Drowned: ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು
Drowned: ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿಗಳು

ರಾಯಚೂರು : ರಾಯಚೂರಿನಲ್ಲಿ (Raichur news) ಘೋರವಾದ ದುರಂತವೊಂದು ಸಂಭವಿಸಿದೆ. ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ (Tungabhadra River) ಈಜಲು ತೆರಳಿದಾಗ ನಾಪತ್ತೆಯಾಗಿರುವ (Drowned) ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕರನ್ನು ಹಾಸನದ ಅರಸೀಕೆರೆ ತಾಲೂಕಿನ ಜಾಗವಲ್ ಗ್ರಾಮದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.
ನಿನ್ನೆ ಸ್ನೇಹಿತರ ತಂಡ ಮಂತ್ರಾಲಯಕ್ಕೆ ಬಂದಿದ್ದರು. ಇವರೆಲ್ಲರೂ ಡಿಗ್ರಿ ಓದುತ್ತಿದ್ದವರು. ತುಂಗಭದ್ರಾ ನದಿಯ ಬಳಿ ಐವರು ಸ್ಥಾನ ಮಾಡುವ ವೇಳೆ ಈ ಅವಘಡ ಸಂಭವಿಸಿದೆ. ನೀರಿನ ರಭಸಕ್ಕೆ ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ನದಿಗೆ ಹೆಚ್ಚಿನ ನೀರು ಹರಿಬಿಟ್ಟಿರಿಂದ, ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ. ರಾತ್ರಿಯಾಗಿದ್ದರಿಂದ ಶೋಧ ಕಾರ್ಯಾಚರಣೆ ನಿಲ್ಲಿಸಿದ್ದು, ಭಾನುವಾರ ಬೆಳಗ್ಗೆ ಪುನರಾರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ, ಮೂವರ ದುರ್ಮರಣ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ (Bangaluru-Mysuru Expressway) ಇಂದು ಮುಂಜಾನೆಯೇ ಭೀಕರ ಅಪಘಾತ (Road Accident) ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬದುಕುಳಿದ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ ಹಾಕಿದ್ದರೂ ಅಪಘಾತಗಳು ಸಂಭವಿಸುವುದು ತಪ್ಪಿಲ್ಲ. ಮೈಸೂರಿನಿಂದ ಬೆಂಗಳೂರಿಗೆ ಬರ್ತಿದ್ದ ಕಾರು ಜಯಪುರ ಗೇಟ್ ಬಳಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: MRPL Tragedy: ಮಂಗಳೂರಿನ ಎಂಆರ್‌ಪಿಎಲ್ ತೈಲ ಶುದ್ಧೀಕರಣ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರ ಸಾವು