ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bigg Boss Kannada 12: ಬಿಗ್‌ ಬಾಸ್‌ ಶೋಗೆ ಬಿಗ್‌ ಸಂಕಷ್ಟ, ಪ್ರತಿಭಟನೆ, ಪೊಲೀಸ್‌ ಅನುಮತಿಯೂ ಇಲ್ಲ

Bigg Boss Kannada: ಇದೀಗ ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯದೇ ಬಿಗ್ ಬಾಸ್ ನಡೆಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿ ಬಂದಿದೆ. ಪ್ರಮುಖವಾಗಿ ಬಿಗ್ ಬಾಸ್ ಶೋ ನಡೆಸಲು ಪೊಲೀಸರು ನೀಡುವ ಅನುಮತಿ ಕಡ್ಡಾಯವಾಗಿದೆ. ಆದರೆ ಶೋ ನಡೆಸಲು ಪೊಲೀಸರ ಯಾವುದೇ ಅನುಮತಿ ಪಡೆದಿಲ್ಲ.

ಬೆಂಗಳೂರು: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ (Bigg Boss Kannada 12 reality show) ಸ್ಥಗಿತಗೊಳಿಸುವಂತೆ ಕನ್ನಡಪರ ಸಂಘಟನೆಯೊಂದು ಬಿಗ್ ಬಾಸ್ ಸೆಟ್ ಬಳಿ ಪ್ರತಿಭಟನೆ ಆರಂಭಿಸಿದೆ. ಇದಲ್ಲದೆ, ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೇ ಬಿಗ್ ಬಾಸ್ ನಡೆಸುತ್ತಿದ್ದಾರೆ ಎಂದು ದೂರಲಾಗಿದೆ. ನಿನ್ನೆ, ಬಗ್‌ ಬಾಸ್‌ ಆಯೋಜಕರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು. ಅನಧಿಕೃತ ಎಂದು ವಿದ್ಯುತ್ ಸಂಪರ್ಕ ಕಡಿತಕ್ಕೆ ಸಹ ಸೂಚನೆ ನೀಡಲಾಗಿತ್ತು.

35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋ ರಾಮನಗರ ತಾಲೂಕಿನ ಬಿಡದಿಯಲ್ಲಿದ್ದು, ಇಲ್ಲಿ ಬಿಗ್‌ ಬಾಸ್‌ ಶೂಟಿಂಗ್‌ ನಡೆಯುತ್ತಿದೆ. ರಾಜ್ಯ ನೀರು ಸಂಸ್ಕರಣ ಘಟಕದಿಂದ ಪರವಾನಗಿ ಪಡೆಯದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಗ್ ಬಾಸ್ ಶೋ ಮನೆ ಬಂದ್ ಮಾಡುವಂತೆ ನಿನ್ನೆ ನೋಟಿಸ್ ನೀಡಿತ್ತು. ಸ್ಟುಡಿಯೋಗೆ ಬೀಗ ಹಾಕಬೇಕು ಎಂದು ಹಿರಿಯ ಪರಿಸರಾಧಿಕಾರಿ ವಸುದೇವ ಅವರು ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ.

ಇದೀಗ ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯದೇ ಬಿಗ್ ಬಾಸ್ ನಡೆಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿ ಬಂದಿದೆ. ಪ್ರಮುಖವಾಗಿ ಬಿಗ್ ಬಾಸ್ ಶೋ ನಡೆಸಲು ಪೊಲೀಸರು ನೀಡುವ ಅನುಮತಿ ಕಡ್ಡಾಯವಾಗಿದೆ. ಆದರೆ ಶೋ ನಡೆಸಲು ಪೊಲೀಸರ ಯಾವುದೇ ಅನುಮತಿ ಪಡೆದಿಲ್ಲ.

ಇದನ್ನೂ ಓದಿ: Bigg Boss Kannada 12: ಆರಂಭವಾಗಿ ಕೆಲವೇ ದಿನಗಳಲ್ಲಿ ಕನ್ನಡ ಬಿಗ್‌ ಬಾಸ್‌ ಶೋ ಬಂದ್‌ ಆಗುತ್ತಾ? ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ನೀಡಿದ್ದೇಕೆ?

ಈ ಹಿಂದೆ ವಿದ್ಯುತ್ ಸಂಪರ್ಕ ಕಡಿತಕ್ಕೆ ಸಹ ನೋಟಿಸ್ ಜಾರಿ ಮಾಡಲಾಗಿತ್ತು. ಅನಧಿಕೃತ ಎಂದು ವಿದ್ಯುತ್ ಸಂಪರ್ಕ ಕಡಿತಕ್ಕೆ ಸೂಚನೆ ನೀಡಲಾಗಿತ್ತು. BMRDAಯ STF ತಂಡದಿಂದ AEE ಗೆ ಸೂಚನೆ ನೀಡಲಾಗಿತ್ತು. ಇವೆಲ್ಲದರ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋಗೆ ಸಂಕಷ್ಟ ಎದುರಾಗಿದೆ.

ಬಿಗ್‌ ಬಾಸ್‌ ಮನೆ ಬಳಿ ಪ್ರತಿಭಟನೆ

ರಾಮನಗರದ ಜಾಲಿವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಬಳಿಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರಿಂದ ಶೋ ಸ್ಥಗಿತಗೊಳಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಜಾಲಿವುಡ್ ಒಳಭಾಗದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಶೂಟಿಂಗ್‌ ಸ್ಥಗಿತಗೊಳಿಸುವಂತೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಹರೀಶ್‌ ಕೇರ

View all posts by this author