ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Railway Exam: ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ, ಕನ್ನಡರಹಿತ ಪರೀಕ್ಷೆ ರದ್ದು

ರೈಲ್ವೆ ಇಲಾಖೆಯ ಈ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಇರಲಿಲ್ಲ. ಕರವೇ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ, ಈ ಮಹತ್ವದ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ತಾತ್ಕಾಲಿಕವಾಗಿ ಪರಿಸ್ಥಿತಿಯನ್ನು ತಿಳಿಗೊಳಿಸಿದೆ. ಮುಂಬಡ್ತಿ ಪರೀಕ್ಷೆಗೆ ಸಂಬಂಧಿಸಿದ ಮುಂದಿನ ಕ್ರಮಗಳ ಬಗ್ಗೆ ರೈಲ್ವೆ ಇಲಾಖೆ ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದೆ.

ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ, ಕನ್ನಡರಹಿತ ಪರೀಕ್ಷೆ ರದ್ದು

ಕರವೇ ಪ್ರತಿಭಟನೆ -

ಹರೀಶ್‌ ಕೇರ
ಹರೀಶ್‌ ಕೇರ Mar 17, 2026 1:52 PM

ಹುಬ್ಬಳ್ಳಿ, ಮಾರ್ಚ್ 17: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ಭಾರಿ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ, ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು (railway exam) ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ದರು. ಈ ಹೋರಾಟದ ಪರಿಣಾಮವಾಗಿ, ರೈಲ್ವೆ ಇಲಾಖೆಯು ಮುಂಬಡ್ತಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ.

ಹಲವು ದಿನಗಳಿಂದ ಕರವೇ ಮುಖಂಡರು ಮತ್ತು ಸದಸ್ಯರು ರೈಲ್ವೆ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದರು. ಈ ಮುಂಬಡ್ತಿ ಪರೀಕ್ಷೆಯು ಸ್ಥಳೀಯ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದರು. ಕರವೇ ಹೋರಾಟದ ಒತ್ತಡ ಹೆಚ್ಚಿದ ನಂತರ, ರೈಲ್ವೆ ಇಲಾಖೆಯು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದೆ. ಕರವೇ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ, ಈ ಮಹತ್ವದ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ತಾತ್ಕಾಲಿಕವಾಗಿ ಪರಿಸ್ಥಿತಿಯನ್ನು ತಿಳಿಗೊಳಿಸಿದೆ. ಮುಂಬಡ್ತಿ ಪರೀಕ್ಷೆಗೆ ಸಂಬಂಧಿಸಿದ ಮುಂದಿನ ಕ್ರಮಗಳ ಬಗ್ಗೆ ರೈಲ್ವೆ ಇಲಾಖೆ ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದೆ.

ನೈರುತ್ಯ ರೈಲ್ವೆಯಲ್ಲಿರುವ ಹುದ್ದೆಗಳಿಗೆ ಗೂಡ್ಸ್‌ ಟ್ರೈನ್‌ ಮ್ಯಾನೇಜರ್‌ 194 ಹುದ್ದೆಗೆ ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ (ಲಿಮಿಟೆಡ್‌ ಡಿಪಾರ್ಟ್‌ ಮೆಂಟಲ್‌ ಕಾಂಪಿಟಿಟೀವ್‌ ಎಕ್ಸಾಮಿನೇಷನ್‌) 101 ಮುಂಬಡ್ತಿ ಹುದ್ದೆಗಳಿಗೆ 2025ರಲ್ಲಿ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಆದರೆ ರೈಲ್ವೆ ಇಲಾಖೆಯ ಈ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಇರಲಿಲ್ಲ. ಪರೀಕ್ಷೆಯಲ್ಲಿ ಕೇವಲ ಹಿಂದಿ & ಇಂಗ್ಲಿಷ್ ಭಾಷೆಗಳಲ್ಲಿ ಬರೆಯುವುದಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇದಕ್ಕೆ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯದ ಪರೀಕ್ಷಾ & ಕೇಂದ್ರ ರೈಲ್ವೆ ಇಲಾಖೆ ಕಚೇರಿ ಮುಂದೆ ಹೋರಾಟಗಾರರು ಆಕ್ರೋಶ ಹೊರ ಹಾಕಿ ಮುತ್ತಿಗೆ ಹಾಕಲು ಮುಂದಾದರು. ಇಂದು ಬೆಳಗ್ಗೆ 10ಕ್ಕೆ ಪರೀಕ್ಷೆ ಆರಂಭವಾಗುತ್ತಿದ್ದಂತೆ ಬೆಂಗಳೂರಿನಲ್ಲಿರುವ MDDTI ಟ್ರೈನಿಂಗ್ ಸೆಂಟರ್ ಮುಂದೆ ಪ್ರತಿಭಟನೆ ಜೋರಾಗಿತ್ತು. ಡಿವಿಜನಲ್ ರೈಲ್ವೆ ಮ್ಯಾನೇಜರ್ ಕಚೇರಿ ಮುಂದೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯದ ಕೇಂದ್ರ ಸಚಿವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

Indian Railway: ರೈಲ್ವೆ ಪ್ರಯಾಣಿಕರಿಗೆ ಬಿಗ್‌ ಶಾಕ್‌; ಟಿಕೆಟ್‌ ದರದಲ್ಲಿ ಎಷ್ಟು ಹೆಚ್ಚಾಗಿದೆ ಗೊತ್ತಾ? ಇಲ್ಲಿದೆ ನೋಡಿ ಡಿಟೇಲ್ಸ್‌

ಬೆಂಗಳೂರು, ಮೈಸೂರು, ಹುಬ್ಬಳ್ಳಿ ಪರೀಕ್ಷೆ ಕೇಂದ್ರಗಳ ಬಳಿ ಕರವೇ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ಜೋರಾಗಿದೆ. ಕೇಂದ್ರ ಸರ್ಕಾರ ಕನ್ನಡಗರಿಗೆ ಅನ್ಯಾಯ ಮಾಡುತ್ತಿದ್ದು, ಬೇಕೆ ಬೇಕೇ ನ್ಯಾಯ ಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ರು. ಹೋರಾಟ ಜೋರಾಗುತ್ತಿದ್ದಂತೆ ಪೊಲೀಸರು ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದು ಬಸ್​​ನಲ್ಲಿ ಕರೆದೊಯ್ದರು.