ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಡ್ರಗ್ಸ್‌, ಗಾಂಜಾ ಮಾಫಿಯಾ ತಾಣವಾಗಿದೆ: ಜೋಶಿ

Pralhad Joshi: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದುರಾಡಳಿತದ ಪರಮಾವಧಿ ಎಲ್ಲೇ ಮೀರಿದೆ. ಒಂದು ಸುಸಂಸ್ಕೃತಿಯ ರಾಜ್ಯವಾಗಿರುವ ಕರ್ನಾಟಕವನ್ನು ಇದೀಗ ಅಪರಾಧಿಗಳ ಸ್ವರ್ಗವನ್ನಾಗಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು, ಡ್ರಗ್ಸ್‌, ಗಾಂಜಾ ಮಾಫಿಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಡ್ರಗ್ಸ್‌, ಗಾಂಜಾ ಮಾಫಿಯಾ ತಾಣ: ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ. -

Profile Siddalinga Swamy Sep 15, 2025 10:31 PM

ನವದೆಹಲಿ: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಡ್ರಗ್ಸ್ ಮತ್ತು ಗಾಂಜಾ ಮಾಫಿಯಾದ ತಾಣವಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ. ರಾಜ್ಯದಲ್ಲಿ ಇಂದು ಡ್ರಗ್ಸ್‌, ಗಾಂಜಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದರಿಂದ ಯುವ ಸಮೂಹದ ಅಮೂಲ್ಯ ಜೀವವೇ ಬಲಿಯಾಗುತ್ತಿದೆ. ತುಷ್ಟೀಕರಣದಲ್ಲಿ ತೊಡಗಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಇದ್ಯಾವುದೂ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯದ ಹಲವೆಡೆ ಡ್ರಗ್ಸ್‌ ದಂಧೆ ರಾಜಾರೋಷವಾಗಿ ನಡೆಯುತ್ತಿರುವುದು ಅಲ್ಲಲ್ಲಿ ಬೆಳಕಿಗೆ ಬರುತ್ತಲೇ ಇದೆ. ಹಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕಾದ ರಾಜ್ಯ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿ ಬಿಟ್ಟಿದೆ ಎಂದು ಸಚಿವರು ದೂರಿದ್ದಾರೆ. ಡ್ರಗ್ಸ್‌ ಪ್ರಕರಣಗಳಲ್ಲಿ ಪೊಲೀಸರು ಪೆಡ್ಲರ್‌ಗಳ ಜತೆ ಶಾಮೀಲಾಗಿರುವುದು ಕೇಳಿ ಬರುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದ ಸಚಿವರು, ಯುವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.16,17 ರಂದು ವಿದ್ಯುತ್‌ ವ್ಯತ್ಯಯ

ಡ್ರಗ್ಸ್‌ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದುರಾಡಳಿತದ ಪರಮಾವಧಿ ಎಲ್ಲೇ ಮೀರಿದೆ. ಒಂದು ಸುಸಂಸ್ಕೃತಿಯ ರಾಜ್ಯವಾಗಿರುವ ಕರ್ನಾಟಕವನ್ನು ಇದೀಗ ಅಪರಾಧಿಗಳ ಸ್ವರ್ಗವನ್ನಾಗಿಸುತ್ತಿದೆ ಎಂದು ಖಂಡಿಸಿದ್ದು, ಡ್ರಗ್ಸ್‌, ಗಾಂಜಾ ಮಾಫಿಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.‌ ಸರ್ಕಾರದ ನಿರ್ಲಜ್ಜೆಯ ಆಡಳಿತದಲ್ಲಿ ಸಾರ್ವಜನಿಕರ ರಕ್ಷಣೆ-ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಸಂಪೂರ್ಣ ಶೂನ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.