ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pramod Muthalik: ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಹೋರಾಟ: ಪ್ರಮೋದ್ ಮುತಾಲಿಕ್

Pramod Muthalik: ದೇಶದಾದ್ಯಂತ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ವಿರುದ್ಧ ಮುಂದಿನ ದಿನಗಳಲ್ಲಿ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ದಾಖಲೆ ಸಹಿತ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಪರ ಸಂಘಟನೆ ಹೋರಾಟ: ಪ್ರಮೋದ್ ಮುತಾಲಿಕ್

Profile Siddalinga Swamy Mar 18, 2025 10:51 PM

ತುಮಕೂರು: ದೇಶದಾದ್ಯಂತ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ವಿರುದ್ಧ ಮುಂದಿನ ದಿನಗಳಲ್ಲಿ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ದಾಖಲೆ ಸಹಿತ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದರು. ನಗರದಲ್ಲಿ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗತ್ತಿನಾದ್ಯಂತ ಇಸ್ಲಾಮಿಕ್ ಜಿಹಾದ್ ನಡೆಯುತ್ತಿದೆ. ಅದರಲ್ಲಿ ಪ್ರಮುಖವಾದದ್ದು ಲ್ಯಾಂಡ್ ಜಿಹಾದ್. ಜಾಗವನ್ನೇ ತಮ್ಮ ಕೈಯಲ್ಲಿ ತೆಗೆದುಕೊಂಡರೆ, ರಾಜ್ಯವನ್ನೇ ತಮ್ಮ ಕೈಯಲ್ಲಿ ನಡೆಸಬಹುದು ಎಂಬ ಭ್ರಮೆಯಲ್ಲಿದ್ದಾರೆ ಎಂದು ಅವರು ಆರೋಪಿಸಿದರು.

ವಕ್ಫ್ ಬೋರ್ಡ್ ಮೋಸ್ಟ್ ಡೇಂಜರಸ್. ಇದು ಭಯಾನಕವಾಗಿ ದೇಶದ ಜಾಗವನ್ನು ಅಧಿಕೃತವಾಗಿ, ಡಿಸಿಯೂ ಪ್ರಶ್ನೆ ಮಾಡದ ಹಾಗೆ ವ್ಯವಸ್ಥಿತವಾಗಿ ಕಬಳಿಸುತ್ತದೆ. ಹತ್ತಾರು ವರ್ಷಗಳಿಂದ ದೇವಾಲಯವಿದ್ದ ಜಾಗ, ನೂರಾರು ತರಕಾರಿ, ಹೂವು, ಹಣ್ಣು ಮಾರಾಟಗಾರಿಗೆ ಆಶ್ರಯವಾಗಿದ್ದ ನಗರದ ಸಿದ್ಧಿವಿನಾಯಕ ಮಾರುಕಟ್ಟೆ ಜಾಗವನ್ನು ಮಂಗಳೂರಿನ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್‌ಗೆ ಸೇರಿದ ವ್ಯಕ್ತಿಗಳಿಗೆ ಮಾಲ್ ಕಟ್ಟಲು ಗುತ್ತಿಗೆ ನೀಡುವ ಮೂಲಕ ನಗರದಲ್ಲಿ ಲ್ಯಾಂಡ್ ಜಿಹಾದ್‌ಗೆ ರಾಜಕಾರಣಿಗಳು ಬೆಂಬಲವಾಗಿ ನಿಂತಿದ್ದಾರೆ ಎಂದು ಆರೋಪಿಸಿದರು.

ಭಜರಂಗದಳ ತುಮಕೂರು ವಿಭಾಗದ ಸಂಚಾಲಕ ಮಂಜು ಭಾರ್ಗವ ಮಾತನಾಡಿ, ನಗರದ ವಿನಾಯಕನಗರದಲ್ಲಿನ ಮಾರುಕಟ್ಟೆ ಜಾಗದಲ್ಲಿ ಹತ್ತಾರು ವರ್ಷ ಮಾರುಕಟ್ಟೆ ನಡೆದು, ನಂತರದ ದಿನಗಳಲ್ಲಿ ಮಾರುಕಟ್ಟೆಯನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಲಾಯಿತು. ಸದರಿ ಜಾಗವನ್ನು ಅಧಿಕಾರಿಗಳು ಪಿಪಿಪಿ ಮಾಡಲ್‌ನಲ್ಲಿ ಮುಸ್ಲಿಂ ಎಜುಕೇಷನ್ ಟ್ರಸ್ಟ್ ಹಾಗೂ ಇನ್ನಿತರ ಸಂಸ್ಥೆಗಳ ನಡೆಸುವ ನಿರ್ಮಾಣ ಸಂಸ್ಥೆಗೆ 30 ವರ್ಷಗಳಿಗೆ ಲೀಸ್‌ಗೆ ನೀಡಲು ಮುಂದಾಗಿದ್ದಾರೆ. ಇದನ್ನು ವಿರೋಧಿಸಿ ಹೋರಾಟ ಮಾಡಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಇಲ್ಲಸಲ್ಲದೆ ಕೇಸು ಹಾಕಿ, ರೌಡಿಶೀಟರ್ ತೆರೆದು ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಸಿದ್ದಿವಿನಾಯಕ ಮಾರುಕಟ್ಟೆ ಬಗ್ಗೆ ಬಿಜೆಪಿ ಮುಖಂಡರ ಹೋರಾಟ ನಾಟಕೀಯ ಎಂದು ಆಪಾದಿಸಿದರು.

ಈ ಸುದ್ದಿಯನ್ನೂ ಓದಿ | Karnataka Weather: ರಾಜ್ಯದಲ್ಲಿ ಬಿರುಬಿಸಿಲು; ಕಲಬುರಗಿಯಲ್ಲಿ 40 ಡಿ.ಸೆ. ಗಡಿ ದಾಟಿದ ಉಷ್ಣಾಂಶ!

ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಜಿ, ಹಿಂದೂ ರಾಷ್ಟ್ರ ಸಂಕಲ್ಪ ಸಮಿತಿಯ ರಾಜ್ಯ ಸಂಚಾಲಕ ಮಾರಣ್ಣ ಪಾಳೇಗಾರ್, ಭಾರತೀಯ ಹಿಂದೂ ಸನಾತನ ಪ್ರತಿಷ್ಠಾನ ಸಂಕಲ್ಪ ಸಮಿತಿಯ ಮುನೇಗೌಡ, ಹಿಂದೂ ಕನ್ನಡಿಗರ ವೇದಿಕೆ ಹಿಮೇಶ ದೇಸಾಯಿ, ಅಜಾದ್ ಬ್ರಿಗೇಡ್ ರಾಜ್ಯಾಧ್ಯಕ್ಷ ಗಜೇಂದ್ರ ಸಿಂಗ್, ಹಿಂದೂ ಜಾಗೃತಿ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವು ಭಗತ್, ರಾಷ್ಟ್ರ ರಕ್ಷಣ ಸೇನೆಯ ರಾಜ್ಯಾಧ್ಯಕ್ಷ ಸುರೇಶಗೌಡ, ಹಿಂದೂ ಜನಜಾಗೃತಿ ಸಮಿತಿಯ ವೆಂಕಟೇಶ್, ಭಜರಂಗ ಸೇನೆಯ ಸುನಿಲ್‌ ಕುಮಾರ್ ಉಪಸ್ಥಿತರಿದ್ದರು.