ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Teachers Protest: ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ; ಪ್ರಾಥಮಿಕ ಶಾಲಾ ಶಿಕ್ಷಕರ ʼಫ್ರೀಡಂ ಪಾರ್ಕ್ ಚಲೋʼ ಮುಂದೂಡಿಕೆ

Freedom Park Chalo: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆ ಯಶಸ್ವಿಯಾಗಿದ್ದು, ಸೆ. 4ರಂದು ಶಿಕ್ಷಕರ ಬೇಡಿಕೆಗಳನ್ನು ಸಚಿವ ಸಂಪುಟದಲ್ಲಿಟ್ಟು, ಸಮಸ್ಯೆ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸೆ. 3ರಂದು ನಡೆಸಲು ನಿರ್ಧರಿಸಿದ್ದ ಫ್ರೀಡಂಪಾರ್ಕ್ ಚಲೋ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಬೆಂಗಳೂರು: ಶಿಕ್ಷಕರ ಬೇಡಿಕೆಗಳನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸಮಸ್ಯೆ ಬಗೆಹರಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸೆ. 3ರಂದು ನಡೆಸಲು ನಿರ್ಧರಿಸಿದ್ದ ಫ್ರೀಡಂಪಾರ್ಕ್ ಚಲೋ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆ ಯಶಸ್ವಿಯಾಗಿದ್ದು, ಸೆ. 4ರಂದು ಶಿಕ್ಷಕರ ಬೇಡಿಕೆಗಳನ್ನು ಸಚಿವ ಸಂಪುಟದಲ್ಲಿಟ್ಟು, ಸಮಸ್ಯೆ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಸಭೆಯಲ್ಲಿ ಶಿಕ್ಷಕರ ಪ್ರಮುಖ ಬೇಡಿಕೆಗಳಿಗೆ ಸ್ಪಷ್ಟವಾಗಿ ಸ್ಪಂದಿಸಿದ ಸಚಿವರು, ಸೆಪ್ಟೆಂಬರ್ 4ರಂದು ಸಚಿವ ಸಂಪುಟದ ಸಭೆಯಲ್ಲಿ ಶಿಕ್ಷಕರ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತರಲಾಗುವುದು. ಹಾಗೂ ಶಿಕ್ಷಕರ ನ್ಯಾಯಯುತ ಬೇಡಿಕೆಗಳ ಬಗ್ಗೆ ಇಡೀ ಶಿಕ್ಷಣ ಇಲಾಖೆ ನಿಮ್ಮ ಜೊತೆಗಿರುವ ಕಾರಣ, ನೀವು ಹಮ್ಮಿಕೊಂಡಿರುವ ಹೋರಾಟವನ್ನು ಕೈಬಿಡಬೇಕೆಂದು ರಾಜ್ಯದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳು, ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ಕೋರಿದ್ದಾರೆ. ಇದರಿಂದ ಫ್ರೀಡಂಪಾರ್ಕ್ ಚಲೋ ತಾತ್ಕಾಲಿಕವಾಗಿ ಮುಂದೂಡಲು ಸಂಘ ನಿರ್ಧರಿಸಿದೆ.

ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿ ಡ. ರಶ್ಮಿ ಮಹೇಶ್, ಆಯುಕ್ತ ತ್ರಿಲೋಕಚಂದ್ರ.ಕೆ.ವಿ., ಪ್ರಾಥಮಿಕ ಶಿಕ್ಷಣ ನಿರ್ದೇಶಕರಾದ ಅನಿತಾ ನಜಾರೀಯಾ, ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ, ರಾಷ್ಟ್ರಾಧ್ಯಕ್ಷ ಬಸವರಾಜ ಗುರಿಕಾರ, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ಗೌರವಾಧ್ಯಕ್ಷ ಕೆ.ನಾಗೇಶ, ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್.ಎಚ್.ಎಸ್. ಉಪಾಧ್ಯಕ್ಷ ಪದ್ಮಲತಾ, ಮಾರುತೇಶ್, ಸಂಘಟನಾ ಕಾರ್ಯದರ್ಶಿಯಾದ ಪ್ರಮೀಳಾ.ಟಿ.ಕಾಮನಹಳ್ಳಿ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಈ ಬಗ್ಗೆ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಪ್ರತಿಕ್ರಿಯಿಸಿ, ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರಿಂದ ಸೆ.3ರಂದು ನಡೆಸಲು ತೀರ್ಮಾನಿಸಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ರಾಜ್ಯ ಸಂಘ ನಿರಂತರವಾಗಿ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡವನ್ನು ಹೇರುತ್ತಾ, ಭರವಸೆ ನೀಡಿರುವ ಅವಧಿಯೊಳಗೆ ಬೇಡಿಕೆಯನ್ನು ಈಡೇರಿಸದೇ ಇದ್ದರೆ, ಮತ್ತೊಮ್ಮೆ ರಾಜ್ಯದ ಕಾರ್ಯಕಾರಿ ಸಮಿತಿ ಸಭೆಯನ್ನು ಕರೆದು ಹೋರಾಟದ ದಿನಾಂಕ ನಿಗದಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | CM Siddaramaiah: ಅನ್ನದಾತರಿಗೆ ಗುಡ್‌ನ್ಯೂಸ್‌; ರಾಜ್ಯ ಸರ್ಕಾರದಿಂದ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ. ಸಾಲ ವಿತರಣೆ ಗುರಿ

ಶಿಕ್ಷಕರ ಬೇಡಿಕೆಗಳು ಏನು?

  • 2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು.
  • ಸೇವಾನಿರತ ಶಿಕ್ಷಕರಲ್ಲಿ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜ್ಯೇಷ್ಠತೆಯೊಂದಿಗೆ ವೇತನ ಬಡ್ತಿ ನೀಡಿ ʼಪದವೀಧರ ಶಿಕ್ಷಕರೆಂದುʼ ಪದನಾಮೀಕರಿಸುವುದು.
  • ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳು ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜ್ಯೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.