Weather Forecast: ಇಂದು ಕರಾವಳಿ, ಮೈಸೂರು, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ
Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಬಹುತೇಕ ಶುಭ್ರ ಆಕಾಶವಿರಲಿದ್ದು, ಸಂಜೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಇರುವ ಸಾಧ್ಯತೆ ಇದೆ.


ಬೆಂಗಳೂರು: ರಾಜ್ಯದ ಬಹುತೇಕ ಕಡೆ ಶನಿವಾರ ಒಣ ಹವೆಯ ವಾತಾವರಣವಿತ್ತು. ಇನ್ನು ಮಾ. 30ರ ಭಾನುವಾರ ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ (Weather forecast) ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಬಹುತೇಕ ಶುಭ್ರ ಆಕಾಶವಿರಲಿದ್ದು, ಸಂಜೆ ಭಾಗಶಃ ಮೋಡ ಕವಿದ ವಾತಾವರಣ (Rain News) ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಆಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಮಾ. 31ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡದ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಏ.1ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ಏ. 2ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮತ್ತು ಅಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಏ.3ರಂದು ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಏ.4ರಂದು ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ತಾಪಮಾನದ ಮುನ್ಸೂಚನೆ:
ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದ್ದು, ನಂತರದ ದಿನಗಳಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಮುಂದಿನ 3 ದಿನಗಳಲ್ಲಿ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯನ್ ಏರಿಕೆ, ನಂತರದ ದಿನಗಳಲ್ಲಿ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಈ ಸುದ್ದಿಯನ್ನೂ ಓದಿ | Health tips: ಹಲ್ಲು ಮೂಡುತ್ತಿರುವ ಪಾಪುವಿನ ತಲ್ಲಣಗಳೇನು?
ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ
ರಾಜ್ಯದಲ್ಲಿ ಶುಕ್ರವಾರ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 41 ಡಿ.ಸೆ. ದಾಖಲಾಗಿದೆ. ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 17.5 ಡಿ.ಸೆ. ದಾಖಲಾಗಿದೆ.