ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಮಂಗಳವಾರ ಲಾರಿ ಹಾಗೂ ಎರಡು ಗೂಡ್ಸ್ ವಾಹನಾಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಇಂದು ಸಂಜೆ ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ಹಾಗೂ ಗಾಯಾಳುಗಳ ಗುರುತು ಪತ್ತೆಯಾಗಿಲ್ಲ. ಭೀಕರ ಅಪಘಾತದಲ್ಲಿ ಕೆಲ ಕುರಿಗಳು ಕೂಡ ಸಾವನ್ನಪ್ಪಿವೆ. ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡು ಪಿಕ್‌ಅಪ್ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ವಾಹನದಲ್ಲಿದ್ದ ಹಲವಾರು ಕುರಿಗಳು ಸಹ ಅಪಘಾತದಲ್ಲಿ ಮೃತಪಟ್ಟಿವೆ. ಒಟ್ಟು ಎಂಟು ಜನ ಎರಡು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದು, ಐವರು ಜೀವ ಕಳೆದುಕೊಂಡಿದ್ದಾರೆ.
ಅಪಘಾತ ಸಂಭವಿಸಿದ ಕೂಡಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಿನ್ನೆ ನಡೆದಿದೆ. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. 12 ಮಂದಿ ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಇಬ್ಬರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್- ಟ್ರಕ್ ನಡುವೆ ಅಪಘಾತ; ಓರ್ವ ಸಾವು, 10 ಮಂದಿಗೆ ಗಂಭೀರ ಗಾಯ
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲಕ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕಂಟೇನರ್ ವಾಹನದಲ್ಲಿ ತನ್ನ ಸ್ನೇಹಿತರೊಂದಿಗೆ ಬಿಹಾರಕ್ಕೆ ಸುಹಾಸ್ ತೆರಳುತ್ತಿದ್ದ ಎನ್ನಲಾಗಿದೆ. ಇನ್ನು ಹೊಸ ಬೈಕುಗಳನ್ನ ಹೊತ್ತು ಹೈದರಾಬಾದ್ ಕಡೆಗೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಸುಗಮ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ.