ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಮತ್ತೊಂದು ಬಲಿ; ಬಿಸಿಲ ತಾಪಕ್ಕೆ ಕಾರ್ಮಿಕ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ತಾಪ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ರಾಯಚೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. (Heat Stroke) ಬಿಸಿಲಿನ ತಾಪ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ನಿವಾಸಿಯಾದ ಹುಸೇನಪ್ಪ (45) ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ಅತೀ ಹೆಚ್ಚಿನ ತಾಪಮಾನದ ನಡುವೆಯೇ ವಿಕಸಿತ ಭಾರತ - ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್ ಅಡಿಯಲ್ಲಿ ಕೆಲಸಕ್ಕೆ ತೆರಳಿದ್ದರು.

ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ತೀವ್ರವಾದ ಬಿಸಿಲಿನಿಂದಾಗಿ ಅವರು ದಿಢೀರ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರ ಬಿಸಿಲಿನ ತಾಪಕ್ಕೆ ಬೆಳಗಾವಿ (Belagavi) ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದರು. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಅದರ ಪರಿಣಾಮಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳಲಾರಂಭಿಸಿವೆ. ಆರೋಗ್ಯದ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ವೈದ್ಯರು ಗಂಭೀರ ಎಚ್ಚರಿಕೆ ನೀಡಿದ್ದು, ಮಕ್ಕಳು-ವೃದ್ಧರು, ಗರ್ಭಿಣಿಯರು ಹೆಚ್ಚು ಅಪಾಯದಲ್ಲಿದ್ದು, ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ.

Karnataka Weather: ಇನ್ನೂ ಐದು ದಿನ ಬಿಸಿಲಿನ ಝಳ, ಹಲವೆಡೆ ಹೀಟ್‌ ವೇವ್‌ ಅಲರ್ಟ್

ವೈದ್ಯರು ನೀಡಿರುವ ಮಾಹಿತಿಯ ಪ್ರಕಾರ, ಈ ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಪ್ರಮಾಣ ಹೆಚ್ಚಾಗಿದ್ದು, ವಿಶೇಷವಾಗಿ ಡಿಹೈಡ್ರೇಷನ್, ಹೀಟ್ ಎಕ್ಸಾಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ.

Vishakha Bhat Heggar

View all posts by this author