MLA Karemma G: ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಕಾರು ಭೀಕರ ಅಪಘಾತ; ಲಿಂಗಸೂರು ಆಸ್ಪತ್ರೆಗೆ ದಾಖಲು
ಜೆಡಿಎಸ್ (JDS) ಶಾಸಕಿ ಕರೆಮ್ಮಾ ನಾಯಕ್ ಅವರು ಚಲಿಸುತ್ತಿದ್ದ ಕಾರು ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.

-

ರಾಯಚೂರು: ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ (MLA Karemma G) ಅವರು ಚಲಿಸುತ್ತಿದ್ದ ಕಾರು ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ದೇವದುರ್ಗದಿಂದ ಹುಬ್ಬಳ್ಳಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಾಸಕಿ ತೆರಳಿದ್ದಾರೆ.
ಶಾಸಕರು ತೆರಳುತ್ತಿದ್ದ ವೇಳೆ ಕಾರಿನ ಮುಂಬದಿ ಇದ್ದ ಮತ್ತೊಂದು ಕಾರಿಗೆ ನಾಯಿ ಅಡ್ಡ ಬಂದಿದೆ. ನಾಯಿ ತಪ್ಪಿಸಲು ಕಾರಿನ ಚಾಲಕ ಯತ್ನಿಸಿದ್ದು, ರಸ್ತೆ ಪಕ್ಕದ ಗುಡ್ಡಕ್ಕೆ ಕಾರು ಡಿಕ್ಕಿಯಾಗಿದೆ. ಹಿಂದೆಯೇ ಶಾಸಕರಿದ್ದ ಕಾರು ಕೂಡ ನಿಯಂತ್ರಣ ಕಳೆದುಕೊಂಡು ಅಪಘಾತ ನಡೆದಿದೆ. ಘಟನೆಯಲ್ಲಿ ಜಖಂಗೊಂಡಿರುವ ಎರಡು ಕಾರುಗಳು ಕೂಡ ಕರೆಮ್ಮಾ ನಾಯಕ್ ಅವರಿಗೆ ಸೇರಿದ್ದು ಎನ್ನಲಾಗಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಶಾಸಕಿ ಕರೆಮ್ಮಾ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಸುದ್ದಿಯನ್ನೂ ಓದಿ: Deadly Accident: ಭೀಕರ ಅಪಘಾತ... ಎದೆ ಸೀಳಿಕೊಂಡು ರಸ್ತೆಗೆ ಬಿದ್ರೂ ಮಿಡಿಯುತ್ತಿತ್ತು ಮಹಿಳೆಯ ಹಾರ್ಟ್!
ಘಟನೆಯ ಸ್ಥಳಕ್ಕೆ ಲಿಂಗಸ್ಗೂರು ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಸ್ಥಳೀಯ ತಹಶೀಲ್ದಾರ್ ಆಗಮಿಸಿ, ತನಿಖೆ ಪ್ರಾರಂಭಿಸಿದ್ದಾರೆ. ಪೊಲೀಸ್ ಪ್ರಕಾರ, ಚಾಲಕನ ವೇಗ ಮಿತಿ ಮೀರಿದ್ದು ಮುಖ್ಯ ಕಾರಣವಾಗಿದೆ. ಈ ರಸ್ತೆಯು ರಾಯಚೂರು-ಹೊರ್ಕಲ್ ಮಾರ್ಗವಾಗಿದ್ದು, ಇಲ್ಲಿ ಆಗಾಗ ಅಪಘಾತಗಳು ನಡೆಯುತ್ತಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಸದ್ಯ ಶಾಸಕಿ ಆರೋಗ್ಯ ಸ್ಥಿರವಾಗಿದೆ.ಕರೆಮ್ಮ ಬೆಂಬಲಿಗರು ಅವರ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸುತ್ತಿದ್ದಾರೆ.