ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Raichur News: ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ (Raichur City Traffic Police) ಎಫ್‌ಐಆರ್‌ ದಾಖಲಾಗಿದೆ.

ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಅಪಘಾತಕ್ಕೀಡಾದ ಬೈಕ್ -

ಹರೀಶ್‌ ಕೇರ
ಹರೀಶ್‌ ಕೇರ Feb 28, 2026 8:13 AM

ರಾಯಚೂರು, ಫೆ.28: ಬೈಕ್‌ಗೆ ಟ್ರಕ್‌ ಡಿಕ್ಕಿ (Truck hits Bike) ಹೊಡೆದ ಪರಿಣಾಮ (road accident) ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನ (Raichur news) ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19), ಫಯಾಜ್( 26) ಮೃತ ದುರ್ದೈವಿಗಳು.

ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ (Raichur City Traffic Police) ಎಫ್‌ಐಆರ್‌ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

ಬೆಂಗಳೂರಿನಲ್ಲಿ 5.24 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು : ಬೆಂಗಳೂರಿನಲ್ಲಿ 5.24 ಕೋಟಿ ಮೌಲ್ಯದ ಡ್ರಗ್ಸ್ ಮತ್ತು ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ ಒಟ್ಟು 16 ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಮಹಿಳೆಯರು ಸೇರಿ 16 ಪೆಡ್ಲರ್ ಗಳು ಅರೆಸ್ಟ್ ಆಗಿದ್ದಾರೆ.

ವಿದೇಶಿ ಪ್ರಜೆಗಳು ಹಾಗೂ ಹೊರ ರಾಜ್ಯದ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಈ ಒಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು ಇದುವರೆಗೂ 5.24 ಕೋಟಿ ಮಾಡಿದ ಡ್ರಗ್ಸ್ ಮತ್ತು ಗಾಂಜಾವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.