ರಾಯಚೂರು: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಾಏಕಿ ಕುಸಿದು ಬಿದ್ದು (Heart Failure) ಇಬ್ಬರು ಸಾವನ್ನಪ್ಪಿದ್ದರು. ಅದೇ ರೀತಿಯ ಘಟನೆ ರಾಯಚೂರಿನಲ್ಲೂ (Raichur news) ಸಂಭವಿಸಿದೆ. ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ (DJ sound) ಡ್ಯಾನ್ಸ್ ಮಾಡುತ್ತಿರುವಾಗಲೇ ರಾಯಚೂರು ನಗರದ ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಕುಸಿದುಬಿದ್ದು ಮೃತಪಟ್ಟಿದ್ದಾನೆ.
ಮೊನ್ನೆ (ಆಗಸ್ಟ್ 31) ರಾತ್ರಿಯಿಡೀ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ನಿನ್ನೆ (ಸೆ. 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್‌ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.
ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಂಜುನಾಥ್ ಮೃತ ವ್ಯಕ್ತಿ. ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ. ಇದೇ ರೀತಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಕೂಡ ನಿನ್ನೆ ರಾತ್ರಿ ಘಟನೆ ನಡೆದಿದೆ. ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ (40) ಮೃತ ವ್ಯಕ್ತಿ.
ಇದನ್ನೂ ಓದಿ: Heart Attack: ಕೆಂಭಾವಿಯಲ್ಲಿ ಘೋರ ಘಟನೆ; ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವು!