ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PES University: ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ಪ್ರೊ. ಜವಾಹರ್ ದೊರೆಸ್ವಾಮಿ ನೇಮಕ

Prof. Jawahar Doreswamy: ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿಯನ್ನಾಗಿ ಪ್ರೊ. ಜವಾಹರ್ ದೊರೆಸ್ವಾಮಿ ಅವರನ್ನು ಸರ್ವಾನುಮತದಿಂದ ನೇಮಕ ಮಾಡಲಾಗಿದೆ. ಅವರು ಮಾ. 21ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಂಪೂರ್ಣ ಗುಣಮಟ್ಟದ ಶಿಕ್ಷಣದ ಪ್ರಬಲ ಪ್ರತಿಪಾದಕ ಪ್ರೊ. ಜವಾಹರ್ ದೊರೆಸ್ವಾಮಿ, ಪ್ರಮುಖ ಕಾರ್ಯಕ್ಷಮತೆ ಸೂಚಕ ಆಧಾರಿತ ನಿರ್ವಹಣೆ ಮತ್ತು ಮಾನದಂಡದ ಮೇಲೆ ಗಮನ ಹರಿಸುವ ಮೂಲಕ ಶೈಕ್ಷಣಿಕ ಅನುಭವವನ್ನು ಹೆಚ್ಚಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರೊ. ಜವಾಹರ್ ದೊರೆಸ್ವಾಮಿ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ

ಪ್ರೊ. ಜವಾಹರ್ ದೊರೆಸ್ವಾಮಿ.

Profile Ramesh B Mar 20, 2025 6:00 PM

ಬೆಂಗಳೂರು: ಪಿಇಎಸ್ ವಿಶ್ವವಿದ್ಯಾಲಯ (PES University)ದ ಕುಲಾಧಿಪತಿಯನ್ನಾಗಿ ಪ್ರೊ. ಜವಾಹರ್ ದೊರೆಸ್ವಾಮಿ (Prof. Jawahar Doreswamy) ಅವರನ್ನು ಸರ್ವಾನುಮತದಿಂದ ನೇಮಕ ಮಾಡಲಾಗಿದೆ. ಪೀಪಲ್ಸ್ ಎಜುಕೇಶನ್ ಸೊಸೈಟಿಯ (ಪಿಇಎಸ್ ವಿಶ್ವವಿದ್ಯಾಲಯದ ಪ್ರಾಯೋಜಕ ಸಂಸ್ಥೆ) ಆಡಳಿತ ಸಮಿತಿಯ ಸದಸ್ಯರು ಸಭೆ ನಡೆಸಿ ಪ್ರೊ. ಜವಾಹರ್ ದೊರೆಸ್ವಾಮಿ ಅವರನ್ನು ಕುಲಾಧಿಪತಿಯನ್ನಾಗಿ ನೇಮಿಸಲು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಅವರು ಮಾ. 21ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸಂಪೂರ್ಣ ಗುಣಮಟ್ಟದ ಶಿಕ್ಷಣದ ಪ್ರಬಲ ಪ್ರತಿಪಾದಕ ಪ್ರೊ. ಜವಾಹರ್ ದೊರೆಸ್ವಾಮಿ, ಪ್ರಮುಖ ಕಾರ್ಯಕ್ಷಮತೆ ಸೂಚಕ ಆಧಾರಿತ ನಿರ್ವಹಣೆ ಮತ್ತು ಮಾನದಂಡದ ಮೇಲೆ ಗಮನ ಹರಿಸುವ ಮೂಲಕ ಶೈಕ್ಷಣಿಕ ಅನುಭವವನ್ನು ಹೆಚ್ಚಿಸುವ ಪ್ರಯತ್ನ ನಡೆಸಲಿದ್ದಾರೆ. ಅವರ ಯೋಜನೆಗಳು ನಾವೀನ್ಯತೆ ಮತ್ತು ಉದ್ಯಮಶೀಲತಾ ಕೇಂದ್ರ ಹಾಗೂ PESU ವೆಂಚರ್ ಲ್ಯಾಬ್‌ಗಳು ಸೇರಿದಂತೆ ಹಲವು ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರಗಳ ರಚನೆಗೆ ಕಾರಣವಾಗಿವೆ. ಇದು ವಿದ್ಯಾರ್ಥಿಗಳಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಅನ್ವಯಿಸಲು ಅತ್ಯಾಧುನಿಕ ಅವಕಾಶಗಳನ್ನು ಒದಗಿಸುತ್ತದೆ.

ಶೈಕ್ಷಣಿಕ ಅರ್ಹತೆಯನ್ನು ಗುರುತಿಸುವ ಮತ್ತು ಪುರಸ್ಕರಿಸುವ ಬದ್ಧತೆಯು ಪ್ರೊ. ಜವಾಹರ್ ದೊರೆಸ್ವಾಮಿ ಅವರ ನಾಯಕತ್ವಕ್ಕೆ ಉತ್ತಮ ಉದಾಹರಣೆ. 1991ರಿಂದ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು 100 ಕೋಟಿ ರೂ.ಗೂ ಹೆಚ್ಚು ವಿದ್ಯಾರ್ಥಿವೇತನ ಪಡೆದಿದ್ದಾರೆ. ಇದು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಅವರ ಯೋಜನೆಗೆ ಸಿಕ್ಕ ಪ್ರತಿಫಲ ಎಂದೇ ವಿಶ್ಲೇಷಿಸಲಾಗುತ್ತದೆ. ವಿದ್ಯಾರ್ಥಿಗಳ ಈ ಯಶಸ್ಸು ಪಿಇಎಸ್ ಅನ್ನು ದೇಶಾದ್ಯಂತ ಜನಪ್ರಿಯಗೊಳಿಸಿದೆ.

ಶೈಕ್ಷಣಿಕ ಹಿನ್ನೆಲೆ

ಪ್ರೊ. ಜವಾಹರ್ ದೊರೆಸ್ವಾಮಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಮತ್ತು ಅಮೆರಿಕದ ಟೆಕ್ಸಾಸ್ ಎ & ಎಂ ವಿಶ್ವವಿದ್ಯಾಲಯದಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರ ದೃಷ್ಟಿಕೋನ ಮತ್ತು ನಿರಂತರ ಅನ್ವೇಷಣೆ ಪಿಇಎಸ್‌ ಅನ್ನು ಉನನ್ತ ಮಟ್ಟಕ್ಕೇರಿಸಿದೆ.

ಪಿಇಎಸ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎಂ.ಆರ್‌. ದೊರೆಸ್ವಾಮಿ ನಿಧನ

ಕೆಲವು ದಿನಗಳ ಹಿಂದೆ ಪಿಇಎಸ್‌ ವಿಶ್ವವಿದ್ಯಾಲಯದ ಕುಲಾಧಿಪತಿ, ರಾಜ್ಯ ಸರ್ಕಾರದ ಶೈಕ್ಷಣಿಕ ಸುಧಾರಣೆಗಳ ಸಲಹೆಗಾರಾಗಿದ್ದ, ಮಾಜಿ ಎಂಎಲ್‌ಸಿ ಪ್ರೊ.ಎಂ.ಆರ್‌. ದೊರೆಸ್ವಾಮಿ (Dr. M.R. Doreswamy) ಅವರು ಬೆಂಗಳೂರಿನಲ್ಲಿ ನಿಧನ ಹೊಂದಿದ್ದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಕನ್ನಡದ ಬಗ್ಗೆ ಕಳಕಳಿ, ಕನ್ನಡ ಶಾಲೆಗಳ ಕುರಿತು ಕಾಳಜಿ ಮತ್ತು ಕನ್ನಡ ಶಾಲಾ ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ದೊರೆಸ್ವಾಮಿ ಅವರು ಇವುಗಳ ಅಭಿವೃದ್ಧಿಗಾಗಿ ಹತ್ತಾರು ಸಲಹೆಗಳನ್ನು ನೀಡಿದ್ದರು. ಇವರ ಈ ಸೇವೆಯನ್ನು ಗಮನಿಸಿ ರಾಜ್ಯ ಸರ್ಕಾರ ಶಿಕ್ಷಣ ಸುಧಾರಣೆಗಳ ಸಲಹೆಗಾರರನ್ನಾಗಿ ನೇಮಕ ಮಾಡಿತ್ತು.

ಸರ್ಕಾರಕ್ಕೆ ಸಲಹೆ ನೀಡುವುದರ ಜತೆಗೆ ತಾವೇ ಸುಮಾರು 40 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಆಮೂಲಾಗ್ರ ಬದಲಾವಣೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಕೃಷಿ ಕುಟುಂಬದಲ್ಲಿ ಜನಿಸಿದ ಇವರು ವಿಶ್ವ ಮಟ್ಟದಲ್ಲೇ ಪ್ರಸಿದ್ಧ ಪಿಇಎಸ್‌ ವಿಶ್ವವಿದ್ಯಾಲಯ ಸ್ಥಾಪಿಸಿದ್ದರು.