ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Food Poison: ವಿಷಾಹಾರ ಸೇವನೆ, ತಂದೆ- ಮಗಳು ಸಾವು, ಇನ್ನೂ ಮೂವರು ಗಂಭೀರ

Raichur News: ಊಟ ಮಾಡಿದ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮನೆಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆ ಸೇರಿದ ಐವರಲ್ಲಿ ತಂದೆ- ಮಗಳು ಮೃತಪಟ್ಟಿದ್ದಾರೆ. ಪತ್ನಿ, ಇನ್ನಿಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ರಾಯಚೂರಿನಲ್ಲಿ ನಡೆದಿದೆ.

ವಿಷಾಹಾರ ಸೇವನೆ, ತಂದೆ- ಮಗಳು ಸಾವು, ಇನ್ನೂ ಮೂವರು ಗಂಭೀರ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Jul 22, 2025 9:24 AM

ರಾಯಚೂರು: ರಾಯಚೂರಿನಲ್ಲಿ (Raichur News) ಘೋರ ದುರಂತವೊಂದು ಸಂಭವಿಸಿದೆ. ಮನೆಯೂಟ (food posion) ಸೇವಿಸಿ ಅಸ್ವಸ್ಥಗೊಂಡಿದ್ದ ತಂದೆ, ಮಗಳು (death) ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ತಂದೆ ರಮೇಶ್ (35) ಹಾಗೂ ಮಗಳು ನಾಗಮ್ಮ (8) ಮೃತರು. ಅಸ್ವಸ್ಥಗೊಂಡಿದ್ದ ಪತ್ನಿ, ಮೂವರು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ತಂದೆ ಹಾಗೂ ಮಗಳು ಮೃತಪಟ್ಟಿದ್ದಾರೆ.

ಊಟದಲ್ಲಿ ವಿಷಾಂಶ ಬೆರೆತಿರಬಹುದು ಎಂದು ಶಂಕಿಸಲಾಗಿದೆ. ಪತ್ನಿ ಪದ್ಮಾವತಿ (34), ಮಗಳು ದೀಪಾ (6) ಸ್ಥಿತಿ ಗಂಭೀರವಾಗಿದೆ. ಇಬ್ಬರಿಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಾದ ಕೃಷ್ಣ, ಚೈತ್ರಾ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರ‍್ಯಾಗಿಂಗ್‌ಗೆ ಹೆದರಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿ

ನೆಲಮಂಗಲ: ನಗರದ ನಂದರಾಮಯ್ಯನ ಪಾಳ್ಯದಲ್ಲಿ ರ‍್ಯಾಗಿಂಗ್‌ಗೆ ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿಯೊಬ್ಬ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ತಡವಾಗಿ ಬೆಳಕಿಗೆ ಬಂದಿದೆ. ಹಾಸನ ಮೂಲದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಹಿರಿಯ ಮಗ ಅರುಣ್ (22) ಮೃತ ವಿದ್ಯಾರ್ಥಿ. ಜು. 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಅರುಣ್ ಸೆಲ್ಫಿ ವಿಡಿಯೋ ಮಾಡಿ ಸ್ನೇಹಿತರ ರ‍್ಯಾಗಿಂಗ್ ಬಗ್ಗೆ ಹೇಳಿಕೊಂಡಿದ್ದ. ನನ್ನ ಬೆನ್ನ ಹಿಂದೆ ಕೆಟ್ಟ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ವಿಡಿಯೋದಲ್ಲಿ ಹೇಳಿದ್ದ. ಬಳಿಕ ಆ ವಿಡಿಯೋವನ್ನು ಕಾಲೇಜು ಗ್ರೂಪ್‌ಗೆ ಹಾಕಿ, ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ತಂದೆ-ತಾಯಿ ಕೂಲಿ ಕೆಲಸ ಮಾಡಿ, ಮಕ್ಕಳನ್ನು ಸಾಕುತ್ತಿದ್ದರು. ಮನೆಯಲ್ಲಿ ಬಡತನವಿದ್ದರೂ ಅರುಣ್ ಕಲಿಕೆಯಲ್ಲಿ ಕಾಲೇಜು ಟಾಪರ್ ಆಗಿದ್ದ. ಇದರಿಂದ ಬಾಗಲೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಫ್ರೀ ಸೀಟ್ ಪಡೆದುಕೊಂಡಿದ್ದ. ಕಲೆಯಲ್ಲೂ ಆಸಕ್ತಿ ಹೊಂದಿದ್ದ ಅರುಣ್, 5 ನಿಮಿಷದಲ್ಲಿ ಭಾವಚಿತ್ರ, ವಿಭಿನ್ನ ಚಿತ್ರಗಳನ್ನು ಬಿಡಿಸುವ ಕಲೆ ಹೊಂದಿದ್ದ. ಗಣ್ಯಾತಿಗಣ್ಯರು ಚಿತ್ರ ಹಾಗೂ ಕಲಾಕೃತಿಗಳ ಚಿತ್ರಗಳನ್ನೂ ಬಿಡಿಸುತ್ತಿದ್ದ. ಅಲ್ಲದೇ ಸಿನಿಮಾ ತಾರೆಯರ ಭಾವಚಿತ್ರ ಬಿಡಿಸಿ ಮೆಚ್ಚುಗೆಯನ್ನೂ ಗಳಿಸಿದ್ದ. ಪೇಂಟಿಂಗ್‌ನಲ್ಲಿ ಅಪಾರ ಜನಪ್ರಿಯತೆ ಹೊಂದಿದ್ದ ಅರುಣ್, ಶಾಲಾ ಕಾರ್ಯಕ್ರಮವೊಂದರಲ್ಲಿ ಜವಾಹರಲಾಲ್ ಫೋಟೋ ಬಿಡಿಸಿ ಭೇಷ್ ಎನಿಸಿಕೊಂಡಿದ್ದ.

ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾಲೇಜಿನವರು ಅರುಣ್ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಪೋಷಕರು ಮನೆಗೆ ಬಂದು ನೋಡಿದಾಗ ಅರುಣ್ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಈ ಘಟನಾ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming: ಮಗಳನ್ನು ಪತ್ತೆ ಹಚ್ಚಲು ಪೊಲೀಸರ ನಿರ್ಲಕ್ಷ್ಯ; ವಿಷ ಸೇವಿಸಿದ ತಂದೆ ಸಾವು