ರಾಯಚೂರು: ತಂದೆ ಮತ್ತು ಆತನ ಸ್ನೇಹಿತನಿಂದಲೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು (Lingasugur) ಪಟ್ಟಣದಲ್ಲಿ ನಡೆದಿದೆ. ಸಂತ್ರಸ್ತೆಯ ತಂದೆ ಅಮರೇಶ್ ಹಾಗೂ ಸ್ನೇಹಿತ ಸೀನು ಬಂಧಿತ ಆರೋಪಿಗಳು. ಎರಡು ವರ್ಷಗಳಿಂದ ಬಾಲಕಿ ಮೇಲೆ ಇಬ್ಬರು ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಸದ್ಯ ಬಾಲಕಿಯನ್ನು ರಕ್ಷಿಸಿ ಪೊಲೀಸರು ಸಾಂತ್ವನ ಕೇಂದ್ರಕ್ಕೆ ರವಾನಿಸಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ತಂದೆ ಮತ್ತು ಸ್ನೇಹಿತನ ಕ್ರೂರತೆ ಬಗ್ಗೆ ಬಾಲಕಿ ಬಾಯ್ಬಿಟ್ಟಿದ್ದಾಳೆ. ಬಾಲಕಿ ಹೇಳಿಕೆ ಮೇರೆಗೆ ಆಕೆಯ ತಂದೆ ಹಾಗೂ ಆತನ ಸ್ನೇಹಿತನ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ಇಬ್ಬರೂ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿರುವುದಾಗಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.
Koppal Tractor accident: ಕೊಪ್ಪಳದಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಟ್ಯಾಂಕರ್ ಡಿಕ್ಕಿಯಾಗಿ 7 ಮಂದಿ ದುರ್ಮರಣ!
ವಿಜಯಪುರದಲ್ಲಿ ಮನೆ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು
ವಿಜಯಪುರ: ಬಿರುಗಾಳಿ ಸಹಿತ ಭಾರಿ ಮಳೆಯಿಂದ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ರಾತ್ರಿ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಜೀವಂತ ಸಮಾಧಿಯಾಗಿದ್ದಾರೆ.
ಮೃತರನ್ನು ಗುರುನಾಥ್ ಬಡಿಗೇರ್ (35), ಅವರ ಪತ್ನಿ ಜ್ಯೋತಿ ಬಡಿಗೇರ್ (28), ಹಾಗೂ ಅವರ ಇಬ್ಬರು ಪುತ್ರಿಯರಾದ ಕಲ್ಲಮ್ಮ ಬಡಿಗೇರ್ (13) ಮತ್ತು ಕಿರ್ತಿ ಬಡಿಗೇರ್ (9) ಎಂದು ಗುರುತಿಸಲಾಗಿದೆ.
ಸ್ವಂತ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬವು ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. ರಾತ್ರಿ ನಿರಂತರ ಮಳೆ ಹಾಗೂ ಗಾಳಿಯಿಂದ ದುರ್ಬಲಗೊಂಡಿದ್ದ ಮನೆಯ ಚಾವಣಿ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ನಿದ್ರೆಯಲ್ಲಿದ್ದ ಕುಟುಂಬ ಸದಸ್ಯರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗ್ರಾಮಸ್ಥರು ಕೂಡ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸಿದ್ದಾರೆ.