೆದು ವರ್ಷಗಳೇ ಕಳೆದರೂ ಹಣ ನೀಡದೇ ಸತಾಯಿಸುತ್ತಿದೆ. ಕಮಿಷನ್ ದಂಧೆಯಲ್ಲಿ ತೊಡಗಿ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರ ವಿರುದ್ಧ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಪತ್ರ ಬರೆದರೂ ಕಿಮ್ಮತ್ತಿಲ್ಲದಂತಾಗಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಅವೈಜ್ಞಾನಿಕ ಗ್ಯಾರೆಂಟಿಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯದ ಸಂಪತ್ತನ್ನೇ ಹಾಳು ಮಾಡಿದೆ ಎಂದು ದೂರಿದ್ದಾರೆ.
ರಾಜ್ಯ ಸರ್ಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣ ಹಳ್ಳಕ್ಕೆ ತಳ್ಳಿದೆ. ಅಲ್ಲದೇ, ಕೈಗೊಂಡಿರುವ ಕಾಮಗಾರಿಗಳ ಬಗೆಗಿನ ಮೊತ್ತವನ್ನೂ ಗುತ್ತಿಗೆದಾರರಿಗೆ ನೀಡದೆ ಅವರ ಜೀವನವನ್ನು ದುಸ್ಥರಕ್ಕೆ ತಳ್ಳಿದೆ ಎಂದು ಖಂಡಿಸಿದರು.
ಈ ಸುದ್ದಿಯನ್ನೂ ಓದಿ | Karnataka Rains: ಅ.5ರವರೆಗೆ ರಾಜ್ಯದ ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದೆ. ಒಂದೆಡೆ ಎಲ್ಲದರ ಬೆಲೆ ಏರಿಕೆ ಬರೆ ಎಳೆದು ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದ್ದು, ಮತ್ತೊಂದೆಡೆ ಗ್ಯಾರೆಂಟಿಗಳ ನೆಪದಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ವರ್ಗಾವಣೆಯನ್ನು ಒಂದು ದಂಧೆಯನ್ನಾಗಿ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.