ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ನಾಳೆ ಮೈಸೂರು, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶವಿರಲಿದೆ. ಮಧ್ಯಾಹ್ನ/ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ಮೈಸೂರು, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

Profile Prabhakara R Mar 17, 2025 5:50 PM

ಬೆಂಗಳೂರು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾನುವಾರ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಇನ್ನು ಮಾ.18ರಂದು ಚಾಮರಾಜನಗರ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹೆಚ್ಚು. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ (Karnataka Weather) ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶವಿರಲಿದೆ. ಮಧ್ಯಾಹ್ನ/ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 23°C ಇರುವ ಸಾಧ್ಯತೆ ಇದೆ.

ಇನ್ನು ಮಾ.19ರಂದು ರಾಜ್ಯದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ.23ರವರೆಗೆ ಇದೇ ರೀತಿಯ ಪರಿಸ್ಥಿತಿ ಮುಂದುವರಿಯಲಿದೆ. ಗರಿಷ್ಠ ತಾಪಮಾನವು ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ 2-4 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಲಿದ್ದು, ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ರಾಜ್ಯದ ಬಯಲು ಸೀಮೆಯಲ್ಲಿ ಕಲಬುರಗಿಯಲ್ಲಿ ಭಾನುವಾರ ಗರಿಷ್ಠ 39.80 ಡಿ.ಸೆ. ತಾಪಮಾನ ದಾಖಲಾಗಿದೆ. ಅದೇ ರೀತಿ ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ ಮತ್ತು ದಾರವಾಡದಲ್ಲಿ ಕನಿಷ್ಠ ಕನಿಷ್ಠ ತಾಪಮಾನ 18 ಡಿ.ಸೆ. ದಾಖಲಾಗಿದೆ.

ತಾಪಮಾನದ ಸಾರಾಂಶ

ರಾಜ್ಯದ ಕರಾವಳಿಯಲ್ಲಿ ಭಾನುವಾರ ಕನಿಷ್ಠ ತಾಪಮಾನವು 25-26 ಡಿ.ಸೆ. ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಕೊಪ್ಪಳದಲ್ಲಿ 19-21 ° C ಮತ್ತು ಉತ್ತರ ಒಳನಾದಿನ ಹಾವೇರಿ, ರಾಯಚೂರು ಮತ್ತು ಕಲಬುರಗಿಯಲ್ಲಿ 22-25 ° C ವ್ಯಾಪ್ತಿಯಲ್ಲಿತ್ತು. ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಚಿಕ್ಕಮಗಳೂರಿನಲ್ಲಿ 14-17° C ಮತ್ತು ಆಗುಂಬೆ, ಬೆಂಗಳೂರು, ಚಿತ್ರದುರ್ಗ, ಹಾಸನ, ಮಡಿಕೇರಿ, ಶಿವಮೊಗ್ಗ ಮತ್ತು ಚಿತ್ರದುರ್ಗದ ಮೇಲೆ 18-21 ° C ವ್ಯಾಪ್ತಿಯಲ್ಲಿತ್ತು.

ದಕ್ಷಿಣ ಒಳನಾಡಿನ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಕನಿಷ್ಠ ತಾಪಮಾನದಲ್ಲಿ (-3.5 " C) ಮತ್ತು (-2.5° C) ಗಮನಾರ್ಹ ಕುಸಿತ ಕಂಡುಬಂದಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರಲಿಲ್ಲ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಚಿಂತಾಮಣಿಯಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿತ್ತು. ಉತ್ತರ ಒಳನಾಡಿನ ಕೊಪ್ಪಳದಲ್ಲಿ ಮತ್ತು ದಕ್ಷಿಣ ಒಳನ್ನಾಡಿನ ಬೆಂಗಳೂರು (ಕೆ.ಐ.ಎ.ಎಲ್) ವಿಮಾನ ನಿಲ್ದಾಣ, ದಾವಣಗೆರೆ ಮತ್ತು ಮಂಡ್ಯದಲ್ಲಿ ಅದು ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು. ದಕ್ಷಿಣ ಒಳನಾಡಿನ ಹಾಸನದಲ್ಲಿ ಅದು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿತ್ತು. ಕರಾವಳಿಯ ಮಂಗಳೂರು ವಿಮಾನ ನಿಲ್ದಾಣ ಮತ್ತು ಉತ್ತರ ಒಳನಾಡಿನ ಬೆಳಗಾವಿ ನಗರ, ಬಾಗಲೋಟೆ, ರಾಯಚೂರು, ಕಲಬುರಗಿ ಮತ್ತು ಹಾವೇರಿಯಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯವಾಗಿತ್ತು.

ಇನ್ನು ಗರಿಷ್ಠ ತಾಪಮಾನವು ಕರಾವಳಿಯಲ್ಲಿ 33-34 ° C ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳದಲ್ಲಿ 35-37 ° C ಮತ್ತು ಬೀದರ್, ಬಾಗಲಕೋಟೆ, ರಾಯಚೂರು ಮತ್ತು ಕಲಬುರಗಿಯಲ್ಲಿ 38-40 ° C ವ್ಯಾಪ್ತಿಯಲ್ಲಿತ್ತು.

ಈ ಸುದ್ದಿಯನ್ನೂ ಓದಿ | Summer Health Tips: ಬೇಸಿಗೆಯಲ್ಲಿ ಆರೋಗ್ಯಕರವಾಗಿರಲು ಇಲ್ಲಿವೆ ತಜ್ಞರ ಸಲಹೆ!

ದಕ್ಷಿಣ ಒಳನಾಡಿನ ಆಗುಂಬೆ, ಮಡಿಕೇರಿ ಮತ್ತು ಚಿಕ್ಕಮಗಳೂರಿನಲ್ಲಿ 32-34 ° C ವ್ಯಾಪ್ತಿಯಲ್ಲಿತ್ತು. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಚಿಂತಾಮಣಿ ಮತ್ತು ಮಂಡ್ಯದಲ್ಲಿ 35-37°C ವ್ಯಾಪ್ತಿಯಲ್ಲಿತ್ತು.