ರಾಯಚೂರು: ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೆಡಿಪಿ ಸಭೆಯಲ್ಲಿ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದ ಘಟನೆ (Raichur News) ಶುಕ್ರವಾರ ನಡೆದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಅವರು ಸಭಾಂಗಣದಲ್ಲೇ ಕುಳಿತು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದರು. ಇದನ್ನು ಗಮನಿಸಿದ ಒಬ್ಬರು ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ. ಈ ವಿಷಯ ಸಚಿವರ ಗಮನಕ್ಕೆ ಬರುತ್ತಿದ್ದಂತೆಯೇ ಅವರನ್ನು ಸಭೆಯಿಂದ ಹೊರಗೆ ಕಳುಹಿಸಿದ್ದು, ಡಿಸಿಎಫ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಸಭೆ ಸಮಯದಲ್ಲಿ ಇಂತಹ ಆಟವಾಡುವುದು ಕ್ಷಮಾರ್ಹವಲ್ಲ. ಪ್ರಾಮಾಣಿಕತೆಗೆ ಬದ್ಧರಾಗದ ಅಧಿಕಾರಿಗಳಿಗೆ ಯಾವುದೇ ಸಹಿಷ್ಣುತೆ ಇಲ್ಲ. ಮುಂದಿನ ಸಭೆಗಳಲ್ಲಿ ಇಂತಹ ಘಟನೆ ಪುನರಾವರ್ತನೆ ಆಗಬಾರದು ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತೀವ್ರ ಎಚ್ಚರಿಕೆ ನೀಡಿದ್ದಾರೆ.
ನೀವು ಗಂಭೀರವಾಗಿಲ್ಲ, ಅಧಿಕಾರಿಗಳು ಗಂಭೀರವಾಗಿಲ್ಲ. ಕನಿಷ್ಠ ಪಕ್ಷ ಶಾಸಕರ ಗೌರವವನ್ನಾದರೂ ಉಳಿಸಿ ಎಂದು ಶಾಸಕರು, ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವಾಗಲೇ ಈ ವಿಡಿಯೊ ತೆಗೆಯಲಾಗಿದೆ.
ಈ ಸುದ್ದಿಯನ್ನೂ ಓದಿ | Bomb Threat: ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ
ಮದುವೆಯಾಗುವುದಾಗಿ ನಂಬಿಸಿ ವಂಚನೆ, ಯುವತಿಯಿಂದ ಬಿಜೆಪಿ ಶಾಸಕನ ಪುತ್ರನ ಮೇಲೆ ದೂರು

ಬೆಂಗಳೂರು/ಬೀದರ್: ಯುವತಿಯೊಬ್ಬರು ಮಾಜಿ ಸಚಿವ, ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ (BJP MLA Prabhu Chauhan) ಪುತ್ರನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮೋಸ (Cheating) ಮಾಡಿದ್ದಾನೆ ಎಂದು ಸಂತ್ರಸ್ತೆ ಮಹಿಳಾ ಆಯೋಗಕ್ಕೆ (Women Commission) ದೂರು ನೀಡಿದ್ದಾರೆ. ಪ್ರತೀಕ್ ಚೌಹಾಣ್ ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ಸಂಬಂಧ ಔರಾದ್‌ನ ಹೋಕ್ರಾಣಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಆರೋಪಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ್ದಾನೆಂದು ಯುವತಿ, ಶಾಸಕ ಪಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಆರೋಪಿಸಿದ್ದು, ಈ ಸಂಬಂಧ ನ್ಯಾಯ ಒದಗಿಸುವಂತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
2023ರ ಡಿಸೆಂಬರ್ 25ರಂದು ಪೋಷಕರು ನಿಶ್ಚಿತಾರ್ಥ ಮಾಡಿದ್ದರು. ನಿಶ್ಚಿತಾರ್ಥದ ನಂತರ ಪ್ರತೀಕ್ ಜೊತೆ ಹೊಂದಾಣಿಕೆಗಾಗಿ ಬೇರೆ ಸ್ಥಳಗಳಿಗೆ ಕಳಿಸಿ ಕೊಟ್ಟಿದ್ದರು. ಅದರಂತೆ ಪ್ರತೀಕ್ ಮಹಾರಾಷ್ಟ್ರದ ಲಾತೂರ್‌ಗೆ ಕರೆದುಕೊಂಡು ಹೋಗಿದ್ದು, ಆ ವೇಳೆ ಪ್ರತೀಕ್ ಚೌಹಾಣ್ ಒತ್ತಾಯಪೂರ್ವಕವಾಗಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ನಂತರ ಮದುವೆ ಮುಂದೂಡಿದ್ದಾರೆ. ಸಾಲದ್ದಕ್ಕೆ ಅವರ ಮನೆಗೆ ಹೋಗಿ ನನ್ನ ಪೋಷಕರು ಕೇಳಿದರೆ ಗಲಾಟೆ ಮಾಡಿದ್ದು, ನಮ್ಮ ಮನೆಯವರನ್ನು ಬಡವರು ಎಂದು ಹೀಯಾಳಿಸಿದ್ದಾನೆ. ಈ ಕುರಿತು 2025ರ ಜುಲೈ 6ರಂದು ಔರಾದ್‌ನ ಹೋಕ್ರಾಣ್ ಠಾಣೆಗೆ ದೂರು ಕೊಡಲು ಹೋಗಿದ್ದೆವು. ಆದರೆ, ಪೊಲೀಸರು ದೂರನ್ನು ಸ್ವೀಕಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರದ (Maharashtra) ಉದ್ದಗೀರ್ ಯುವತಿಯೊಂದಿಗೆ ಪ್ರಭು ಚೌಹಾಣ್ ಮಗ ಪ್ರತೀಕ್ ಚೌಹಾಣ್‌ನೊಂದಿಗೆ ನಿಶ್ಚಿತಾರ್ಥವಾಗಿದ್ದು, ಕೆಲ ದಿನಗಳಿಂದ ಮದುವೆ ಲೇಟಾದ ವಿಚಾರಕ್ಕೆ ಎರಡೂ ಕಡೆಯವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು. ಘಟನೆ ವಿಕೋಪಕ್ಕೆ ತಿರುಗಿ ಸಂಬಂಧಿಕರು ಹೊಡೆದಾಡಿಕೊಂಡಿದ್ದರು. ಆ ವೇಳೆ ಶಾಸಕ ಪ್ರಭು ಚೌಹಾಣ್ ಒಬ್ಬರಿಗೆ ಕಪಾಳಕ್ಕೆ ಬಾರಿಸಿದ್ದು, ಗಲಾಟೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಅದೇ ಪ್ರಕರಣದಲ್ಲಿ ಯುವತಿ, ಪ್ರತೀಕ್ ಚೌಹಾಣ್ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ: Byrathi Basavaraj: ರೌಡಿಶೀಟರ್ ಹತ್ಯೆ, ಶಾಸಕ ಬೈರತಿ ಬಸವರಾಜ್‌ಗೆ ಪೊಲೀಸ್ ನೋಟಿಸ್, ಐವರ ಬಂಧನ