Basangouda Patil Yatnal: ಯತ್ನಾಳ್ ಇದ್ದ ವೇದಿಕೆ ಮೇಲೆ ಮಚ್ಚು ಹಿಡಿದು ಹೋಗಿದ್ದ ವ್ಯಕ್ತಿ ಬಂಧನ
Basangouda Patil Yatnal: ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಭಾನುವಾರ ಈ ಘಟನೆ ನಡೆದಿತ್ತು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವೇದಿಕೆ ಮೇಲೆ ಮಾತನಾಡುತ್ತಿದ್ದ ವೇಳೆ, ವ್ಯಕ್ತಿಯೊಬ್ಬ ಮಚ್ಚು ಹಿಡಿದು ಬಂದು ತೀವ್ರ ಆತಂಕ ಸೃಷ್ಟಿಸಿದ್ದ. ಹೀಗಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.


ರಾಯಚೂರು: ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರಿದ್ದ ವೇದಿಕೆಗೆ ಮಚ್ಚು ಹಿಡಿದು ಹೋಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಯತ್ನಾಳ್ ವೇದಿಕೆ ಮೇಲೆ ಮಾತನಾಡುತ್ತಿದ್ದ ವೇಳೆ, ವ್ಯಕ್ತಿ ಮಚ್ಚು ಹಿಡಿದು ಬಂದು ತೀವ್ರ ಆತಂಕ ಸೃಷ್ಟಿಸಿದ್ದ. ಹೀಗಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಶ್ರೀನಿವಾಸ್ ಪೂಜಾರ್(46) ಎಂದು ಗುರುತಿಸಲಾಗಿದ್ದು, ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಭಾನುವಾರ ಈ ಘಟನೆ ನಡೆದಿತ್ತು. ಶ್ರೀನಿವಾಸ್ ಮಚ್ಚು ಹಿಡಿದು ಶಾಸಕ ಯತ್ನಾಳ್ ಅವರು ಮಾತನಾಡುತ್ತಿದ್ದ ವೇಳೆ ವೇದಿಕೆ ಹತ್ತಿದ್ದ. ಈ ವೇಳೆ ಆತ ಸಂಪೂರ್ಣ ಕುಡಿದಿದ್ದ. ಮಚ್ಚನ್ನು ಸೊಂಟದಲ್ಲಿ ಇಟ್ಟುಕೊಂಡಿದ್ದ. ಮದ್ಯದ ಅಮಲಿನಲ್ಲಿ ಆತ ವೇದಿಕೆಯ ಮೇಲೆ ಹತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯತ್ನಾಳ್ ಅವರಿಗೆ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ತಿಳಿದಿದೆ ಮತ್ತು ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗಿದೆ. ಶ್ರೀನಿವಾಸ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಈ ಸುದ್ದಿಯನ್ನೂ ಓದಿ | BY Vijayendra: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ: ವಿಜಯೇಂದ್ರ
ಶ್ರೀನಿವಾಸ್ ಯಾರ ವಿರುದ್ಧವೂ ಹಲ್ಲೆಗೆ ಯತ್ನಿಸಿಲ್ಲ. ಸಾಲ ಕೊಟ್ಟವರ ದಾಳಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮಚ್ಚನ್ನು ಇಟ್ಟುಕೊಂಡಿದ್ದಾಗಿ ಆರೋಪಿ ಹೇಳಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕ ಶಿವರಾಮ್ ಹೆಬ್ಬಾರ್‌ಗೂ ಬಿಜೆಪಿಗೂ ಸಂಬಂಧ ಇಲ್ಲ
ಬೆಂಗಳೂರು: ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ( Shivaram Hebbar) ಅವರು ಹಲವು ತಿಂಗಳುಗಳಿಂದ ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಂಡು ಬರುತ್ತಿರುವ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಕೊನೆಗೂ ಮೌನ ಮುರಿದಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ (R Ashoka) ಶಾಕಿಂಗ್ ಹೇಳಿಕೆ ನೀಡಿದ್ದು, ಶಾಸಕ ಶಿವರಾಮ್ ಹೆಬ್ಬಾರ್‌ಗೂ ನಮ್ಮ ಪಕ್ಷಕ್ಕೂ ಮುಗಿದ ಅಧ್ಯಾಯ. ಅವರು ಈಗ ನಮ್ಮ ಪಕ್ಷದವರಲ್ಲ ಎಂದು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸದನದಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೆ, ಹೆಬ್ಬಾರ್ ಅವರು ಕುಳಿತೇ ಇರುತ್ತಾರೆ. ಅವರನ್ನು ನಾವು ಕೈ ಬಿಟ್ಟಿದ್ದೇವೆ. ಶಿವರಾಮ್ ಹೆಬ್ಬಾರ್‌ಗೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದಾರೆ.
ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊಲೆ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರಿಗೇ ಆಗಲಿ ಕೊಲೆ ಬೆದರಿಕೆ ಹಾಕಬಾರದು. ಹಿಂದುತ್ವದ ಪರ ಮಾತನಾಡುವ, ಹೋರಾಡುವ ಯಾರಿಗೇ ಆಗಲಿ ನಮ್ಮ ಬೆಂಬಲ ಇರಲಿದೆ. ಯತ್ನಾಳ್ ಅವರಿಗೆ ಕೊಲೆ ಬೆದರಿಕೆ ಹಾಕಿರುವುದನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | BY Vijayendra: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ: ವಿಜಯೇಂದ್ರ
ನಾವು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರೆ, ಅವರು ವಿಧಾನಸಭೆಯಲ್ಲಿ ಸುಮ್ಮನೇ ಕುಳಿತುಕೊಳ್ಳುತ್ತಿದ್ದರು. ಕರೆದರೂ ಬರುತ್ತಿರಲಿಲ್ಲ. ಆದ್ದರಿಂದ ಅವರದ್ದು ಮುಗಿದ ಅಧ್ಯಾಯ, ಅವರ ಬಗ್ಗೆ ನಮ್ಮ ಬಳಿ ಕೇಳಲು ಬರಬೇಡಿ ಎಂದು ಅಶೋಕ್ ಹೇಳಿದ್ದಾರೆ. ಈ ವೇಳೆ ರಾಜ್ಯ ಬಿಜೆಪಿ ಅಧಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿ, ಹೆಬ್ಬಾರ್ ಬಗ್ಗೆ ನೀವ್ಯಾಕೆ ಕನವರಿಸ್ತೀರಿ, ನೋಟಿಸ್ ಕೊಟ್ಟಾಗಿದೆ, ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತೆ ಬಿಡಿ ಎಂದು ತಿಳಿಸಿದ್ದಾರೆ.