ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Raichur News: ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಗದ್ದೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೈಕಾಲು ತೊಳೆದುಕೊಂಡು ಮನೆಗೆ ಹೋಗಲು ಕಾಲುವೆ ಬಳಿ ಬಂದಿದ್ದರು. ಲಿಂಗಸುಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ. ಸದ್ಯ ಇಬ್ಬರು ಮಹಿಳೆಯರ ಮೃತದೇಹವನ್ನು ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಮೃತರಾದ ಈರಮ್ಮ, ದೇವಮ್ಮ -

ಹರೀಶ್‌ ಕೇರ
ಹರೀಶ್‌ ಕೇರ Jan 1, 2026 4:06 PM

ರಾಯಚೂರು, ಜ.01: ಕೈಕಾಲು ತೊಳೆದುಕೊಳ್ಳಲು ಹೋಗಿ ಕಾಲುವೆಯಲ್ಲಿ (canal) ಬಿದ್ದು ಇಬ್ಬರು ಮಹಿಳೆಯರು (Accident) ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur news) ಲಿಂಗಸುಗೂರು ತಾಲೂಕಿನ ಆನೆ ಹೊಸೂರು ಬಳಿ ನಡೆದಿದೆ. ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು ದೇವಮ್ಮ (30) ಮೃತರು. ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರೂ ಮೃತಪಟ್ಟಿದ್ದಾರೆ.

ಗದ್ದೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೈಕಾಲು ತೊಳೆದುಕೊಂಡು ಮನೆಗೆ ಹೋಗಲು ಕಾಲುವೆ ಬಳಿ ಬಂದಿದ್ದರು. ಲಿಂಗಸುಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ. ಸದ್ಯ ಇಬ್ಬರು ಮಹಿಳೆಯರ ಮೃತದೇಹವನ್ನು ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಂದೆತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ

ಬೆಂಗಳೂರು: ತಂದೆ-ತಾಯಿ (Father-Mother) ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. ಲೇಖನಾ 10ನೇ ತರಗತಿ ಅನುತ್ತೀರ್ಣ ಆಗಿ ಮನೆಯಲ್ಲಿಯೇ ಇದ್ದಳು. ತಂದೆ-ತಾಯಿ ಕೌಟುಂಬಿಕ ಕಲಹದಿಂದ ಇತ್ತೀಚಿಗೆ ದೂರವಾಗಿದ್ದರು. ತಂದೆ ಬೇರೆ ಕಡೆ ವಾಸವಿದ್ದರೆ, ಲೇಖನಾ ತಾಯಿ ಜೊತೆಗೆ ವಾಸವಿದ್ದರು.

ಡಿಸೆಂಬರ್ ನಂತರ ಸಾವು-ನೋವು ಇನ್ನೂ ಜಾಸ್ತಿ ಆಗುತ್ತೆ: ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಬುಧವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.