ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ (maharshi valmiki gurupith) ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ (Prasannananda Puri swamiji) ಅವರಿಗೆ ಲಘು ಹೃದಯಾಘಾತ (heart attack) ಆಗಿದೆ. ಸದ್ಯ ಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಶ್ರೀಗಳನ್ನು ಕೂಡಲೇ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.
ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಸದ್ಯ ಶ್ರೀಗಳು ಹೈದರಾಬಾದ್‌ನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ.
Narayana Yaji Column: ವಾಲ್ಮೀಕಿಗಿರಿಯಿಂದ ಹುಟ್ಟಿದ ರಾಮಾಯಣ ಮಹಾನದಿ
ಶ್ರೀಗಳ ಆರೋಗ್ಯ ಹದಗೆಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಭಕ್ತರು ಮತ್ತು ಅನುಯಾಯಿಗಳಲ್ಲಿ ಆತಂಕ ಮೂಡಿದೆ. ಶ್ರೀಗಳು ಶೀಘ್ರವಾಗಿ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.