ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ; ಕಾರ್ಮಿಕರ ಶೆಡ್‌ಗಳು ಭಸ್ಮ: ತಪ್ಪಿದ ಭಾರಿ ಅನಾಹುತ

Raichur News: ಮಂತ್ರಾಲಯದ ನರಹರಿ ತೀರ್ಥರ ವಸತಿ ಗೃಹದ ಸಮೀಪ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿದೆ. ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಕಾರಣ ಈ ಅನಾಹುತ ನಡೆದಿದೆ.

ರಾಯಚೂರಿನ ಮಂತ್ರಾಲಯ ಸಮೀಪ ಬೆಂಕಿ ಆಕಸ್ಮಕ ನಡೆಯಿತು

ರಾಯಚೂರು, ಮೇ 13: ಮಂತ್ರಾಲಯದ ನರಹರಿ ತೀರ್ಥರ ವಸತಿ ಗೃಹದ ಸಮೀಪ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿದೆ (Fire Accident). ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಕಾರಣ ಈ ಅನಾಹುತ ನಡೆದಿದೆ. ''ಕಟ್ಟಡ ಕಾರ್ಮಿಕರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ತಗಡಿನ ಶೆಡ್‌ಗಳಲ್ಲಿ ಬುಧವಾರ (ಮೇ 13) ಗ್ಯಾಸ್ ಸಿಲಿಂಡರ್‌ಗಳು ಸ್ಪೋಟಗೊಂಡು ಅಗ್ನಿ ಅವಘಡ ನಡೆದಿದೆ (Raichur News). ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು ಯಾರೊಬ್ಬರಿಗೂ ಗಾಯವಾಗಿಲ್ಲ'' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಂತ್ರಾಲಯ ಮಠಾಧೀಶ ಶ್ರೀ ಸುಬುಧೇಂದ್ರ ಶ್ರೀಪಾದರು ಆಗಮಿಸಿ ಮಾಹಿತಿ ನೀಡಿದರು. ʼʼಬಿಹಾರ ಮತ್ತು ಉತ್ತರ ಪ್ರದೇಶದಿಂದ ಆಗಮಿಸಿದ ಅನೇಕ ಕಟ್ಟಡ ಕಾರ್ಮಿಕರು ಉಳಿದುಕೊಳ್ಳಲು ತಾತ್ಕಾಲಿಕ ತಗಡಿನ ಶೆಡ್ ನಿರ್ಮಿಸಲಾಗಿತ್ತು. ಬಿಸಿಲಿನ ತಾಪಕ್ಕೆ ಕನಿಷ್ಠ ಮೂರು ಸಣ್ಣ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿವೆʼʼ ಎಂದರು.

ʼʼದೊಡ್ಡ ಸಿಲಿಂಡರ್‌ಗಳು ಸ್ಪೋಟಗೊಳ್ಳುವುದನ್ನು ತಡೆಯಲಾಗಿದೆ. ಯಾರೊಬ್ಬರಿಗೂ ಹಾನಿಯಾಗಿಲ್ಲ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬಂದಿ, ವಿದ್ಯುತ್ ಇಲಾಖೆ ಸಿಬಂದಿ ದೌಡಾಯಿಸಿ ಕ್ರಮ ಕೈಗೊಂಡಿದ್ದಾರೆ" ಎಂದು ತಿಳಿಸಿದರು.

ಮಂತ್ರಾಲಯ ಬಳಿ ಭೀಕರ ಅಪಘಾತ, ಚಿಕ್ಕಮಗಳೂರಿನ 8 ಮಂದಿ ಭಕ್ತರು ದುರ್ಮರಣ

“ಘಟನೆಯ ಸಮಯದಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ನಷ್ಟಕ್ಕೊಳಗಾದ ಕಾರ್ಮಿಕರಿಗೆ ಶ್ರೀಮಠದ ವತಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು” ಎಂದು ಶ್ರೀಗಳು ಸಾಂತ್ವನ ನೀಡಿದರು. ಶೆಡ್‌ನಲ್ಲಿದವರಿಗೆ ಆಹಾರ, ರೇಷನ್, ಬಟ್ಟೆ ಒದಗಿಸುವುದಾಗಿ ಮಠ ಭರವಸೆ ನೀಡಿದೆ. ಟಿಡಿಪಿ ನಾಯಕ ವೆಂಕಟೇಶ್ ಮತ್ತು ಪೊಲೀಸ್ ಇಲಾಖೆಯಿಂದ ತಲಾ 10 ಸಾವಿರ ರುಪಾಯಿ ನೆರವು ಘೋಷಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author