ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fire Accident: ಮಂತ್ರಾಲಯದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ; ಹೊತ್ತಿ ಉರಿದ ಮೇವಿನ ಬಣವೆಗಳು

Fire Accident in Mantralaya: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಗೋಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನೂರಾರು ಹಸುಗಳಿರುವ ಈ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ವ್ಯಾಪಿಸಿದ್ದು, ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಅದೃಷ್ಟವಶಾತ್, ಗೋವುಗಳಿಗೆ ಅಪಾಯವಾಗಿಲ್ಲ.

ಮಂತ್ರಾಲಯದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ

Prabhakara R Prabhakara R Aug 12, 2025 1:58 PM

ರಾಯಚೂರು: ಮಂತ್ರಾಲಯದ ರಾಯರ ಮಠದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಇದರಿಂದ ಗೋಶಾಲೆಯಲ್ಲಿ ಸಂಗ್ರಹಿಸಿದ್ದ ಮೇವಿನ ಬಣವೆಗಳು ಹೊತ್ತಿ ಉರಿದಿವೆ. ನೂರಾರು ಹಸುಗಳಿರುವ ಈ ಗೋಶಾಲೆಯಲ್ಲಿ ಘಟನೆ ಸಂಭವಿಸಿದ್ದರಿಂದ ಆತಂಕದ ಸ್ಥಿತಿ ನಿರ್ಮಾಣವಾಗುತ್ತು. ಅದೃಷ್ಟವಶಾತ್, ಗೋವುಗಳಿಗೆ ಅಪಾಯವಾಗಿಲ್ಲ.

ಕ್ಷಣಮಾತ್ರದಲ್ಲಿ ಬೆಂಕಿಯ ಜ್ವಾಲೆಗಳು ಗೋಶಾಲೆಯ ಒಂದು ಭಾಗವನ್ನು ಆವರಿಸಿತು. ಗೋಶಾಲೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೈನರ ಧಾರ್ಮಿಕ ಭಾವನೆಗೆ ಧಕ್ಕೆ: ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಕೇಸು ದಾಖಲು

ಹುಬ್ಬಳ್ಳಿ: ಗಿರೀಶ ಮಟ್ಟೆಣ್ಣವರ್‌ (Girish Mattennavar) ಹಾಗೂ ಯೂಟ್ಯೂಬರ್‌ (Youtuber) ಒಬ್ಬನ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳಕ್ಕೆ (Dharmasthala) ಸಂಬಂಧಿಸಿ ಮಾತನಾಡುತ್ತ ಜೈನ ಧರ್ಮೀಯರ ವಿರುದ್ಧ ಅವಮಾನಕರ ಹೇಳಿಕೆ, ಜೈನರ ನಂಬಿಕೆಗಳಿಗೆ ಧಕ್ಕೆಯಾಗುವ ವರ್ತನೆಗಳ ಹಿನ್ನೆಲೆಯಲ್ಲಿ ಛಬ್ಬಿ ಗ್ರಾಮದ ಅಜೀತ್‌ ಬಸಾಪುರ ಎಂಬವರು ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್‌ ಜೀರೋ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗಿರೀಶ ಮಟ್ಟೆಣ್ಣವರ್‌ ಅವರು, ‘ಕುಡ್ಲಾ ರಾಂಪೇಜ್‌’ ಯೂಟ್ಯೂಬ್‌ ಚಾನೆಲ್‌ಗೆ ಸಂದರ್ಶನ ನೀಡುವಾಗ ಜೈನರು ಕ್ರೂರಿಗಳು, ದಬ್ಬಾಳಿಕೆ ಮಾಡುವವರು, ಮತಾಂಧರು ಎಂದು ಅಪಮಾನ ಮಾಡಿದ್ದಾರೆ. ಅಲ್ಲದೆ ಯೂಟ್ಯೂಬರ್‌ ಹಾಗೇ ಪ್ರಸಾರ ಮಾಡಿ ಸಮುದಾಯದ ಭಾವನಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಿಡಿದೆದ್ದ ಭಕ್ತರು

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಹಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಧರ್ಮಸ್ಥಳ ಪರ ಭಕ್ತರು ಸೋಮವಾರ ರಾಜ್ಯದ ಹಲವೆಡೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಕುರಿತು ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಮಧ್ಯೆ, ಆ.24ರಂದು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ನಡೆಸಲು ಚಿಂತನೆ ನಡೆದಿದೆ. ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸಂಜೆ 4 ಗಂಟೆಗೆ ರಾಜ್ಯದ ಪ್ರಮುಖ ಹಿಂದೂ ನಾಯಕರು, ಧಾರ್ಮಿಕ ಮುಖಂಡರು ಸೇರಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿ ಸಮಾವೇಶ ನಡೆಸಲು ಯೋಜಿಸಲಾಗುತ್ತಿದೆ. ಆ ಮೂಲಕ ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿಯ ವಿರುದ್ದ ಒಗ್ಗಟ್ಟು ಪ್ರದರ್ಶಿಸಲು ಚಿಂತನೆ ನಡೆದಿದೆ.

ಇದನ್ನೂ ಓದಿ: Dharmasthala Case: ಧರ್ಮಸ್ಥಳದಲ್ಲಿ ಹಲ್ಲೆ, ಯೂಟ್ಯೂಬರ್‌ಗಳ ಮೇಲೂ ಬಿತ್ತು ಕೇಸ್

ಮಂಡ್ಯದಲ್ಲಿ ಸಿಲ್ವರ್ ಜ್ಯೂಬಿಲಿ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಭಕ್ತರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾಕಾರರು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅನಾಮಿಕ ದೂರುದಾರನನ್ನು ಬಳಸಿಕೊಂಡು ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಮಾಹಿತಿ ಬಿತ್ತರಿಸಲಾಗುತ್ತಿದೆ. ಇದು ಭಕ್ತರಿಗೆ ನೋವುಂಟು ಮಾಡುತ್ತಿದ್ದು, ಈ ಷಡ್ಯಂತ್ರವನ್ನು ನಾವು ಸಹಿಸುವುದಿಲ್ಲ ಎಂದು ಕಿಡಿ ಕಾರಿದರು. ಅಪಪ್ರಚಾರ ಮಾಡುತ್ತಿರುವವರ ಹಿನ್ನೆಲೆ, ಸುಳ್ಳು ಆರೋಪ ಮಾಡಲು ಅವರಿಗೆ ಪ್ರಚೋದನೆ ನೀಡುತ್ತಿರುವವರು, ಈ ತಂಡಕ್ಕೆ ಬರುತ್ತಿರುವ ಹಣಕಾಸಿನ ನೆರವಿನ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.