ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Car Accident: ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ; ಸಿಂಧನೂರು ಶಾಸಕರ ಸೋದರಳಿಯ ಸಾವು

Car Accident: ಮಂಗಳೂರಿನಲ್ಲಿ ಓದುತ್ತಿರುವ ತಮ್ಮ ಮಕ್ಕಳನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ರಸ್ತೆಯ ಬದಿ ಕಾರು ನಿಲ್ಲಿಸಿ, ಡಿವೈಡರ್ ದಾಟುವ ಸಮಯದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಪುತ್ರ ಕೊನೆಯುಸಿರೆಳೆದಿದ್ದಾರೆ.

ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ; ಸಿಂಧನೂರು ಶಾಸಕರ ಸೋದರಳಿಯ ಸಾವು

Profile Prabhakara R Feb 23, 2025 10:01 AM

ಸಿಂಧನೂರು: ಮಂಗಳೂರಿನ ಸುರತ್ಕಲ್ ರಸ್ತೆಯ ಬಳಿ ಭೀಕರ ಕಾರು ಅಪಘಾತ (Car Accident) ಸಂಭವಿಸಿದ್ದು, ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಪುತ್ರ ದೀಪುಗೌಡ (50) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವ ಕಾರಟಗಿಯ ಪ್ರದೀಪ್ ಕೋಲ್ಕರ್ ಮತ್ತು ಮತ್ತೊಬ್ಬ ಗಾಯಾಳು ಗಂಗಾವತಿಯ ರಂಘುನಾಥ ಎಂಬುವವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ಓದುತ್ತಿರುವ ತಮ್ಮ ಮಕ್ಕಳನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ರಸ್ತೆಯ ಬದಿ ಕಾರು ನಿಲ್ಲಿಸಿ, ಡಿವೈಡರ್ ದಾಟುವ ಸಮಯದಲ್ಲಿ ವೇಗವಾಗಿ ಬಂದ ಕಾರು ಬಡಿದು ದೀಪುಗೌಡ ಕೊನೆಯುಸಿರೆಳೆದಿದ್ದಾರೆ.

ಸಿಂಧನೂರಿನ ದೀಪುಗೌಡ, ಕಾರಟಗಿಯ ಪ್ರದೀಪ್ ಕೋಲ್ಕರ್ ಮತ್ತು ಗಂಗಾವತಿಯ ಸಮರ್ಥ ಮೋಟಾರ್ಸ್ ಮಾಲೀಕ ರಂಘುನಾಥ ಅವರು, ರಸ್ತೆ ಬದಿ ಕಾರು ನಿಲ್ಲಿಸಿ ವಿಭಜಕ ದಾಟುವ ವೇಳೆ ಅಪಘಾತ ನಡೆದಿದೆ. ಭಾನುವಾರ ಬೆಳಗ್ಗೆ ದೀಪುಗೌಡರ ಮೃತದೇಹವನ್ನು ಸಿಂಧನೂರಿಗೆ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಪಘಾತದ ಸುದ್ದಿ ತಿಳಿಯುತಿದ್ದಂತೆ ದೀಪುಗೌಡರ ಸಂಬಂಧಿಕರು, ಸ್ನೇಹಿತರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ದೀಪುಗೌಡ ಮತ್ತು ಶಾಸಕ ಹಂಪನಗೌಡ ಬಾದರ್ಲಿ ಅವರ ನಿವಾಸದಲ್ಲಿ ಸೇರಿದ್ದಾರೆ.

ಈ ಸುದ್ದಿಯನ್ನೂ ಓದಿ | Physical abuse: ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಪರಿಚಯಸ್ಥ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಬೆಂಗಳೂರಲ್ಲಿ ಕಾಂಗ್ರೆಸ್​ ಮುಖಂಡನ ಬರ್ಬರ ಹತ್ಯೆ; ಶಾಸಕ ಹ್ಯಾರಿಸ್ ಜತೆ ಗುರುತಿಸಿಕೊಂಡಿದ್ದ ಹೈದರ್

Murder Case (4)

ಬೆಂಗಳೂರು: ಕಾಂಗ್ರೆಸ್​ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ (Murder Case) ಅಶೋಕನಗರದ ಗರುಡಾ ಮಾಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್​ ಮುಖಂಡ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ದೌಡಾಯಿಸಿ, ಗಾಯಾಳುವನ್ನು ಬಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದ ಹೈದರ್ ಅಲಿ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ವಿಚಾರ ತಿಳಿದು ಹೈದರ್​ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಆಸ್ಪತ್ರೆ ಬಳಿ ಝಳಪಿಸಿದರು. ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸುದ್ದಿಯನ್ನೂ ಓದಿ | Assault Case: ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್‌ಮನ್‌ಗೆ ಹಿಗ್ಗಾಮುಗ್ಗಾ ಥಳಿತ!