ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಾವು ಬೆಳೆಗಾರರಿಗೆ ನೆರವು ನೀಡಿ: ಕೃಷಿ ಸಚಿವರಿಗೆ ಪ್ರಲ್ಹಾದ್‌ ಜೋಶಿ ಪತ್ರ

Pralhad Joshi: ರಾಜ್ಯದ ಮಾವು ಬೆಳೆಗಾರರ ಬವಣೆ, ಸಂಕಷ್ಟ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ (ಜೂ.18) ಪತ್ರ ಬರೆದಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ರಾಜ್ಯದ ಮಾವು ಬೆಳೆಗಾರರ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.

ಮಾವು ಬೆಳೆಗಾರರಿಗೆ ನೆರವು ಕಲ್ಪಿಸಿ: ಕೃಷಿ ಸಚಿವರಿಗೆ ಜೋಶಿ ಪತ್ರ

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ) -

Profile
Siddalinga Swamy Jun 18, 2026 8:06 PM

ನವದೆಹಲಿ, ಜೂ. 18: ಕರ್ನಾಟಕದ ಮಾವು ಬೆಳೆಗಾರರ ಹಿತರಕ್ಷಣೆಗಾಗಿ ಈ ವರ್ಷವೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಮೂಲಕ ನೆರವಾಗುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕೇಂದ್ರ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ. ರಾಜ್ಯದ ಮಾವು ಬೆಳೆಗಾರರ ಬವಣೆ, ಸಂಕಷ್ಟ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ (ಜೂ. 18) ಪತ್ರ ಬರೆದಿರುವ ಸಚಿವ ಜೋಶಿ, ರಾಜ್ಯದ ಮಾವು ಬೆಳೆಗಾರರ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಮಾವು ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ ಕೂಡಲೇ 'ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್)' ಅಡಿ ನೆರವಾಗುವಂತೆ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ.

Pralhad Joshi

ಕರ್ನಾಟಕ ಮಾವು ಬೆಳೆಯುವ ಉತ್ತಮ ಪರಿಸರ ವ್ಯವಸ್ಥೆ ಹೊಂದಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಆದಾಯ ಮತ್ತು ಜೀವನೋಪಾಯಕ್ಕಾಗಿ ಈ ಬೆಳೆಯನ್ನು ಅವಲಂಬಿಸಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದಾಗಿ ವ್ಯತಿರಿಕ್ತ ಪರಿಣಾಮ ಎದುರಿಸುತ್ತಿದ್ದಾರೆ ಎಂದು ಸಚಿವರು ಮನವರಿಕೆ ಮಾಡಿಕೊಟ್ಟಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ, ಧಾರವಾಡ, ಬೆಳಗಾವಿ ಹೀಗೆ ರಾಜ್ಯದೆಲ್ಲೆಡೆ ಇರುವ ಪ್ರಮುಖ ಮಾರುಕಟ್ಟೆಗಳಲ್ಲಿ ತೋತಾಪುರಿ ಮಾವಿನ ಬೆಲೆ ಲಾಭದಾಯಕವಾಗಿಲ್ಲ. ಮಾದರಿ ದರಕ್ಕಿಂತ ಗಮನಾರ್ಹವಾಗಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದ ಬೆಳೆಗಾರರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದಲ್ಲದೆ, ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಈ ಬಾರಿ ಮಾವಿನ ಉತ್ಪಾದನೆ ಸಹ ಕಡಿಮೆಯಾಗಿದೆ. ಇದೆಲ್ಲದರ ಪರಿಣಾಮ ರೈತರಿಗೆ ತೀವ್ರ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಅವರು ಕೃಷಿ ಸಚಿವರ ಗಮನ ಸೆಳೆದಿದ್ದಾರೆ. ‌

ʼಹಸಿರು ಹೈಡ್ರೋಜನ್ ಪ್ರಮಾಣೀಕರಣ ಪೋರ್ಟಲ್ʼ ಆರಂಭ; ದೆಹಲಿಯಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಚಾಲನೆ

ತೋತಾಪುರಿ ಮಾವು ಬೆಳೆಗಾರರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಕಳೆದ ವರ್ಷದಂತೆ ಪ್ರಸಕ್ತ ವರ್ಷವೂ ಬೆಲೆ ಕೊರತೆ ಪಾವತಿ ಯೋಜನೆ ಅಡಿಯಲ್ಲಿ ನೆರವು ಕಲ್ಪಿಸಿ ಬೆಂಬಲಕ್ಕೆ ನಿಲ್ಲುವ ಅವಶ್ಯಕತೆಯಿದೆ. ಶೀಘ್ರವೇ ಸಕಾರಾತ್ಮಕ ಕ್ರಮ ಕೈಗೊಳ್ಳುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಒತ್ತಾಯಿಸಿದ್ದಾರೆ.