ರಾಯಚೂರಿನ ಲಿಂಗಸೂಗೂರಿನಲ್ಲಿ ಪಾದಯಾತ್ರೆಗೆ ಚಾಲನೆ, ಬಿಎಸ್‌ವೈ ಹಾಜರ್ : ಬಳ್ಳಾರಿ ಚಲೋಗೆ ಬಿಜೆಪಿ ಕಹಳೆ
ಸುಮಾರು 190ರಿಂದ 200 ಕಿಲೋಮೀಟರ್ ವ್ಯಾಪ್ತಿಯಲ್ಲಿ 9 ದಿನ ಪಾದಯಾತ್ರೆ ನಡೆಯ ಲಿದ್ದು, ಸೆ.10ಕ್ಕೆ ಬಳ್ಳಾರಿಯಲ್ಲಿ ಕೊನೆಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಿ.ಟಿ.ರವಿ ಸೇರಿದಂತೆ ಬಹುತೇಕ ಬಿಜೆಪಿ ಮುಖಂಡರು ಪಾದಯಾತ್ರೆ ಯಲ್ಲಿ ಭಾಗವಹಿಸಿದ್ದಾರೆ.
-
ವಿಜಯೇಂದ್ರ, ಅಶೋಕ್, ಶ್ರೀರಾಮುಲು ಹೋರಾಟಕ್ಕೆ ಅಭೂತಪೂರ್ವ ಜನಸ್ಪಂದನೆ
ಬೆಂಗಳೂರು/ ರಾಯಚೂರು: ಕಾಂಗ್ರೆಸ್ ದುರಾಡಳಿತವನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಬಳ್ಳಾರಿ ಪಾದಯಾತ್ರೆಗೆ ಮಂಗಳ ವಾರ ರಾಯಚೂರಿನ ಲಿಂಗಸೂಗೂರಿನಲ್ಲಿ ಚಾಲನೆ ಸಿಕ್ಕಿದೆ. ಜನರಿಂದ ಅಭೂತಪೂರ್ವ ಸ್ವಾಗತ ಸಿಕ್ಕಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನಾಂದೋ ಲನವಾಗಿ ರೂಪುಗೊಂಡಿದೆ. ದಲಿತ, ರೈತ, ಯುವಜನ, ಮಹಿಳಾ ವಿರೋಧಿ ಹಾಗೂ ಭ್ರಷ್ಟಾಚಾರ ದಲ್ಲಿ ಮುಳುಗಿರುವ ಕಾಂಗ್ರೆಸ್ ಸರಕಾರದ ವಿರುದ್ದದ ಬಿಜೆಪಿ 10 ದಿನಗಳ ಪಾದ ಯಾತ್ರೆ ಆರಂಭಿಸಿದೆ. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿರುವುದರಿಂದ ಇದೀಗ, ಬಿಜೆಪಿ ತನ್ನ ಇಡೀ ಪಾದಯಾತ್ರೆಯಲ್ಲಿ ದಿನಕ್ಕೆ ಒಂದು ವಿಷಯವನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ.
ಸುಮಾರು 190ರಿಂದ 200 ಕಿಲೋಮೀಟರ್ ವ್ಯಾಪ್ತಿಯಲ್ಲಿ 9 ದಿನ ಪಾದಯಾತ್ರೆ ನಡೆಯ ಲಿದ್ದು, ಸೆ.10ಕ್ಕೆ ಬಳ್ಳಾರಿಯಲ್ಲಿ ಕೊನೆಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಿ.ಟಿ.ರವಿ ಸೇರಿದಂತೆ ಬಹುತೇಕ ಬಿಜೆಪಿ ಮುಖಂಡರು ಪಾದಯಾತ್ರೆ ಯಲ್ಲಿ ಭಾಗವಹಿಸಿದ್ದಾರೆ.
ಪಾದಯಾತ್ರೆ ಆರಂಭಕ್ಕೂ ಮುನ್ನ ಬಿ.ವೈ. ವಿಜಯೇಂದ್ರ ಅವರು ಗುರುಗುಂಟಾ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಅವರಿಗೆ ಪಕ್ಷದ ಮುಖಂಡರು ಸಾಥ್ ನೀಡಿದರು. ಈ ವೇಳೆ ಮಾತನಾಡಿದ ಬಿ.ವೈ.ವಿಜ ಯೇಂದ್ರ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಖಂಡಿಸಿ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಜನವಿರೋಧಿ ಹಾಗೂ ದಲಿತ ವಿರೋಧಿ ಸರಕಾರವಾಗಿದೆ. ಈ ಸರಕಾರ ತೊಲಗಿಸಲು ರಾಜ್ಯದ ಜನರು ನಿರ್ಧರಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಅಭಿವೃದ್ಧಿಗಿಂತ ರಿಯಲ್ ಎಸ್ಟೇಟ್ ಬಗ್ಗೆ ಹೆಚ್ಚಿನ ಆಸಕ್ತಿ ಇದೆ. ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಆಗದಿರುವುದು ಇದಕ್ಕೆ ಸಾಕ್ಷಿ. ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿ ದ್ದರೂ ಸರಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿದೆ. ಸುಮಾರು 2.5 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡುತ್ತಿಲ್ಲ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿಯೂ ಭ್ರಷ್ಟಾಚಾರ ನಡೆಸಿ ಹಣ ಲೂಟಿ ಮಾಡಲಾಗಿದೆ. ಕಾಂಗ್ರೆಸ್ ಸರಕಾರದ ಹಲವು ವೈಫಲ್ಯಗಳನ್ನು ಜನರ ಮುಂದಿಡುವ ಉದ್ದೇಶದಿಂದ ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ
ಭ್ರಷ್ಟರಿಂದ, ಭ್ರಷ್ಟರಿಗಾಗಿ ಮತ್ತು ಭ್ರಷ್ಟರಿಗೋಸ್ಕರ ನಡೆಯುತ್ತಿರುವುದು ಕಾಂಗ್ರೆಸ್ ಸರಕಾರ. ಈ ಸರಕಾರ ತೊಲಗುವವರೆಗೆ ಹೋರಾಟ ನಿಲ್ಲದು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಅಲ್ಲದೆ, ಪಾದಯಾತ್ರೆಯ ಉದ್ದಕ್ಕೂ ಕಾಂಗ್ರೆಸ್ ಸರಕಾರದ ವಿರುದ್ದ ಘೋಷಣೆ ಕೂಗುತ್ತಿದ್ದ ನಾಯಕರು ಹಾಗೂ ಕಾರ್ಯಕರ್ತರಿಗೆ ಸ್ಥಳೀಯರಿಂದ ಉತ್ತಮ ಬೆಂಬಲವೂ ವ್ಯಕ್ತವಾಗಿದೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ನೀಡಿದರೆ ಬಿಜೆಪಿ ಹೋರಾಟ ನಿಲ್ಲಿಸುತ್ತದೆ ಎಂದು ಕಾಂಗ್ರೆಸ್ ನಿರೀಕ್ಷಿಸಿತ್ತು. ಆದರೆ ಬಿಜೆಪಿ ಹೋರಾಟ ನಿಲ್ಲದು. ಈ ಸರಕಾರ ಮನೆಗೆ ಹೋದ ಮೇಲೆಯೇ ನಾವು ವಿಶ್ರಮಿಸುತ್ತೇವೆ ಎಂದು ಬಿಜೆಪಿ ಹೇಳಿದೆ. ಇದಲ್ಲದೆ ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಪಾಲಾಗಿರುವ ಪೂರ್ತಿ ಹಣ ವಾಪಸ್ ನಿಗಮಕ್ಕೆ ಬಂದ ನಂತರ, ಎಸ್‌ಸಿಎಸ್‌ಟಿ/ಟಿಎಸ್‌ಪಿ ಹಣ ವಾಪಸ್ ದಲಿತರ ಕಲ್ಯಾಣಕ್ಕೆ ವಾಪಸ್ ಬಂದ ನಂತರ, ರಾಜ್ಯದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯಕ್ಕೆ ನ್ಯಾಯ ಸಿಗುವವರೆಗೆ, ಅನ್ನದಾತರಿಗೆ ನ್ಯಾಯ ಸಿಗುವವರೆಗೆ ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ನಾವು ಹೋರಾಟ ಮಾಡುತ್ತೇವೆ ಎಂದು ನಾಗೇಂದ್ರ ಅವರ ರಾಜೀನಾಮೆಯನ್ನು ಮುಖ್ಯ ಮಂತ್ರಿ ಅವಸರವಾಗಿ ಪಡೆದರು. ಸದನದಲ್ಲಿ ನಾವು ಆಹೋರಾತ್ರಿ ಧರಣಿ ಮಾಡುತ್ತೇವೆ ಎಂದು ಪ್ರಕಟ ಮಾಡಿದ್ದೇ ತಡ ನಾಗೇಂದ್ರ ರಾಜೀನಾಮೆ ಪಡೆದರು. ಸದನದಿಂದ ಸಿಎಂ ಓಡಿ ಪಲಾಯನ ಮಾಡಿದರು ಎಂದು ಬಿಜೆಪಿ ನಾಯಕರು ಗೇಲಿ ಮಾಡಿದ್ದಾರೆ.
ಯಾಕೆ ಯಾತ್ರೆ?
ಕಾಂಗ್ರೆಸ್ ಸರಕಾರದ ಭ್ರಷ್ಟ ಆಡಳಿತವನ್ನು ಕಿತ್ತೊಗೆಯಲು ರಾಜ್ಯ ಬಿಜೆಪಿ ನಿರ್ಧಾರ. ಇಡೀ ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಯಾತ್ರೆ.
ಏನೇನು ವಿಷಯ?
ದಿನಕ್ಕೊಂದು ವಿಷಯ ಪ್ರಸ್ತಾಪ. ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ, ಬರದ ಬಗ್ಗೆ ಅಸಡ್ಡೆ, ಯುವಜನ, ಮಹಿಳಾ ವಿರೋಧಿ ನೀತಿಯ ವಿರುದ್ಧ ಜನಜಾಗೃತಿ
ಎಷ್ಟು ದಿನ, ದೂರ ಎಷ್ಟು ?
ಒಟ್ಟು 10 ದಿನಗಳ ಯಾತ್ರೆ. ಸೆ.10ರಂದು ಬಳ್ಳಾರಿಯಲ್ಲಿ ಸಮಾರೋಪ ಸಮಾವೇಶ. 190ರಿಂದ 200 ಕಿ.ಮೀ. ದೂರದವರೆಗೆ ನಡಿಗೆ. ನಿತ್ಯ ಸರಾಸರಿ 20 ಕಿ.ಮೀ. ನಡಿಗೆ ಸಾಧ್ಯತೆ.
![]()
ಈ ಸರಕಾರದಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರೋದು ನಾಗೇಂದ್ರ ಒಬ್ಬರೇ ಅಲ್ಲ. ಇನ್ನು ಅನೇಕ ಭ್ರಷ್ಟ ಸಚಿವರ ಬಗ್ಗೆ ಗಂಭೀರ ಆರೋಪಗಳಿವೆ. 2028ರ ಚುನಾವಣೆಗಾಗಿ ಪಾದಯಾತ್ರೆ ಪ್ರಾರಂಭಿ ಸಿಲ್ಲ. ಈ ಸರಕಾರ ದರೋಡೆ, ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟ ಸರಕಾರದ ವಿರುದ್ಧ ಜನಾಭಿ ಪ್ರಾಯ ಸಂಗ್ರಹಿಸಲು ಹೋರಾಟ ಮಾಡುತ್ತಿದ್ದೇವೆ. ಮುಂದೆ ಬಿಜೆಪಿ-ಜೆಡಿಎಸ್ ನೇತೃತ್ವದಲ್ಲಿ ಸರಕಾರ ರಚನೆಯಾಗಲಿದೆ.
-ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
![]()
ಸಿದ್ದರಾಮಯ್ಯನವರ ಸರಕಾರದಲ್ಲಿ ದರೋಡೆ ಮಾಡುತ್ತಿದ್ದರು. ಈಗ ಡಿಕೆ ಸರಕಾರದಲ್ಲಿ ತೆರಿಗೆ ಹೆಚ್ಚಳದ ಮೂಲಕ ಪಿಕ್‌ಪಾಕೆಟ್ ಮಾಡುತ್ತಿದ್ದಾರೆ. 175 ತಾಲೂಕುಗಳಲ್ಲಿ ಬರಗಾಲವಿದ್ದರೂ 101 ತಾಲೂಕು ಮಾತ್ರ ಈ ಸರಕಾರ ಬರಪೀಡಿತ ಎಂದು ಪ್ರಕಟಿಸಿದೆ. ಈ ಸರಕಾ ರದ ಬಳಿ ಹಣ ಇಲ್ಲ. ಉಳಿದ ತಾಲ್ಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಿ, ಇಲ್ಲವಾದರೆ ನಿಮ್ಮ ಸರಕಾರ ಪಾಪರ್ ಎಂದು ಜನ ಘೋಷಿಸುತ್ತಾರೆ.
-ಆರ್.ಅಶೋಕ, ವಿಧಾನಸಭೆ ಪ್ರತಿಪಕ್ಷ ನಾಯಕ