#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Pralhad Joshi: ಸಿಎಂ ತವರಲ್ಲೇ ಪುಂಡರ ದಾಂಧಲೆ ವಿಪರ್ಯಾಸ: ಪ್ರಲ್ಹಾದ್‌ ಜೋಶಿ

Pralhad Joshi: ಮೈಸೂರಿನ ಉದಯಗಿರಿ ಪೊಲೀಸ್ ಸ್ಟೇಷನ್ ಮೇಲೆ ಪುಂಡರು ದಾಳಿ ಮಾಡಿದ್ದಲ್ಲದೇ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ತೀವ್ರ ಖಂಡನೀಯ. ಮುಖ್ಯಮಂತ್ರಿ ತವರೂರಿನಲ್ಲಿಯೇ ಹೀಗೆ ಗಲಭೆ ನಡೆಯುತ್ತಿರುವುದು ವಿಪರ್ಯಾಸ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಸಿಎಂ ತವರಲ್ಲೇ ಪುಂಡರ ದಾಂಧಲೆ ವಿಪರ್ಯಾಸ: ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ.

Profile Siddalinga Swamy Feb 12, 2025 12:05 PM

ಬೆಂಗಳೂರು: ಮುಖ್ಯಮಂತ್ರಿ ತವರಿನಲ್ಲೇ ಪೊಲೀಸರ ಮೇಲೆ ಹಲ್ಲೆ ನಡೆದಿರುವುದು ನಿಜಕ್ಕೂ ವಿಪರ್ಯಾಸ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ದಿನೇ ದಿನೇ ಹದಗೆಡುತ್ತಿದೆ. ಇದಕ್ಕೆ ಮೈಸೂರಿನಲ್ಲಿ ನಡೆದ ಘಟನೆಯೇ ನಿದರ್ಶನ. ಮೈಸೂರು (Mysuru) ಸಾಂಸ್ಕೃತಿಕ ರಾಜಧಾನಿ. ಅಲ್ಲದೇ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ತವರೂ ಆಗಿದೆ. ಇಂಥ ಪ್ರದೇಶದಲ್ಲೇ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ ಎಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಉದಯಗಿರಿ ಪೊಲೀಸ್ ಸ್ಟೇಷನ್ ಮೇಲೆ ಪುಂಡರು ದಾಳಿ ಮಾಡಿದ್ದಲ್ಲದೇ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ತೀವ್ರ ಖಂಡನೀಯ. ಮುಖ್ಯಮಂತ್ರಿ ತವರೂರಿನಲ್ಲಿಯೇ ಹೀಗೆ ಗಲಭೆ ನಡೆಯುತ್ತಿರುವುದು ವಿಪರ್ಯಾಸ ಎಂದೂ ಹೇಳಿದ್ದಾರೆ. ಬೆಂಗಳೂರಿನ ಇಂಡಿರಂಗಾರದಲ್ಲೂ ವ್ಯಕ್ತಿಯೋರ್ವ ನಾಲ್ವರಿಗೆ ಚೂರಿ ಇರಿದಿದ್ದಾನೆ. ರಾಜ್ಯದಲ್ಲಿ ಅಪರಾಧಿ ಕೃತ್ಯಗಳು ಹೆಚ್ಚುತ್ತಲೇ ಇವೆ. ಕಿಡಿಗೇಡಿಗಳಿಗೆ, ಪುಂಡರಿಗೆ ಭಯವೇ ಇಲ್ಲದಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಜೋಶಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Vande Bharat Train: ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ

ರಾಜ್ಯ ಸರ್ಕಾರ ಇಂಥ ಕೃತ್ಯಗಳನ್ನು ಹತ್ತಿಕ್ಕಬೇಕು. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಈ ಘಟನೆಯಿಂದಾದರೂ ಎಚ್ಚೆತ್ತುಕೊಂಡು ಪೊಲೀಸರಿಗೆ ಮತ್ತು ಜನರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಟ್ವೀಟ್ ಮಾಡಿದ್ದಾರೆ.