ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: ಬೆಂಗಳೂರಿಗೆ ಬಂದಿಳಿದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

Bengaluru: ದೆಹಲಿಯಿಂದ ಬೆಂಗಳೂರು HAL ಏರ್‌ಪೋರ್ಟ್‌ಗೆ ಬಂದಿಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಸ್ವಾಗತ ಕೋರಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಜೊತೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ.

ಬೆಂಗಳೂರು: ಬಿಜೆಪಿಯ (BJP) ಮತಗಳ್ಳತನ (rigging) ವಿರೋಧಿಸಿ ಬೆಂಗಳೂರಿನಲ್ಲಿ (Bengaluru) ಇಂದು ನಡೆಯಲಿರುವ ಕಾಂಗ್ರೆಸ್‌ ಪ್ರತಿಭಟನಾ ಜಾಥಾದಲ್ಲಿ ಭಾಗವಹಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸ್ವಾಗತಿಸಿದರು.

ದೆಹಲಿಯಿಂದ ಬೆಂಗಳೂರು HAL ಏರ್‌ಪೋರ್ಟ್‌ಗೆ ಬಂದಿಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಸ್ವಾಗತ ಕೋರಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಜೊತೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಬಿಜೆಪಿ ಕಳ್ಳತನ ರಾಹುಲ್‌ರಿಂದ ಬಹಿರಂಗ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ (Narendra Modi) ಅವರ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು? ಎನ್ನುವುದಕ್ಕೆ ರಾಹುಲ್‌ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸರ್ಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Congress Protest: ಮತಗಳ್ಳತನ ವಿರುದ್ಧ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆ ಆ.8ಕ್ಕೆ ಮುಂದೂಡಿಕೆ

ಹರೀಶ್‌ ಕೇರ

View all posts by this author