ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bus fire accident: ಮತ್ತೊಂದು ಖಾಸಗಿ ಬಸ್‌ ಧಗಧಗ, ನೆಲಮಂಗಲದಲ್ಲಿ 40 ಪ್ರಯಾಣಿಕರಿದ್ದ ಬಸ್‌ ಬೆಂಕಿಗಾಹುತಿ

ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ಬಸ್‌ನಲ್ಲಿ 40 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ.

ನೆಲಮಂಗಲದಲ್ಲಿ ಬಸ್‌ ಬೆಂಕಿಗಾಹುತಿ

ಬೆಂಗಳೂರು, ಫೆ.06 : ಚಿತ್ರದುರ್ಗ ಸಮೀಪ ನಡೆದ ಖಾಸಗಿ ಬಸ್‌ ಬೆಂಕಿ ದುರಂತ (private Bus fire accident) ನೆನಪಿನಿಂದ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತಷ್ಟು ಇಂಥ ದುರಂತಗಳಾಗುತ್ತಿವೆ. ಬೆಂಗಳೂರು (Bengaluru) ಸಮೀಪ ನೆಲಮಂಗಲದಲ್ಲಿ (Nelamangala) ಮತ್ತೊಂದು ಖಾಸಗಿ ಬಸ್ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ಬಸ್‌ನಲ್ಲಿ 40 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹನುಮಂತಪುರ ಗೇಟ್ ಬಳಿ ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ನೆಲಮಂಗಲ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Chitradurga Bus Accident: ಬಸ್‌ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು!

ಮೈಸೂರಿನಲ್ಲಿ 7 ಕಡೆ ಲೋಕಾಯುಕ್ತ ದಾಳಿ, ಲಕ್ಷಾಂತರ ಹಣ ಪತ್ತೆ

ಮೈಸೂರು: ನಗರದಲ್ಲಿ ಲೋಕಾಯುಕ್ತ ಪೊಲೀಸರು (Lokayukta Raid) ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ್ದಾರೆ. ಇಬ್ಬರು ಭ್ರಷ್ಟರಿಗೆ (Corrupt Officer) ಸೇರಿದ ಒಟ್ಟು 7 ಸ್ಥಳದಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆ ಜೆ.ಇ. ಕೆ.ಆರ್.ಚಂದ್ರಶೇಖರ್ ಮನೆ ಹಾಗೂ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ. ಚಂದ್ರಶೇಖರ್‌ಗೆ ಸಂಬಂಧಿಸಿದ ಮೈಸೂರಿನ ವಿಜಯ ನಗರದ ನಿವಾಸ, ಕೆಜಿ ಕೊಪ್ಪಲು ನಿವಾಸ ಹಾಗೂ ಟಿ.ನರಸೀಪುರ ಕಚೇರಿ ಏರಿ 4 ಕಡೆ ಏಕಕಾಲದಲ್ಲಿ ದಾಳಿ ನಡೆಸಿ 60 ಲಕ್ಷ ಹಣ ಪತ್ತೆ ಮಾಡಿದ್ದಾರೆ.

Chitradurga Bus Accident: ಸ್ಲೀಪರ್‌ ಬಸ್‌ ಬೆಂಕಿಗಾಹುತಿ: 9 ಪ್ರಯಾಣಿಕರು ಸಜೀವ ದಹನ, ನಡೆದದ್ದೇನು?

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಇಲಾಖೆ ಡೆಫ್ಯುಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಜಕಾರ್ತಿಗೆ ಸೇರಿದ ಎರಡು ನಿವಾಸ ಹಾಗೂ ಕಚೇರಿಯಲ್ಲಿ ಲೊಕಾಯುಕ್ತ ಪೊಲೀಸರ ಶೋಧ ನಡೆಸಿದ್ದಾರೆ.

ಹರೀಶ್‌ ಕೇರ

View all posts by this author