Pralhad Joshi: ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪಾಕ್‌ಗೆ ಸರಕು ಮಾರಾಟ ನಿಲ್ಲಿಸಿ; ಸಚಿವ ಪ್ರಲ್ಹಾದ್ ಜೋಶಿ ಸೂಚನೆ
Pralhad Joshi: ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪಾಕಿಸ್ತಾನಕ್ಕೆ ಸರಕು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ.

ನವದೆಹಲಿ: ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪಾಕಿಸ್ತಾನಕ್ಕೆ ಸರಕು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪಾಕಿಸ್ತಾನಕ್ಕೆ ಸರಕುಗಳ ಮಾರಾಟ ಮಾಡದಂತೆ ಎಲ್ಲಾ ವಾಣಿಜ್ಯಿಕ ಕಂಪನಿಗಳು ಮತ್ತು ಕಾರ್ಪೋರೇಷನ್ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಈ ಹಿಂದೆಯೇ ನೋಟಿಸ್ ಜಾರಿ ಮಾಡಿದೆ. ಆದರೂ ಕೆಲ ಇ-ಕಾಮರ್ಸ್ ವೇದಿಕೆ, ಸಂಸ್ಥೆಗಳಲ್ಲಿ ಸರಕು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಂದ್ರ ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಸಚಿವರು ಕಟ್ಟೆಚ್ಚರ ನೀಡಿದ್ದಾರೆ.
ಅಮೇಜಾನ್, ಫ್ಲಿಪ್‌ಕಾರ್ಟ್, ಯು ಬೈ ಇಂಡಿಯಾ, Etsy, ದಿ ಫ್ಲ್ಯಾಗ್ ಕಂಪನಿ ಮತ್ತು ಕಾರ್ಪೊರೇಷನ್‌ಗಳಿಗೆ ಸರಕು ಮಾರಾಟ ಮಾಡದಂತೆ ನೋಟಿಸ್ ಜಾರಿ ಮಾಡಿದೆ. ಆದರೂ ಈ ಆದೇಶ ಉಲ್ಲಂಘಿಸುತ್ತಿರುವುದು ಗೊತ್ತಾಗಿದೆ. ದೇಶದ ಹಿತದೃಷ್ಟಿಯಿಂದ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಜೋಶಿ ಸೂಚಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Karnataka Rains: ರಾಜ್ಯದ ಒಳನಾಡಿನಲ್ಲಿ ಅಬ್ಬರಿಸಲಿದೆ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆ
ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಪಾಕಿಸ್ತಾನ ಸಂಬಂಧಿತ ಎಲ್ಲಾ ವಸ್ತುಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ರಾಷ್ಟ್ರೀಯ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿರ್ದೇಶನ ನೀಡಿದ್ದಾರೆ.