Road Accident: ರಾಯಚೂರಿನಲ್ಲಿ ಭೀಕರ ಅಪಘಾತಕ್ಕೆ ಮೂವರು ವಿದ್ಯಾರ್ಥಿಗಳು ಬಲಿ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ರಾಯಚೂರು: ರಾಜ್ಯದಲ್ಲಿ ಮಂಗಳವಾರ ರಾತ್ರಿ ಮತ್ತೊಂದು ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಕ್ರೂಸರ್ ವಾಹನದ ಟೈರ್ ಸ್ಫೋಟವಾದ (Tire blast) ಪರಿಣಾಮ ವಾಹನ ಪಲ್ಟಿಯಾಗಿ ಚಾಲಕ ಸೇರಿ ಮೂವರು ವಿದ್ಯಾರ್ಥಿಗಳು (Students killed) ಸಾವನ್ನಪ್ಪಿರುವ ಘಟನೆ ರಾಯಚೂರು (Raichur news) ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹಯವದನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು. ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗರ್ಭಿಣಿ ಹಸುವನ್ನು ಕೊಂದು ಮಾಂಸ ಕದ್ದ ಐವರು ಆರೋಪಿಗಳ ಬಂಧನ
ಕಾರವಾರ: ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಮೂರು ದಿನಗಳ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರವಾರ ಘಟನೆ ನಂತರ ತನಿಖೆ ಕೈಗೊಂಡಿದ್ದ ಎಸ್ಪಿ ಎಂ.ನಾರಾಯಣ ನೇತೃತ್ವದ ತಂಡ ಇದುವರೆಗೆ ಐವರು ಗೋಹಂತಕರನ್ನು ಬಂಧಿಸಿದ್ದಾರೆ. ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಕೃಷ್ಣ ಆಚಾರಿ ಎಂಬವರು ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹುಡುಕಾಟ ನಡೆಸಿದಾಗ ಗೋವನ್ನು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿತ್ತು. ಹಸುವನ್ನು ಕೊಂದಿದ್ದ ದುರುಳರು ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನು ಹೊತ್ತೊಯ್ದಿದ್ದು ಈ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.